Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಫೆಬ್ರವರಿ 21ರಂದು ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮ
    News

    ಫೆಬ್ರವರಿ 21ರಂದು ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮ

    adminBy adminFebruary 16, 2026

    ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ನಿ., ಬಿ.ಸಿ. ರೋಡ್, ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪತ್ತಿನ, ಮೂರ್ತೆದಾರರ ಮತ್ತು ಇತರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮ ಫೆಬ್ರವರಿ 21ರ ಶನಿವಾರ ಬೆಳಗ್ಗೆ ಪೂರ್ವಾಹ್ನ 9ರಿಂದ ಬಿ.ಸಿ.ರೋಡ್‌ನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4
    ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಕೆ.ಸಂಜೀವ ಪೂಜಾರಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾ‌ರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಬಿ.ಪದ್ಮಶೇಖರ ಜೈನ್, ಸವಿತಾ ಎನ್.ಶೆಟ್ಟಿ, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್. ರಮೇಶ್, ಮಂಗಳೂರು ಉಪ ವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳದ ಉಪಾಧ್ಯಕ್ಷರಾದ ರಾಜೇಶ್ ಸುವರ್ಣ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಶೋರ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ನ ಉಪಾಧ್ಯಕ್ಷರಾದ ನೀಲಯ ಎಂ. ಅಗರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ವಿ. ಹಿರೇಮಠ, ಆಡಳಿತ ಮಂಡಳಿ ನಿರ್ದೇಶಕರಾದ ವಿನಯಕುಮಾರ್ ಸೂರಿಂಜೆ, ಡಾ. ಎಸ್.ಆರ್. ಹರೀಶ್ ಆಚಾರ್ಯ, ಚಿತ್ತರಂಜನ್ ಬೋಳಾರ್, ಸುಧಾಕರ ಪಿ. ಶೆಟ್ಟಿ, ಮಂಜುನಾಥ ಎನ್. ಎಸ್., ಸತೀಶ್ ಕೆ, ವಿಷ್ಣು ಭಟ್, ಜೋಯ್ಲಸ್‌ ವಿಲ್‌ಫ್ರೆಡ್‌ ಡಿಸೋಜ, ಪ್ರವೀಣ್ ಪಿಂಟೋ, ಸಾವಿತ್ರಿ ರೈ ಕೆ. ಪಾಲ್ಗೊಳ್ಳಲಿದ್ದಾರೆ.
    ಸಾಲ ನೀಡುವಾಗ ಪಡೆದುಕೊಳ್ಳಬೇಕಾದ ವಿವಿಧ ರೀತಿಯ ಕರಾರು ಪತ್ರಗಳು, ಹಾಗೂ ಸಾಲ ವಸೂಲಾತಿ ಬಗ್ಗೆ ಆರ್ಬಿಟ್ರೇಶನ್, ಅಮಲ್ದಾರಿ ಮತ್ತು ಜಪ್ತಿ ಪ್ರಕ್ರಿಯೆಗಳ ಬಗ್ಗೆ ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ವಸಂತ ಅಡ್ಯಂತಾಯ, ಸಂಸ್ಥೆಗಳ ವ್ಯವಹಾರ ಅಭಿವೃದ್ಧಿಯಲ್ಲಿ ನಿರ್ದೇಶಕರು ಮತ್ತು ಸಿಬ್ಬಂದಿಗಳ ಪಾತ್ರದ ಬಗ್ಗೆ ಆಟೋಮೇಶನ್‌ ಕ್ಲೌಡ್‌ ಸೊಲ್ಯುಶನ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌ ರಾಮ, ಸಹಕಾರ ಸಂಘಗಳ ಕಾಯ್ದೆಯ ಇತ್ತೀಚಿನ ತಿದ್ದುಪಡಿಗಳು, ಯಶಸ್ವಿನಿ ಯೋಜನೆ ಅನುಷ್ಠಾನದ ಕುರಿತು ಸಹಕಾರ ಸಂಘಗಳ ಉಪನಿಂಬಧಕರ ಕಚೇರಿಯ ಅಧೀಕ್ಷಕ ಎನ್‌.ಜೆ ಗೋಪಾಲ್ ವಿಷಯ ಮಂಡನೆ ಮಾಡಿ ತರಬೇತಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    dakshina Kannada Jilla Murtedaarara Sahakara Mahamandala Dakshina kannada jilla Sahakara Union
    Previous Articleಫೆಬ್ರವರಿ 18ರಂದು ವಿಜಯಪುರ ಜಿಲ್ಲಾ ಸೌಹಾರ್ದ ಸಹಕಾರಿಗಳ ಸಮಾವೇಶ
    Next Article ನಾಳೆ ಬೆಂಗಳೂರಿನಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.