Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಶ್ವಕರ್ಮ ಸಹಕಾರ ಬ್ಯಾಂಕಿನ ಸಮಾಜಮುಖಿ ಚಟುವಟಿಕೆ ಶ್ಲಾಘನೀಯ
    News

    ವಿಶ್ವಕರ್ಮ ಸಹಕಾರ ಬ್ಯಾಂಕಿನ ಸಮಾಜಮುಖಿ ಚಟುವಟಿಕೆ ಶ್ಲಾಘನೀಯ

    adminBy adminFebruary 23, 2026

    ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಆಚಾರ್ಯ ಹೇಳಿಕೆ

    ಮೂಡುಬಿದಿರೆ: ವಿಶ್ವಕರ್ಮ ಬ್ಯಾಂಕ್ ಬ್ಯಾಂಕಿಂಗ್ ಚಟುವಟಿಕೆಗಳೊಂದಿಗೆ ಸಮಾಜಮುಖಿಯಾಗಿ ಸ್ವಚ್ಛತೆಯಂತಹ ಪರಿಸರ ಜಾಗೃತಿಯ ಗುರುತರವಾದ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಕೃಷ್ಣ ಆಚಾರ್ಯ ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಧ್ಯೇಯದಂತೆ ಭಾನುವಾರ ನಡೆದ 30ನೇ ಸ್ವಚ್ಛ ಭಾರತ್ ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು.
    ಬಾಲಕೃಷ್ಣ ಆಚಾರ್ಯ ಅವರ ಜೊತೆ ವಿಶ್ವಕರ್ಮ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಸೀತಾರಾಮ ಆಚಾರ್ಯ ಬೆಳುವಾಯಿ ಹಾಗೂ ರೋಟರಿ ಕ್ಲಬ್ ಟೆಂಪಲ್ ಟೌನ್ ಮೂಡುಬಿದಿರೆ ಇದರ ಅಧ್ಯಕ್ಷ ಹರೀಶ್ ಎಂ.ಕೆ. ಹಸಿರು ನಿಶಾನೆ ತೋರುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು.
    ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನ ಪರಿಸರ, ಜೈನಪೇಟೆ ಹಾಗೂ ಆಲಂಗಾರು ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.


    ಬ್ಯಾಂಕಿನ ಹಿರಿಯ ನಿರ್ದೇಶಕರಾದ ಡಿ.ಭಾಸ್ಕರ್ ಆಚಾರ್ಯ, ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಪದಾಧಿಕಾರಿಗಳು ಹಾಗೂ ಸದಸ್ಯರು, ಕಾಳಿಕಾಂಬಾ ಸೇವಾ ಸಮಿತಿ ಅಧ್ಯಕ್ಷ ಶ್ರೀನಾಥ್ ಆಚಾರ್ಯ ಹಾಗೂ ಸದಸ್ಯರು, ಪ್ರೆಸ್ ಕ್ಲಬ್ ಮೂಡುಬಿದಿರೆ ಇದರ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು, ರೋಟರಿ ಕ್ಲಬ್ ಟೆಂಪಲ್ ಟೌನ್ ಮೂಡುಬಿದಿರೆ, ಜವನೆರ್ ಬೆದ್ರ ಫೌಂಡೇಶನ್ ಮೂಡುಬಿದಿರೆ, ಕಾಳಿಕಾಂಬಾ ಮಹಿಳಾ ಸಮಿತಿ, ಗುರು ಕಾಷ್ಠ ಶಿಲ್ಪಕಲಾ ಸಂಘ, ಚಿನ್ನದ ಕೆಲಸಗಾರರ ಹಿತರಕ್ಷಣಾ ವೇದಿಕೆ, ಕಾಳಿಕಾಂಬಾ ಭಜನಾ ಮಂಡಳಿ, ಪ್ರೇರಣಾ ಸೇವಾ ಟ್ರಸ್ಟ್ ಮುಂತಾದ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ವಿಶ್ವಕರ್ಮ ಸಹಕಾರ ಬ್ಯಾಂಕಿನ ಕಾರ್ಕಳ ಶಾಖೆಯ ಶಾಖಾಧಿಕಾರಿ ನಿತಿನ್ ಕೆ. ಹಾಗೂ ಸಿಬ್ಬಂದಿಗಳು, ಬ್ಯಾಂಕಿನ ಸದಸ್ಯರು, ಗ್ರಾಹಕರು ಹಾಗೂ ಹಿತೈಷಿಗಳು ಭಾಗವಹಿಸಿ ಶ್ರಮದಾನದಲ್ಲಿ ಕೈ ಜೋಡಿಸಿ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Mudubidre Press Club Rotary Club Temple Town Mudubidre Shree Gurumuta Kalikamba Temple Swacchatha Hi Seva Vishwakarma Sahakara Bank Limited
    Previous Articleವಿಶ್ವಕರ್ಮ ಸಹಕಾರ ಬ್ಯಾಂಕಿನ ಸಮಾಜಮುಖಿ ಚಟುವಟಿಕೆ ಶ್ಲಾಘನೀಯ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‌ಭಾಗ್ ಶಾಖೆಯ ವತಿಯಿಂದ ಕುದ್ರೋಳಿಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಶಿಬಿರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.