Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 100ನೇ ಉಚಿತ ಆರೋಗ್ಯ ಶಿಬಿರ
    News

    ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 100ನೇ ಉಚಿತ ಆರೋಗ್ಯ ಶಿಬಿರ

    adminBy adminJanuary 31, 2026

    ಸ್ಥಾಪನಾ ದಿನಾಚರಣೆ ಪ್ರಯುಕ್ತ ಆರೋಗ್ಯ ಸೇವಾ ಸಂಗಮ, ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ಹಾಗೂ ರಕ್ತದಾನ ಶಿಬಿರ

    ಮಂಗಳೂರು: ನಗರದ ಪಡೀಲ್‌ನಲ್ಲಿ ಆಡಳಿತ ಕಚೇರಿ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಥಾಪನಾ ದಿನಾಚರಣೆಯ ಪ್ರಯುಕ್ತ ಆರೋಗ್ಯ ಸೇವಾ ಸಂಗಮ “ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ಹಾಗೂ ರಕ್ತದಾನ ಶಿಬಿರ , ವೈದ್ಯ ಸೇವಾ ಸಾಧಕರ ಅಭಿನಂದನಾ ಕಾರ್ಯಕ್ರಮ ಹಾಗೂ 14ನೇ ವಾರ್ಷಿಕೋತ್ಸವ ಸಮಾರಂಭʼʼ ಫೆಬ್ರವರಿ 1ರ ಭಾನುವಾರ ಬೆಳಗ್ಗೆ 9ರಿಂದ ಆತ್ಮಶಕ್ತಿ ಸೌಧ ಪಡೀಲ್, ಮಂಗಳೂರು ಇಲ್ಲಿ ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್‌ನ ಸದಸ್ಯ ಬಿ.ಕೆ. ಹರಿಪ್ರಸಾದ್ ಇವರ ಉಪಸ್ಥಿತಿಯಲ್ಲಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವೈದ್ಯ ಸೇವಾ ಸಾಧಕರ ಸನ್ಮಾನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

    ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್‌ ಸದಸ್ಯ ಮಂಜುನಾಥ್ ಭಂಡಾರಿ, ಮಂಗಳೂರು ವಿದ್ಯುಚ್ಛಕ್ತಿ ಪ್ರಸರಣ ನಿಗಮದ ಅಧ್ಯಕ್ಷ ಹರೀಶ್ ಕುಮಾರ್, ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರಾದ ಡಾ| ಶಿವಪ್ರಕಾಶ್ ಡಿ.ಎಸ್., ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಉಪಾಧ್ಯಕ್ಷ ಡಾ| ಎಂ. ಅಣ್ಣಯ್ಯ ಕುಲಾಲ್ ಉಳ್ತೂರು, ಅಸೋಸಿಯೇಶನ್ ಆಫ್ ಮೆಡಿಕಲ್ ಕನ್ಸಲ್ಪೆಂಟ್ಸ್, ಮಂಗಳೂರು ಇದರ ಅಧ್ಯಕ್ಷ ಡಾ| ಆನಂದ ಬಂಗೇರ, ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕದ ಅಧ್ಯಕ್ಷ ಡಾ|ಸದಾನಂದ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಪ್ರತಿಭಾ ಕುಳಾಯಿ, ಕರ್ನಾಟಕ ಲೋಕಾಯುಕ್ತದ ಆರಕ್ಷಕ ಅಧೀಕ್ಷಕ ಕುಮಾರ್‌ಚಂದ್ರ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಜೈರಾಜ್ ಹೆಚ್. ಸೋಮಸುಂದರಂ, ದ.ಕ.ಜಿಲ್ಲೆಯ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಅಧ್ಯಕ್ಷರಾದ ಸಿ.ಎ.ಶಾಂತಾರಾಮ್ ಶೆಟ್ಟಿ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಶಶಿಕುಮಾರ್ ರೈ ಬಾಲ್ಯೊಟ್ಟು, ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ಅಧ್ಯಕ್ಷರಾದ ಸುರೇಶ್ ಅಮೀನ್ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


