Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಅಧ್ಯಯನ ಪ್ರವಾಸ
    News

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಅಧ್ಯಯನ ಪ್ರವಾಸ

    adminBy adminJanuary 22, 2026

    ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪ್ರಗತಿ ಕುರಿತ ಅಧ್ಯಯನಕ್ಕಾಗಿ ನಬಾರ್ಡ್‌ ಅಧಿಕಾರಿಗಳ ತಂಡ ಆಗಮಿಸಿ ವಿವಿಧ ಕಾರ್ಯಚಟುವಟಿಕೆಗಳ ಮಾಹಿತಿ ಪಡೆಯಿತು. ದೇಶದ ವಿವಿಧ ರಾಜ್ಯಗಳ 45 ಮಂದಿ ಸದಸ್ಯರ ತಂಡವು ಮಂಗಳವಾರ ಬಂಗಾಡಿಗೆ ಭೇಟಿ ನೀಡಿದ್ದು, PACS  As MSC ಯೋಜನೆಯಡಿ ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಕಡಿರುದ್ಯಾವರ ಶಾಖೆಗೆ ಭೇಟಿ ನೀಡಿತು.

    https://chat.whatsapp.com/FCEnlTkAKCC0MGPhXtX4i4
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಹರೀಶ್‌ ಸಾಲ್ಯಾನ್‌ ಅವರು ಅಧಿಕಾರಿಗಳಿಗೆ ಸಂಘದ ಸಾಲ ವಿತರಣೆಯ ಯೋಜನೆಗಳು, ಸಂಘದ ಮೂಲಕ ನಡೆಯುತ್ತಿರುವ ಮಾರಾಟ ವ್ಯವಹಾರಗಳ ಸಮಗ್ರವಾದ ಮಾಹಿತಿ ನೀಡಿದರು.
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 1200 ಕೋಟಿ ರೂ. ವ್ಯವಹಾರ ನಡೆಸಿದ್ದು, 6720 ಸದಸ್ಯರನ್ನು ಹೊಂದಿದ್ದು 203 ಕೋಟಿಗೂ ಅಧಿಕ ಸಾಲ ನೀಡಲಾಗಿದೆ. ಇದರಲ್ಲಿ 75.28 ಕೋಟಿಗೂ ಮಿಕ್ಕಿ ಕೃಷಿ ಸಾಲ ವಿತರಿಸಲಾಗಿದೆ. 127.72 ಕೋಟಿ ರೂ. ಕೃಷಿಯೇತರ ಸಾಲ ವಿತರಿಸಲಾಗಿದೆ. 2024-25ನೇ ಸಾಲಿನಲ್ಲಿ 4.81 ಕೋಟಿ ರೂ. ಲಾಭ ಗಳಿಸಿದೆ. ಸಂಘವು ಪೂರ್ಣ ಪ್ರಮಾಣದ ಮುಖ್ಯ ಕಚೇರಿ ಸೇರಿ ಒಂಬತ್ತು ಶಾಖೆಗಳನ್ನು ಹೊಂದಿದೆ. ಸಂಘದ ಎಲ್ಲಾ ವ್ಯವಹಾರಗಳ ಯಶಸ್ವಿ ಅನುಷ್ಠಾನಗಳ ಮೂಲಕ ನಬಾರ್ಡ್‌ನ ಗಮನ ಸೆಳೆದಿದ್ದು, ಸಂಘದ ಉನ್ನತ ಯಶಸ್ವಿಗೆ ಅಪೆಕ್ಸ್‌ ಬ್ಯಾಂಕಿನ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಜಿಲ್ಲಾಮಟ್ಟದ ಉತ್ತಮ ಸಹಕಾರ ಸಂಘವೆಂಬ ಪ್ರಶಸ್ತಿಯನ್ನು ಪಡೆದುಕೊಂಡಿದೆ.
    ನಬಾರ್ಡ್‌ ಸಂಸ್ಥೆಯ ಡಿಡಿಎಂ ಯೋಗೀಶ್‌, ಸಂಘದ ಉಪಾಧ್ಯಕ್ಷರಾದ ಆನಂದ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಗೌಡ ಹಾಗೂ ಸಂಘದ ಸಿಬ್ಬಂದಿಗಳು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Adhyana pravasa Bangadi Sahakari Vyavasayika Sahakara Sangha Nabaard
    Previous Articleಸಾರಸ್ವತ ಸೌಹಾರ್ದ ಸಹಕಾರಿ ಸಂಘದಲ್ಲಿ ಮಣಿಪಾಲ್ ಆರೋಗ್ಯ ಸುರಕ್ಷಾ ಯೋಜನೆ ನೋಂದಣಿ ಅವಕಾಶ
    Next Article ಅಟಲ್ ಪಿಂಚಣಿ ಯೋಜನೆ 2031ರವರೆಗೆ ವಿಸ್ತರಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.