ಗುರುವಾಯನಕೆರೆ: ಇಲ್ಲಿನ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 21ನೇ ನೂತನ ಶಾಖೆ ವಾಮಂಜೂರಿನಲ್ಲಿ ಆರಂಭವಾಗಲಿದ್ದು ಫೆಬ್ರವರಿ 5ರಂದು ಉದ್ಘಾಟನೆಗೊಳ್ಳಲಿದೆ.
https://chat.whatsapp.com/FCEnlTkAKCC0MGPhXtX4i4
ವಾಮಂಜೂರಿನ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಒಂದನೇ ಮಹಡಿಯಲ್ಲಿ ಫೆ.5ರ ಗುರುವಾರ ಬೆಳಗ್ಗೆ 10.30ಕ್ಕೆ ಶಾಸಕರಾದ ಡಾ.ವೈ.ಭರತ್ ಶೆಟ್ಟಿಯವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಅಜಿತ್ ಜಿ.ಶೆಟ್ಟಿ ಕೋರ್ಯಾರು ಅಧ್ಯಕ್ಷತೆ ವಹಿಸಲಿದ್ದಾರೆ. ವಾಮಂಜೂರು ಚರ್ಚ್‌ನ ಧರ್ಮಗುರುಗಳಾದ ರೆವರೆಂಡ್ ಫಾದರ್ ಜೇಮ್ಸ್ ಡಿಸೋಜ, ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶೆಡ್ಡೆ ಮಂಜುನಾಥ ಭಂಡಾರಿ, ಮೂಡುಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎಸ್.ಶಿವರಾಮ ಮಲ್ಲಿ, ಗುರುಪುರ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಶೆಡ್ಡೆ, ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಓಂಪ್ರಕಾಶ್ ಶೆಟ್ಟಿ ವಾಮಂಜೂರು, ನಿಕಟಪೂರ್ವ ಕಾರ್ಪೊರೇಟರ್ ಹೇಮಲತಾ ರಘು ಸಾಲ್ಯಾನ್, ಗುರುಪುರ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ದಿನೇಶ್ ಜೆ.ಕರ್ಕೇರ ಸಾನದ ಮನೆ, ಹಿಂದುಸ್ಥಾನ್ ಬಾವಾ ಬಿಲ್ಡರ್ಸ್‌ನ ಮೊಹಮ್ಮದ್ ಇಸ್ಮಾಯಿಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಘದ ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ನಿರ್ದೇಶಕರಾದ ಎಸ್.ಜಯರಾಮ ಶೆಟ್ಟಿ, ಎಂ.ಗೋಪಾಲಕೃಷ್ಣ ಶೆಟ್ಟಿ, ಸೀತಾರಾಮ ಶೆಟ್ಟಿ ಬಿ., ಬಾಲಕೃಷ್ಣ ಪೂಂಜ ಎಚ್, ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ ಎ, ಕೃಷ್ಣ ರೈ ಟಿ., ಎಂ.ಜಯರಾಮ ಭಂಡಾರಿ ಧರ್ಮಸ್ಥಳ, ಪುರಂದರ ಶೆಟ್ಟಿ ಪಾಡ್ಯಾರು, ಮಂಜುನಾಥ ರೈ, ರಾಜು ಶೆಟ್ಟಿ ಬೆಂಗತ್ಯಾರು, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ರಾಜೇಶ್ ಶೆಟ್ಟಿ ನವಶಕ್ತಿ, ಪ್ರಕಾಶ್ ಶೆಟ್ಟಿ ನೊಚ್ಚ, ಸಾರಿಕಾ ಶೆಟ್ಟಿ, ವಿಜಯ ಬಿ.ಶೆಟ್ಟಿ, ಶಾಖಾ ಪ್ರಬಂಧಕರಾದ ವಿಶ್ವನಾಥ ಶೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಳ್ಳಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

