Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆಯ ಐದನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆಯ ಐದನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ

    adminBy adminFebruary 25, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆಯ ಐದನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ತುಂಬೆ ಶಾಖೆಯಲ್ಲಿ ಜರುಗಿತು.

    https://chat.whatsapp.com/FCEnlTkAKCC0MGPhXtX4i4

    ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಗಣೇಶ್ ಸುವರ್ಣ, ಹೊನ್ನಪ್ಪ ಪೂಜಾರಿ, ಅಬ್ದುಲ್ ಹಕೀಮ್, ಅಶೋಕ್ ಕುಲಾಲ್, ಭಾಸ್ಕರ್ ಕುಲಾಲ್ ಹಾಗೂ ಭಾರತಿ ಇವರು ಉದ್ಘಾಟಿಸಿದರು.
    ಸಂಘದ ಸದಸ್ಯರಾದ ಹೊನ್ನಪ್ಪ ಪೂಜಾರಿ ಮಾತನಾಡಿ ಸಂಘದ ಸಿಬ್ಬಂದಿಗಳು ನಗುಮುಖದ ಸೇವೆಯೊಂದಿಗೆ ಉತ್ತಮ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಿಗುವ ಎಲ್ಲಾ ವಿಧದ ಬ್ಯಾಂಕಿಂಗ್ ಸೇವಾ ಸೌಲಭ್ಯಗಳು ಸಂಘದಲ್ಲಿ ಲಭ್ಯವಿದ್ದು, ಇನ್ನೂ ಹೆಚ್ಚಿನ ಸೇವಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯುವಂತಾಗಲಿ ಎಂದು ಹಾರೈಸಿದರು.
    ಸದಸ್ಯರಾದ ಭಾಸ್ಕರ್ ಕುಲಾಲ್ ಮಾತನಾಡಿ ಸಂಘದಲ್ಲಿ ಬ್ಯಾಂಕಿಂಗ್ ಸೇವೆಯ ಜೊತೆಯಲ್ಲಿ ಕ್ಲಪ್ತ ಸಮಯದಲ್ಲಿ ಠಸೆ ಪೇಪರ್ ಸೇವೆಯೂ ದೊರೆಯುತ್ತಿದ್ದು, ಈ ನಿಟ್ಟಿನಲ್ಲಿ ಆತ್ಮಶಕ್ತಿ ಸಂಘವು ಶೀಘ್ರಗತಿಯ ಸೇವೆ ನೀಡುವುದರ ಮೂಲಕ ಗ್ರಾಹಕ ಸ್ನೇಹಿ ಸಂಘವಾಗಿದೆ ಎಂದು ತಿಳಿಸಿದರು.
    ಸದಸ್ಯರಾದ ಭಾರತಿ ಮಾತನಾಡಿ ಸಂಘದ ಹಿರಿಯ ಸದಸ್ಯರಿಗೆ ಮನೆಯ ಬಾಗಿಲಿಗೆ ಬಂದು ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವುದರಿಂದ ಹಿರಿಯ ನಾಗರಿಕರಿಗೆ ತುಂಬಾ ಅನುಕೂಲವಾಗಿದೆ ಎಂದು ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
    ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಸಂಘದ ತುಂಬೆ ಶಾಖೆಯಲ್ಲಿ ಉತ್ತಮ ರೀತಿಯಲ್ಲಿ ನಿರಖು ಠೇವಣಿ ಸಂಗ್ರಹ ಹಾಗೂ ಆಭರಣ ಸಾಲ ವಿತರಿಸಿದ್ದು, ಆಭರಣ ಸಾಲದ ಮರುಪಾವತಿಯು ಉತ್ತಮ ರೀತಿಯಲ್ಲಿದೆ. ಸಂಘವು ಆರೋಗ್ಯ ಶಿಬಿರವನ್ನು ಸಹ ನಿರಂತರವಾಗಿ ಹಮ್ಮಿಕೊಂಡು ಬರುತ್ತಿದ್ದು, ಕೇವಲ ಹಣಕಾಸಿನ ವ್ಯವಹಾರವಲ್ಲದೆ ಜನರ ಆರೋಗ್ಯದ ಬಗ್ಗೆಯೂ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬರುತ್ತಿದೆ. ಸಂಘವು ಒಟ್ಟು ರೂ.300 ಕೋಟಿಗೂ ಮಿಕ್ಕಿ ದುಡಿಯುವ ಬಂಡವಾಳ ಹೊಂದಿದ್ದು, ಸಂಘವು ಸದಸ್ಯರ ಸಹಕಾರದಿಂದ ಉತ್ತಮ ರೀತಿಯಲ್ಲಿ ಅಭಿವೃದ್ದಿಯತ್ತ ಸಾಗುತ್ತಿದೆ. ಸಹಕಾರಿ ಸಂಘದ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿಯ ಪ್ರಯೋಜನ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು. ಸಂಘದ ಮೇಲೆ ವಿಶ್ವಾಸವನ್ನಿಟ್ಟು ಸಂಘದ ಬೆಳವಣಿಗೆಗೆ ನಿರಂತರವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
    ಸಂಘದ ನಿರ್ದೇಶಕರಾದ ಗೋಪಾಲ್ ಎಮ್ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.
    ಶಾಖೆಯ ಸಿಬ್ಬಂದಿ ಭವ್ಯಾ ಸ್ವಾಗತಿಸಿ, ಶಾಖಾಧಿಕಾರಿ ಶ್ರೀಮತಿ ಧನಲಕ್ಷ್ಮಿ ವಂದಿಸಿದರು. ಶಾಖೆಯ ಸಿಬ್ಬಂದಿ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakti vividhoddesha sahakara sangha Ganesh Suvarna Grahakara Sabhe Tumbe Branch
    Previous Articleಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ
    Next Article ಮಾರ್ಚ್ 1ರಂದು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಉಪ್ಪಿನಂಗಡಿ ಶಾಖೆಯ ಸ್ಥಳಾಂತರ ಸಮಾರಂಭ, ವಿದ್ಯಾರ್ಥಿವೇತನ ವಿತರಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.