Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಾಣಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ರಸಪ್ರಶ್ನೆ ಪ್ರಶಸ್ತಿ
    News

    ಕಾಣಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ರಸಪ್ರಶ್ನೆ ಪ್ರಶಸ್ತಿ

    adminBy adminMarch 2, 2026

    ಮಂಗಳೂರು: ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಭಾನುವಾರ ಮಂಗಳೂರಿನ ಅಡ್ಯಾರ್‌ ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದ ಸಹಕಾರಿ ಕ್ರೀಡೋತ್ಸವದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾಣಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಥಮ ಬಹುಮಾನ ತಮ್ಮದಾಗಿಸಿಕೊಂಡಿದೆ.

    https://chat.whatsapp.com/FCEnlTkAKCC0MGPhXtX4i4
    ಮೂರು ಸುತ್ತುಗಳಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಡಬ ತಾಲೂಕಿನ ಕಾಣಿಯೂರು ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ್ಪರ್ಧಿಸಿದ್ದ ಸಂಘದ ಅಧ್ಯಕ್ಷರಾದ ಸುರೇಶ್‌ ಓಡಬಾಯಿ ಹಾಗೂ ವಿನಯ್‌ ಕುಮಾರ್‌ ಅವರು ಪ್ರಥಮ ಸ್ಥಾನ ಪಡೆದರು. ಮಂಗಳೂರು ಯೆಯ್ಯಾಡಿಯ ಪ್ರಣವ ಸೌಹಾರ್ದ ಸಹಕಾರಿ ಸಂಘವು ದ್ವಿತೀಯ ಸ್ಥಾನ ಪಡೆಯಿತು. ವಿಟ್ಲ ಗ್ರಾಮೀಣ ಸಹಕಾರಿ ಸಂಘ ತೃತೀಯ ಸ್ಥಾನ ಪಡೆಯಿತು. ಒಟ್ಟು ಹದಿನೇಳು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸಹಕಾರಿ ಕ್ಷೇತ್ರ, ಪ್ರಚಲಿತ ವಿದ್ಯಮಾನ ಹಾಗೂ ಸಾಮಾನ್ಯ ಜ್ಞಾನದ ವಿಷಯದಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಮೋಹನ್‌ದಾಸ್‌ ಮರಕಡ ಕ್ವಿಜ್‌ ಮಾಸ್ಟರ್‌ ಆಗಿ ಸ್ಪರ್ಧೆಗಳನ್ನು ನಡೆಸಿಕೊಟ್ಟರು.

    ಬಹುಮಾನ ವಿತರಣಾ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪ್ರಕಾಶ್‌ ಪಿ.ಎಸ್‌, ಸಹಕಾರ ಭಾರತಿ ಮಂಗಳೂರು ಮಹಾನಗರ ಜಿಲ್ಲೆಯ ಅಧ್ಯಕ್ಷರಾದ ಜಿ.ಆರ್‌ ಪ್ರಸಾದ್‌,  ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಧಾಕರ ರೈ, ರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಮಂಗಳೂರು ಜನತಾ ಬಜಾರ್ ಅಧ್ಯಕ್ಷ ಪ್ರಸನ್ನ ಎಣ್ಮೂರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Kaniyuru Halu Utpadakara Sahakara SanghaHalu Utpa Sahakari Kreedotsava Suresh Odabayi
    Previous Articleಸಹಕಾರಿ ಬ್ಯಾಂಕ್‌ಗಳಿಂದ ಸ್ವಾವಲಂಬಿ ಬದುಕು
    Next Article ಸಹಕಾರಿ ಕ್ರೀಡೋತ್ಸವದಲ್ಲಿ ಕ್ಯಾಂಪ್ಕೊ ಕಾವು ತಂಡ ಪಾರಮ್ಯ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.