Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಹಿರಿಯ ಸದಸ್ಯರ ಮನೆಗೆ ಬಂದು ಬ್ಯಾಂಕಿಂಗ್ ಸೇವೆ ನೀಡುತ್ತಿರುವುದು ಶ್ಲಾಘನೀಯ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಹಿರಿಯ ಸದಸ್ಯರ ಮನೆಗೆ ಬಂದು ಬ್ಯಾಂಕಿಂಗ್ ಸೇವೆ ನೀಡುತ್ತಿರುವುದು ಶ್ಲಾಘನೀಯ

    adminBy adminFebruary 7, 2026

    ಬೆಂದೂರ್‌ವೆಲ್‌ ಶಾಖೆಯ ೧೪ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆಯಲ್ಲಿ ಶಂಕರ ಶೆಟ್ಟಿ ಅಭಿಪ್ರಾಯ

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಹಿರಿಯ ಸದಸ್ಯರ ಮನೆಗೆ ಬಂದು ಬ್ಯಾಂಕಿಂಗ್ ಸೇವೆ ನೀಡುತ್ತಿರುವುದು ಶ್ಲಾಘನೀಯ. ಹಿರಿಯ ನಾಗರಿಕರಿಗೆ ಇದರಿಂದ ತುಂಬಾ ಪ್ರಯೋಜನವಾಗುತ್ತಿದೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸದಸ್ಯರಾದ ಶಂಕರ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರುವೆಲ್ ಶಾಖೆಯ 14ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯಲ್ಲಿ ಅವರು ಮಾತನಾಡಿದರು.

    https://chat.whatsapp.com/FCEnlTkAKCC0MGPhXtX4i4
    ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ಕೃತೀಶ್ ಕುಮಾರ್, ಪುಷ್ಪಲತಾ ಕೆ., ಮಾಧವ ಕೋಟ್ಯಾನ್, ಗೋಪಾಲ್ ಸುವರ್ಣ, ಕರುಣಾನಂದ ರಾವ್ ಹಾಗೂ ಅನಂತರಾಮ್ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಘದ ಸದಸ್ಯರಾದ ಕೃತೀಶ್ ಕುಮಾರ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ನೇತೃತ್ವದಲ್ಲಿ ಸಂಘದ ಸದಸ್ಯರಿಗೆ ಉತ್ತಮವಾದ ಸೇವೆ ನೀಡುತ್ತಿದೆ. ಬೆಂದೂರ್‌ವೆಲ್ ಶಾಖೆಯಲ್ಲಿ ಗ್ರಾಹಕರ ಸಂಖ್ಯೆ ಜಾಸ್ತಿ ಇದ್ದು ಇಲ್ಲಿ ಸ್ಥಳದ ಕೊರತೆ ಇರುವುದರಿಂದ ಶಾಖೆಯನ್ನು ವಿಸ್ತರಿಸಿದರೆ ಗ್ರಾಹಕರಿಗೆ ತುಂಬ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು. ಸದಸ್ಯರಾದ ಮಾಧವ ಕೋಟ್ಯಾನ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅತಿ ಕಡಿಮೆ ಅವಧಿಯಲ್ಲಿ 33 ಶಾಖೆ ತೆರೆದಿರುವುದು ಅಭಿನಂದನಾರ್ಹ. ಇದಕ್ಕಾಗಿ ಶ್ರಮಿಸಿದ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಗಳನ್ನು ತಿಳಿಸಿದರು. ವಾಮನ್ ಮೈಂದಾನ್ ಹಾಗೂ ಲಿಯೋ ಆಂಬ್ರೋಝ್ ಸಂಘದ ಬೆಳವಣಿಗೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.


    ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಇಂದು 33 ಶಾಖೆ ಹೊಂದಲು ಕಾರಣವಾಗಿದೆ. ಸಂಘದ ಪಾಲು ಬಂಡವಾಳವು 22.5 ಲಕ್ಷದಿಂದ ಪ್ರಾರಂಭವಾಗಿ ಇಂದು 300 ಕೋಟಿ ಠೇವಣಿಯಾಗಲು ಗ್ರಾಹಕರ ಸಹಕಾರದಿಂದ ಸಾಧ್ಯವಾಗಿದೆ. ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿದೆ. ಸಂಘದ ಗ್ರಾಹಕರ ಆರೋಗ್ಯದ ಕಾಳಜಿಯಿಂದ ಆರೋಗ್ಯ ಶಿಬಿರವನ್ನು ನಿರಂತರವಾಗಿ ಹಮ್ಮಿಕೊಂಡು ಬರುತ್ತಿದೆ. ಫೆ.8ರಂದು ಸಂಘದ ಬೆಂದೂರ್‌ವೆಲ್ ಶಾಖೆಯ ವತಿಯಿಂದ ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿ ತಿಳಿಸಿದರು.
    ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ನಿರ್ದೇಶಕರಾದ ಆನಂದ ಎಸ್ ಕೊಂಡಾಣ, ಸೀತಾರಾಮ್ ಎನ್., ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ಬಿ.ಪಿ ದಿವಾಕರ, ಗೋಪಾಲ್ ಎಂ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು. ಸಂಘದ ಬೆಂದೂರುವೆಲ್ ಶಾಖೆಯ ಸಿಬ್ಬಂದಿ ನಿಶ್ಚಿತ ಸಾಲಿಯಾನ್ ಸ್ವಾಗತಿಸಿ, ಶಾಖೆಯ ಸಿಬ್ಬಂದಿ ಪವಿತ್ರ ವಂದಿಸಿದರು. ಹಿರಿಯ ಶಾಖಾಧಿಕಾರಿ ಸೌಮ್ಯಲತಾ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    Atmashakti vividhoddesha sahakara sangha Bendoorwel Branch Chitharanjan Bolar Co Operative ministry Cooperative Cooperative Department
    Previous Articleಸ್ಟಾರ್ಟ್‌ಅಪ್ ಇಂಡಿಯಾ ವ್ಯಾಪ್ತಿಗೆ ಸಹಕಾರ ಸಂಘಗಳು
    Next Article ಶ್ರೀಶಾ ಸೌಹಾರ್ದ ಸೊಸೈಟಿಯ ವತಿಯಿಂದ ಸ್ವಚ್ಛತಾ ಅಭಿಯಾನ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.