ಮಡಂತ್ಯಾರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಜೆಸಿಐ ಮಡಂತ್ಯಾರು, ಹೈಸ್ಕೂಲ್ ರಿಯೂನಿಯನ್ ಮಡಂತ್ಯಾರು ಹಾಗೂ ರೋಟರಿ ಕ್ಲಬ್ ಮಡಂತ್ಯಾರು ಇವರ ಜಂಟಿ ಸಹಯೋಗದೊಂದಿಗೆ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆಇಲ್ಲಿನ ವೈದ್ಯರ ತಂಡದಿಂದ ಮಡಂತ್ಯಾರು ಮುಖ್ಯರಸ್ತೆಯ ಶ್ರೀ ದುರ್ಗಾ ಕಾಂಪ್ಲೆಕ್ಸ್ ಕಲಾ (ಆಶೀರ್ವಾದ್) ಸಭಾಂಗಣದಲ್ಲಿ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಭಾನುವಾರ ಜರುಗಿತು.
https://chat.whatsapp.com/FCEnlTkAKCC0MGPhXtX4i4
ರೋಟರಿ ಕ್ಲಬ್ ಮಡಂತ್ಯಾರು ಇದರ ಅಧ್ಯಕ್ಷರಾದ ಮ್ಯಾಕ್ಸಿಮ್ ಆಲ್ಬುಕರ್ಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಣ್ಣಿನ ಹಾಗೂ ದಂತದ ಪರೀಕ್ಷೆ ಕಾಲಕಾಲಕ್ಕೆ ಮಾಡುವುದು ಅತ್ಯಗತ್ಯ. ಇನ್ನು ಮುಂದೆಯೂ ನಿರಂತರವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇಂತಹ ಕಾರ್ಯಕ್ರಮಗಳನ್ನು ನಡೆಸಲಿ, ಸಾರ್ವಜನಿಕರಿಗೂ ಇದರ ಉಪಯೋಗವಾಗಲಿ ಎಂದು ಹೇಳಿದರು.
ಜೆಸಿಐ ಮಡಂತ್ಯಾರು ಇದರ ಅಧ್ಯಕ್ಷರಾದ ಸಾಯಿಸುಮ ಎಂ. ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ಜನರ ಆರೋಗ್ಯದ ಸಮಸ್ಯೆಗಳಿಗೆ ಹತ್ತಿರದಲ್ಲೇ ಪರಿಹಾರ ಸಿಗಬೇಕೆನ್ನುವ ಉದ್ದೇಶದಲ್ಲಿ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಪಿ.ಆರ್.ಒ ಭರತ್ ಕುಮಾರ್ ಶಿಬಿರದಲ್ಲಿ ಲಭ್ಯವಿರುವ ದಂತ ವೈದ್ಯಕೀಯ ಸೇವೆಗಳಾದ ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು ಹಾಗೂ ಶುಚಿಗೊಳಿಸುವುದು, ರೋಗಗ್ರಸ್ಥ ಹಲ್ಲುಗಳನ್ನು ಕೀಳುವುದರ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ಜನರ ಆರೋಗ್ಯದ ದೃಷ್ಟಿಯಿಂದ ಶಾಖೆಗಳ ವಾರ್ಷಿಕೋತ್ಸವದಂದು ಉಚಿತ ಆರೋಗ್ಯ ಶಿಬಿರ ಆಯೋಜನೆ ಮಾಡುತ್ತಿದೆ. ನಮ್ಮ ಆರೋಗ್ಯದ ಬಗ್ಗೆ ಮುಂಜಾಗರೂಕತೆ ವಹಿಸಿದರೆ ನಮ್ಮ ಆರೋಗ್ಯ ಒಳ್ಳೆಯ ರೀತಿಯಲ್ಲಿರುತ್ತದೆ. ಮುಂದಿನ ದಿನಗಳಲ್ಲಿ ಇಂತಹ ಶಿಬಿರಗಳನ್ನು ನಿರಂತರವಾಗಿ ಆಯೋಜಿಸಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ಎಲ್ಲರ ಸಹಕಾರ ಕೋರಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರಾದ ಡಾ.ಮಿಫ್ರಾ, ಡಾ.ಖಾಲಿದ್, ಡಾ.ಗಿರಿಧರ್, ಹೈಸ್ಕೂಲ್ ರಿಯೂನಿಯನ್ ಮಡಂತ್ಯಾರು ಇದರ ಕಾರ್ಯದರ್ಶಿ ಸಂಪತ್ ಕುಮಾರ್ ಹಾಗೂ ದುರ್ಗಾ ಕಾಂಪ್ಲೆಕ್ಸ್ ಮಾಲೀಕರಾದ ಎಮ್ ತಿಮ್ಮಪ್ಪ ಗೌಡ ಉಪಸ್ಥಿತರಿದ್ದರು. ೧೪೦ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ, ದಂತ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಉಚಿತ ಔಷಧ ವಿತರಿಸಲಾಯಿತು. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖಾಧಿಕಾರಿ ಧನಲಕ್ಷ್ಮೀ ಸ್ವಾಗತಿಸಿ, ಪ್ರಭಾರ ಶಾಖಾಧಿಕಾರಿ ಪ್ರಜ್ಞಾ ವಂದಿಸಿದರು. ಶಾಖೆಯ ಸಿಬ್ಬಂದಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


