ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕು ಬೆಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 17ರಂದು ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರುಗಳು ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
https://chat.whatsapp.com/FCEnlTkAKCC0MGPhXtX4i4
ಬೆಂಗಳೂರು ಜಿಲ್ಲಾ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಅಶೋಕ ಇವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರು ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷರಾದ ಮಂಜುನಾಥ ಇವರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯದರ್ಶಿ ಹಾಗೂ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಅಶ್ವಥ್ ನಾರಾಯಣ್ ಹಾಗೂ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಪುಂಡಲಿಕ್ ಸಾಧೂರೆರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ತರಬೇತಿ ಕಾರ್ಯಕ್ರಮದಲ್ಲಿ ಲೆಕ್ಕಪತ್ರಗಳ ನಿರ್ವಹಣೆ ಕುರಿತು ಅತಿಥಿ ಉಪನ್ಯಾಸವನ್ನು ಬಸವನಗುಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಹೆಚ್ಆರ್ ಮಂಜುನಾಥ್ ನೀಡಲಿದ್ದಾರೆ. ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕರಾದ ನಾಗರಾಜಯ್ಯ ಇವರು ಮುಖ್ಯ ಕಾರ್ಯನಿರ್ವಾಹಕರ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಅತಿಥಿ ಉಪನ್ಯಾಸ ನೀಡಲಿದ್ದಾರೆ. ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

