ಬಂಟ್ವಾಳ: ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವತಿಯಿಂದ ಭಾನುವಾರ ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಸಹಕಾರಿ ಕ್ರೀಡೋತ್ಸವದಲ್ಲಿ ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದೆ.
https://chat.whatsapp.com/FCEnlTkAKCC0MGPhXtX4i4
ಕ್ರಿಕೆಟ್‌ನಲ್ಲಿ ದ್ವಿತೀಯ ಸ್ಥಾನ ಪಡೆದ ಸಮಾಜ ಸೇವಾ ಸಹಕಾರಿ ಸಂಘ, ಪುರುಷರ ಹಗ್ಗಜಗ್ಗಾಟದಲ್ಲಿ ಕೂಡ ದ್ವಿತೀಯ ಸ್ಥಾನ ಪಡೆಯಿತು. ವಾಲಿಬಾಲ್‌ನಲ್ಲಿ ತೃತೀಯ ಸ್ಥಾನ ಪಡೆಯಿತು. ಮಕ್ಕಳ ಚಿತ್ರಕಲೆ ಸ್ಪರ್ಧೆಯ ಒಂದರಿಂದ ನಾಲ್ಕನೇ ತರಗತಿ ವಿಭಾಗದಲ್ಲಿ ಸಮಾಜ ಸೇವಾ ಸಹಕಾರಿ ಸಂಘವನ್ನು ಪ್ರತಿನಿಧಿಸಿದ್ದ ವಿದ್ಯಾ ಪಿ.ಬಿ, 5-7 ತರಗತಿ ವಿಭಾಗದಲ್ಲಿ ಆದ್ಯಾ ಪಿ.ಬಿ ಪ್ರಥಮ ಸ್ಥಾನ ಪಡೆದರೆ, 8-10ನೇ ತರಗತಿ ವಿಭಾಗದಲ್ಲಿ ಚಿರಾಗ್ ತೃತೀಯ ಸ್ಥಾನ ಪಡೆದರು. ವೇಗದ ನಡಿಗೆಯಲ್ಲಿ ಸಮಾಜ ಸೇವಾ ಸಹಕಾರಿ ಸಂಘದ ಸವಿತಾ ದ್ವಿತೀಯ ಸ್ಥಾನ ಪಡೆದರು.
ಕ್ರೀಡೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ ವಿಜೇತರಾದ ಸಮಾಜ ಸೇವಾ ಸಹಕಾರಿ ಸಂಘದ ಎಲ್ಲ ಸಿಬ್ಬಂದಿ, ಆಡಳಿತ ಮಂಡಳಿ ಸದಸ್ಯರನ್ನು ಬ್ಯಾಂಕಿನ ಅಧ್ಯಕ್ಷರಾದ ಸುರೇಶ್ ಕುಲಾಲ್ ಅಭಿನಂದಿಸಿದ್ದಾರೆ.

ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

