Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸ್ವಚ್ಛ ಪರಿಸರದಿಂದ ಆರೋಗ್ಯಕರ ಸಮಾಜ
    News

    ಸ್ವಚ್ಛ ಪರಿಸರದಿಂದ ಆರೋಗ್ಯಕರ ಸಮಾಜ

    adminBy adminFebruary 2, 2026

    ವಿಶ್ವಕರ್ಮ ಸಹಕಾರ ಬ್ಯಾಂಕ್‌ ಆಯೋಜನೆಯ 23ನೇ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮರೋಳಿ ಗ್ರಾಮ ಸಮಿತಿ ಅಧ್ಯಕ್ಷ ಚಂದ್ರನಾಥ ಅತ್ತಾವರ ಅಭಿಪ್ರಾಯ

    ಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕಿನ ಮಂಗಳೂರು ಶಾಖೆಯ ಆಶ್ರಯದಲ್ಲಿ ‘ಸ್ವಚ್ಛತಾ ಹೀ ಸೇವಾ’ ಧ್ಯೇಯದೊಂದಿಗೆ 23ನೇ ಸ್ವಚ್ಛತಾ ಹೀ ಸೇವಾ ಶ್ರಮದಾನ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಪರಿಸರದಲ್ಲಿ ಭಾನುವಾರ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಮರೋಳಿ ಗ್ರಾಮ ಸಮಿತಿ ಅಧ್ಯಕ್ಷರಾದ ಚಂದ್ರನಾಥ ಅತ್ತಾವರ ಮಾತನಾಡಿ, ಸಮಾಜದಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದರೆ ಸ್ವಸ್ಥ ಹಾಗೂ ಆರೋಗ್ಯಕರ ಸಮಾಜ ನಿರ್ಮಿಸುವುದಕ್ಕೆ ಸಾಧ್ಯ. ಪರಿಸರ ಸ್ವಚ್ಛವಾಗಿದ್ದರೆ ನಾವೂ ಆರೋಗ್ಯಯುತ ಹಾಗೂ ನೆಮ್ಮದಿಯ ಜೀವನವನ್ನು ಕಂಡುಕೊಳ್ಳಲು ಸಾಧ್ಯವಿದೆ. ವಿಶ್ವಕರ್ಮ ಸಹಕಾರ ಬ್ಯಾಂಕಿನ ಸೇವಾಕಾರ್ಯ ಸಮಾಜಕ್ಕೆ ಉತ್ತಮ ಮಾದರಿ ಎಂದು ಶ್ಲಾಘಿಸಿದರು.
    ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯ ಕೇಶವ ಮರೋಳಿ ಮಾತನಾಡಿ, ವಿಶ್ವಕರ್ಮ ಸಹಕಾರ ಬ್ಯಾಂಕಿನ ಈ ಸ್ವಚ್ಛತಾ ಕಾರ್ಯಕ್ರಮ ಅನೇಕ ಸಂಘಟನೆಗಳಿಗೆ ಪ್ರೇರಣಾ ಶಕ್ತಿಯಾಗಲಿ ಹಾಗೂ ಇದು ಸ್ವಚ್ಛ ಭಾರತ ಪರಿಕಲ್ಪನೆಯ ಆಶಯಕ್ಕೆ ಹಸಿರು ನಿಶಾನೆಯಾಗಲಿ ಎಂದು ಆಶಿಸಿದರು.
    ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ. ಎಸ್. ಆರ್. ಹರೀಶ್ ಆಚಾರ್ಯ, ಮರೋಳಿ ಗ್ರಾಮ ಸಮಿತಿಯ ಅಧ್ಯಕ್ಷ ಚಂದ್ರನಾಥ ಅತ್ತಾವರ, ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯ ಕೇಶವ ಮರೋಳಿ ಹಾಗೂ ಯಮುನಾ ರೆಸಿಡೆನ್ಸಿ ನಿವಾಸಿಗಳ ಸಂಘದ ಹಿರಿಯರಾದ ಎಸ್.ಸಿ. ವರ್ಮ ಶ್ರಮದಾನಕ್ಕೆ ಚಾಲನೆ ನೀಡಿದರು.

