ಬಂಟ್ವಾಳ: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ಉಂಟಾಗಿರುವ ಗೊಂದಲಗಳನ್ನು ಪರಿಹರಿಸಲು ಗ್ರಾಂ ಪಂಚಾಯತ್‌ಗಳಲ್ಲಿರುವ ಮಳೆಮಾಪನ ಕೇಂದ್ರಗಳನ್ನು ಸುಸ್ಥಿತಿಯಲ್ಲಿ ಇಡುವಂತೆ ಕ್ರಮ ಕೈಗೊಳ್ಳಲು ತೋಟಗಾರಿಕಾ ಇಲಾಖೆಗೆ ಸಿದ್ದಕಟ್ಟೆ ಪಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಅವರು ಮನವಿ ಮಾಡಿದ್ದಾರೆ.
https://chat.whatsapp.com/FCEnlTkAKCC0MGPhXtX4i4
2024-25ನೇ ಸಾಲಿಗೆ ಸಂಬಂಧಿಸಿದಂತೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಪ್ರೀಮಿಯಂ ಪಾವತಿಸಿದ ರೈತರಿಗೆ ಬಿಡುಗಡೆಯಾದ ಪರಿಹಾರದಲ್ಲಿ ತುಂಬಾ ಗೊಂದಲಗಳು ಆಗಿರುತ್ತವೆ. ಈ ಬಗ್ಗೆ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಟೆಂಡರ್ ವಹಿಸಿದ ಏಜೆನ್ಸಿಗಳಲ್ಲಿ ವಿಚಾರಿಸಿದಾಗ ಮಳೆಮಾಪನ ಕೇಂದ್ರಗಳಲ್ಲಿ ಬಿದ್ದಿರುವ ಮಳೆಯ ಪ್ರಮಾಣವನ್ನು ಆಧರಿಸಿ ಪರಿಹಾರ ನೀಡಲಾಗಿದೆ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ. ಆದರೆ ಹೆಚ್ಚಿನ ಗ್ರಾಮ ಪಂಚಾಯತ್ ಗಳಲ್ಲಿರುವ ಮಳೆಮಾಪನ ಕೇಂದ್ರಗಳು ಚಲಾವಣೆ ಇಲ್ಲದೇ ದುಸ್ಥಿತಿಯಲ್ಲಿ ಇರುವುದಾಗಿ ತಿಳಿದುಬಂದಿದೆ. ಇದರಿಂದ ಕರಾವಳಿಯ ಕೆಲವೊಂದು ತಾಲೂಕುಗಳಲ್ಲಿ ರೈತರು ಪಾವತಿಸಿದ ಪ್ರೀಮಿಯಂಗಿಂತಲೂ ಕಡಿಮೆ ಪರಿಹಾರ ದೊರೆತಿದೆ. ಇದರಿಂದ ಸಾವಿರಾರು ರೈತರಿಗೆ ಸಮರ್ಪಕ ಪರಿಹಾರ ದೊರಕದೇ ರೈತರು ಸರಕಾರದ ಅಸಮರ್ಪಕ ಧೋರಣೆಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ ಹಾಗೂ ಇದನ್ನೇ ನಂಬಿಕೊಂಡಿರುವ ರೈತರು ಕಂಗಾಲಾಗಿದ್ದಾರೆ. ಈ ಕಾರಣದಿಂದ ಪ್ರತಿ ಗ್ರಾಮ ಪಂಚಾಯತ್ ನಲ್ಲಿರುವ ಮಳೆಮಾಪನ ಕೇಂದ್ರಗಳನ್ನು ಪಂಚಾಯತ್ ಮಟ್ಟದ ಕಂದಾಯ ಅಥವಾ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಸುಪರ್ದಿಯಲ್ಲಿ ಪ್ರತಿ ತಿಂಗಳಿಗೊಮ್ಮೆ ಪರಿವೀಕ್ಷಣೆ ಮಾಡಿಸಿ ಸುಸ್ಥಿತಿಯಲ್ಲಿ ಇಡಲು ಅಗತ್ಯ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವಂತೆ ಪ್ರಭಾಕರ ಪ್ರಭು ಮನವಿ ಸಲ್ಲಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