    14ನೇ ವಾರ್ಷಿಕೋತ್ಸವ ಹಾಗೂ ಸಮಾರೋಪ ಸಮಾರಂಭವು ಚಿತ್ತರಂಜನ್‌ ಬೋಳಾರ್‌ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 12.30ರಿಂದ ನಡೆಯಲಿದ್ದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆರೋಗ್ಯ ಕಾರ್ಯಕರ್ತರು ಹಾಗೂ ಆರೋಗ್ಯ ಸಹಾಯಕರುಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ| ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಂಗಳೂರಿನ ಮಾಜಿ ಮೇಯರ್‌ ಶಶಿಧರ್ ಹೆಗ್ಡೆ, ಕಂಕನಾಡಿ ಬ್ರಹ್ಮಬೈರ್ದಕಳ ಗರಡಿ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಕೆ, ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಟಿ.ಪ್ರವೀಣ್‌ಚಂದ್ರ ಆಳ್ವ, ಅನಿಲ್ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ದ.ಕ.ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್.ರಮೇಶ್ ಭಾಗವಹಿಸಲಿದ್ದಾರೆ.
    ಸಂಘದ ವತಿಯಿಂದ ನಡೆಯುವ 100ನೇ ಉಚಿತ ಶಿಬಿರವಾಗಿದ್ದು, ಯೆನಪೊಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸಮುದಾಯ ದಂತ ಆರೋಗ್ಯ ವಿಭಾಗ, ದೇರಳಕಟ್ಟೆ, ಕಣಚೂರು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ನಾಟೆಕಲ್, ಮಂಗಳೂರು, ಪ್ರಾದೇಶಿಕ ರಕ್ತಪೂರಣ ಕೇಂದ್ರ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಂಗಳೂರು, ಬಸವ ಆಕ್ಯೂ ಅಕಾಡೆಮಿ ಬೆಂಗಳೂರು ಇವರುಗಳ ಸಹಯೋಗದೊಂದಿಗೆ ಶಿಬಿರ ಆಯೋಜನೆ ಮಾಡಲಾಗಿದೆ. ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ, ಎನ್.ಜಿ.ವರ್ಲ್ಡ್‌ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಹಾಗೂ ಮಡಿಲು ಸೇವಾ ತಂಡ ಪಡೀಲ್ ಇವರು ಸಹಯೋಗದೊಂದಿಗೆ ಜರುಗಲಿದೆ.

    ಏನೇನು ತಪಾಸಣೆ?
    ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ ತಪಾಸಣೆ, ಕೀಲು ಮತ್ತು ಗಂಟುನೋವು ತಪಾಸಣೆ, ಸ್ವಯಂಪ್ರೇರಿತ ರಕ್ತದಾನ, ಸ್ತನ ಪರೀಕ್ಷೆ (Mammography) 40 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮಾತ್ರ), ಗರ್ಭಕಂಠದ ತಪಾಸಣೆ(Pap Smear test) : 21 ವರ್ಷ ಮೇಲ್ಪಟ್ಟ (ಮದುವೆಯಾದ ಮಹಿಳೆಯರಿಗೆ ಮಾತ್ರ), ಆಯುರ್ವೇದ ಶಿಬಿರ: ವೈದ್ಯಕೀಯ ಸಮಾಲೋಚನೆ ಮತ್ತು ಉಚಿತ ಔಷಧ ವಿತರಣೆ, ದಂತ ತಪಾಸಣೆ, ಶುಚೀಕರಣ, ಭರ್ತಿಗೊಳಿಸುವಿಕೆ(Filling) ಚಿಕಿತ್ಸೆಗೆ ಒಳಪಡದ ಹಲ್ಲುಗಳನ್ನು ಕೀಳಿಸುವುದು, ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ, ಯುರೋಪ್ಲೆಮೆಂಟ್ರಿ : ಮೂತ್ರನಾಳದ ಪ್ರಮಾಣ ಪರೀಕ್ಷೆ PSA ಶಿಬಿರ , 50 ವರ್ಷ ಮೇಲ್ಪಟ್ಟ ಪುರುಷರಿಗೆ, ಕಲರ್ ಥೆರಪಿ : ಕಲರ್ ಥೆರಪಿ, ಸೀಡ್ ಥೆರಪಿ ಆಕ್ಯೂ ಪ್ರೆಷರ್ ಮೂಲಕ ಚಿಕಿತ್ಸೆ ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿದೆ ಎಂದು ಆತ್ಮ ಶಕ್ತಿ ಸಹಕಾರಿ ಸಂಘ ನಿಯಮಿತ ಇದರ ಮುಖ್ಯ ಕಾರ್ಯನಿರ್ವಣಾಧಿಕಾರಿ ಸೌಮ್ಯ ವಿಜಯ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    Arogya Sangama Atmashakti Sowdha Atmashakti vividhoddesha sahakara sangha Mammography Swaastya Sankalpa
    Previous Articleಸಾಲ ಕೊಡುವಾಗ ದಾಖಲೆ ಸರಿಯಾಗಿ ಪರಿಶೀಲಿಸಿ
    Next Article ಉತ್ತಮ ನಾಯಕತ್ವ, ಸಾಮಾಜಿಕ ಚಿಂತನೆಯ ಆಡಳಿತ ಮಂಡಳಿ, ಸಿಬ್ಬಂದಿಯಿಂದ ಆತ್ಮಶಕ್ತಿ ಸಹಕಾರಿ ಸಂಘಕ್ಕೆ ಜನಮೆಚ್ಚುಗೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.