Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ಮೂರನೇ ವಾರ್ಷಿಕೋತ್ಸವ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ಮೂರನೇ ವಾರ್ಷಿಕೋತ್ಸವ

    adminBy adminFebruary 6, 2026
    filter: 0; fileterIntensity: 0.000000; filterMask: 0; captureOrientation: 0; hdrForward: 0; shaking: 0.015224; highlight: 1; algolist: 0; multi-frame: 1; brp_mask: 8; brp_del_th: 0.0024,0.0001; brp_del_sen: 0.1000,0.1000; delta:null; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 259.0;aec_lux_index: 0;albedo: ;confidence: ;motionLevel: 0;weatherinfo: null;temperature: 43;zeissColor: bright;

    ಬೆಳ್ತಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ಮೂರನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಅಳದಂಗಡಿ ಶಾಖೆಯಲ್ಲಿ ಜರುಗಿತು.

    https://chat.whatsapp.com/FCEnlTkAKCC0MGPhXtX4i4
    ಸಂಘದ ಸದಸ್ಯರಾದ ತುಳುಪುಲೆ, ರಾಜು ಪೂಜಾರಿ, ವಿಶ್ವನಾಥ್ ಕುದ್ಯಾಡಿ, ಪೂರ್ಣೇಶ್, ರತ್ನಾಕರ ಕೋಟ್ಯಾನ್, ಅಜರುದ್ದೀನ್, ದಯಾಕರ ರೈ, ಜಲಜಾ ವಿ.ಸಾಲ್ಯಾನ್, ಶೋಭಾ ಹಾಗೂ ನೀಲಯ್ಯ ಗೌಡ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸಂಘದ ಸದಸ್ಯರಾದ ಮನೋಹರ ಶೆಟ್ಟಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಿಬ್ಬಂದಿಗಳು ಗುಣಮಟ್ಟದ ಬ್ಯಾಂಕಿಂಗ್ ಸೇವೆ ನೀಡುತ್ತಿದ್ದಾರೆ. ಇನ್ನೂ ಹೆಚ್ಚಿನ ಸೇವೆಯನ್ನು ನೀಡುವಂತಾಗಲಿ ಎಂದು ಶುಭ ಹಾರೈಸಿದರು. ನೀಲಯ್ಯ ಗೌಡ ಮಾತನಾಡಿ ಶಾಖೆ ಆರಂಭದಿಂದಲೂ ಉತ್ತಮ ವ್ಯವಹಾರ ನಡೆಸುತ್ತಿದ್ದು, ಸಂಘದ ಸದಸ್ಯರ ಬೇಡಿಕೆಗಳನ್ನು ಈಡೇರಿಸುತ್ತಿದೆ ಎಂದು ಶ್ಲಾಘಿಸಿದರು. ಸುರೇಖಾ ಮಾತನಾಡಿ ಉಳಿತಾಯದ ದೃಷ್ಟಿಯಿಂದ ಆವರ್ತನ ಖಾತೆಯಲ್ಲಿ ಹಣ ಉಳಿತಾಯ ಮಾಡಿದ್ದು, ಇದರಿಂದ ನನಗೆ ತುಂಬಾ ಪ್ರಯೋಜನವಾಗಿದೆ ಎಂದು ಸಂಘದ ಉಳಿತಾಯ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
    ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಇಂದಿಗೆ ೩೩ ಶಾಖೆಯನ್ನು ಹೊಂದಲು ಸಾಧ್ಯವಾಗಿದೆ. ಸಂಘದ ಪಾಲು ಬಂಡವಾಳವು ೨೨.೫ ಲಕ್ಷದಿಂದ ಪ್ರಾರಂಭವಾಗಿ ಇಂದು ೩೦೦ ಕೋಟಿ ಠೇವಣಿಯಾಗಲು ಗ್ರಾಹಕರೇ ಕಾರಣ. ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿದೆ. ಆರೋಗ್ಯ ಶಿಬಿರವನ್ನೂ ಹಮ್ಮಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲಿ ಅಳದಂಗಡಿ ಶಾಖೆಯಲ್ಲೂ ಆರೋಗ್ಯ ಶಿಬಿರ ನಡೆಸಲ್ಲಿದ್ದೇವೆ ಎಂದು ತಿಳಿಸಿದರು.
    ಸಂಘದ ನಿರ್ದೇಶಕರಾದ ಗೋಪಾಲ್ ಎಮ್. ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು. ಸಂಘದ ಅಳದಂಗಡಿ ಶಾಖೆಯ ಶಾಖಾಧಿಕಾರಿ ಕಾವ್ಯಶ್ರೀ ಎಸ್ ಸ್ವಾಗತಿಸಿ, ಶಾಖೆಯ ಸಿಬ್ಬಂದಿ ಲೋಶಿತ ವಂದಿಸಿದರು. ಶಾಖೆಯ ಸಿಬ್ಬಂದಿ ಸ್ವಾತಿ ಎಸ್ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Aladangady At Atmashakti vividhoddesha sahakara sangha Chitharanjan Bolar Grahakara Sabhe
    Previous Articleವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ
    Next Article ಫೆ.8ರಂದು ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.