     


    ಬಳಿಕ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಹಾಗೂ ಶ್ರೀ ರಾಮ ಭಜನಾ ಮಂದಿರ ಪರಿಸರಗಳಲ್ಲಿ ಸ್ವಚ್ಛತಾ ಶ್ರಮದಾನ ಜರುಗಿತು. ವಿಶ್ವಕರ್ಮ ಸಹಕಾರ ಬ್ಯಾಂಕಿನ ನಿರ್ದೇಶಕ ಹರಿಪ್ರಸಾದ್, ವ್ಯವಸ್ಥಾಪಕ ನಿರ್ದೇಶಕ ವಸಂತ ಅಡ್ಯಂತಾಯ, ಗ್ರಾಮ ಸಮಿತಿಯ ಕೋಶಾಧಿಕಾರಿ ವಾಸುದೇವ ಮರೋಳಿ, ಕಾರ್ಯದರ್ಶಿ ಗಣೇಶ್ ಬಾಕಿಮಾರ್, ಹಿಂದೂ ಯುವಸೇನೆ ಸೂರ್ಯನಾರಾಯಣ ಶಾಖೆಯ ಅಧ್ಯಕ್ಷ ಲಿಖಿನ್ ಶೆಟ್ಟಿ, ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಸೋಮಶೇಖರ ದೇವಾಡಿಗ, ಜೀವನ್ ಆಚಾರ್ಯ, ಅರುಣ್ ಶೆಟ್ಟಿ ಮರೋಳಿ, ಮೋಹನ್ ಮರೋಳಿ, ಭಾಸ್ಕರ ಮರೋಳಿ, ಪ್ರಶಾಂತ್ ಪ್ರಭು, ಮಾಲತಿ ಶೆಟ್ಟಿ, ಯಮುನಾ ರೆಸಿಡೆನ್ಸಿ ಕಟ್ಟಡ ಮಾಲಕರ ಸಂಘದ ಪದಾಧಿಕಾರಿಗಳಾದ ರಾಧಾಕೃಷ್ಣ ರೈ, ಸಂಜೀವ ರೈ, ಪುರಂದರ ಶೆಟ್ಟಿ, ಸುದೀಪ್ ಬಂಗೇರ, ರಘುನಾಥ, ಮಂಜುನಾಥ್ ಕುಲಕರ್ಣಿ, ಬಾಲಕೃಷ್ಣ ಶೆಟ್ಟಿ, ವಾಣಿ ರೈ, ಮಮತಾ ರೋಹಿತ್ ರಾಜ್, ಲೀಲಾ ಶೆಣೈ ಮತ್ತಿತರರು ಸ್ವಚ್ಛತಾ ಕಾರ್ಯಕರ್ತರಾಗಿ ಭಾಗವಹಿಸಿದರು. ಕರಸೇವಾ ಬಳಗ ಶ್ರೀ ಸೂರ್ಯನಾರಾಯಣ ದೇವಸ್ಥಾನ ಮರೋಳಿ, ಶ್ರೀ ರಾಮ ಭಜನಾ ಮಂದಿರ ಮರೋಳಿ, ಮರೋಳಿ ಗ್ರಾಮ ಸಮಿತಿ, ಹಿಂದೂ ಯುವಸೇನೆ ಸೂರ್ಯನಾರಾಯಣ ಶಾಖೆ, ಮರೋಳಿ ಯುವಕ ಮಂಡಲ, ವಿಶ್ವ ಹಿಂದೂ ಪರಿಷತ್, ಬಜರಂಗದಳ ಅಭಿಮನ್ಯು ಶಾಖೆ ಇದರ ಕಾರ್ಯಕರ್ತರು, ಬ್ಯಾಂಕಿನ ಸದಸ್ಯರು, ಗ್ರಾಹಕರು ಹಾಗೂ ಸಿಬಂದಿಗಳು ಸ್ವಯಂಸೇವಕರಾಗಿ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Maroli Shree Suryanarayana temple Sahakar Se Swachhatha Abhiyan Shree Rama Bhajana Mandira Maroli Swacchatha Hi Seva Vishwakarma Sahakara Bank Limited
    Previous Articleಉತ್ತಮ ನಾಯಕತ್ವ, ಸಾಮಾಜಿಕ ಚಿಂತನೆಯ ಆಡಳಿತ ಮಂಡಳಿ, ಸಿಬ್ಬಂದಿಯಿಂದ ಆತ್ಮಶಕ್ತಿ ಸಹಕಾರಿ ಸಂಘಕ್ಕೆ ಜನಮೆಚ್ಚುಗೆ
    Next Article ಸಹಕಾರ ಸಂಘಗಳಿಗೆ ತೆರಿಗೆ ವಿನಾಯಿತಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.