Close Menu
    Top News

    ಸ್ವಚ್ಛತೆಯ ಅರಿವು ಜಾಗೃತಿ ನಿರಂತರವಾಗಿರಲಿ

    March 16, 2026

    ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

    March 11, 2026

    ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಪ್ರಥಮ ವಾರ್ಷಿಕೋತ್ಸವ

    March 11, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸ್ವಚ್ಛತೆಯ ಅರಿವು ಜಾಗೃತಿ ನಿರಂತರವಾಗಿರಲಿ
    News

    ಸ್ವಚ್ಛತೆಯ ಅರಿವು ಜಾಗೃತಿ ನಿರಂತರವಾಗಿರಲಿ

    adminBy adminMarch 16, 2026

    ವಿಶ್ವಕರ್ಮ ಬ್ಯಾಂಕ್‌ ಉಡುಪಿ ಶಾಖೆ ವತಿಯಿಂದ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ ಆಶಯ

    ಉಡುಪಿ: ಸ್ವಚ್ಛ ಹಾಗೂ ಸ್ವಸ್ಥ ಪರಿಸರವನ್ನು ನಿರ್ಮಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲೂ ಸ್ವಚ್ಛತೆಯ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವಕರ್ಮ ಬ್ಯಾಂಕ್ ನಿರಂತರವಾಗಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಸುತ್ಯರ್ಹವಾದುದು. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಈ ಕಾರ್ಯದಲ್ಲಿ ಕೈ ಜೋಡಿಸುವ ಮೂಲಕ ಸ್ವಚ್ಛ ಉಡುಪಿ ನಿರ್ಮಾಣ ಕಾರ್ಯದಲ್ಲಿ ಭಾಗಿದಾರರಾಗಬೇಕೆಂದು ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ಅವರು ವಿಶ್ವಕರ್ಮ ಬ್ಯಾಂಕಿನ ಉಡುಪಿ ಶಾಖೆಯ ವತಿಯಿಂದ ಸ್ವಚ್ಛತಾ ಹೀ ಸೇವಾ ಎಂಬ ಧ್ಯೇಯದೊಂದಿಗೆ ಉಡುಪಿಯಲ್ಲಿ ನಡೆದ 35ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾರ್ಷಲ್ ಫ್ರೆಂಡ್ಸ್ ಇದರ ಅಧ್ಯಕ ದಿನೇಶ್ ಹಾಗೂ ಅಶ್ವಥಕಟ್ಟೆ ಫ್ರೆಂಡ್ಸ್ ಇದರ ಗೌರವ ಸಲಹೆಗಾರರಾದ ಕಿಶೋರ್ ಹಸಿರು ನಿಶಾನೆ ತೋರಿಸಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಡುಪಿ ನಗರದ ಕೃಷಿ ಕೇಂದ್ರ, ಬಾಳಿಗಾ ಆಸ್ಪತ್ರೆ ರಸ್ತೆ, ದೊಡ್ಡಣಗುಡ್ಡೆ ಪರಿಸರದಲ್ಲಿ ಸ್ವಚ್ಛತೆಯ ಜಾಗೃತಿಯ ನಿಟ್ಟಿನಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು.


    ವಿಶ್ವಕರ್ಮ ಬ್ಯಾಂಕಿನ ಉಪಾದ್ಯಕ್ಷ ಜಗದೀಶ್ ಆಚಾರ್ಯ ಪಡುಪಣಂಬೂರು, ನಿರ್ದೇಶಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಮಾರ್ಷಲ್ ಫ್ರೆಂಡ್ಸ್ ಇದರ ಅಧ್ಯಕ್ಷ ದಿನೇಶ್ ಹಾಗೂ ಪದಾಧಿಕಾರಿಗಳಾದ ನವೀನ್, ರಾಜೇಶ್, ಸಂತೋಷ ಆಚಾರ್ಯ, ರಾಜೇಶ್ ನಾಯಕ್, ಪ್ರವೀಣ್ ನಾಯಕ್, ಶಾಮ್ ಆಚಾರ್ಯ, ಸತೀಶ್ ಆಚಾರ್ಯ, ಅಶ್ವಥಕಟ್ಟೆ ಫ್ರೆಂಡ್ಸ್ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಗೌರವ ಸಲಹೆಗಾರ ಕಿಶೋರ್ ಹಾಗೂ ಸದಸ್ಯರು, ನಮೋ ಫ್ರೆಂಡ್ಸ್ ಅಧ್ಯಕ್ಷ ರಾಜೇಶ್ ಹಾಗೂ ಸದಸ್ಯರು, ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಡುಪಿ ಶಾಖೆಯ ಶಾಖಾಧಿಕಾರಿ ಸುದೇಶ್ ಹಾಗೂ ಸಿಬ್ಬಂದಿಗಳು, ಬ್ಯಾಂಕಿನ ಸದಸ್ಯರು, ಗ್ರಾಹಕರು, ಹಿತೈಷಿಗಳು ಹಾಗೂ ಸ್ಥಳೀಯರು ಸ್ವಯಂಸೇವಕರಾಗಿ ಶ್ರಮದಾನದಲ್ಲಿ ಕೈ ಜೋಡಿಸಿ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    Ashwathakatte Friends Udupi Baliga Hospital Udupi Marshal Friends Udupi Swaccha Bharath Swacchatha Shramadana Vishwakarma Sahakara Bank Vishwakarma Sahakara Bank Swarna Sambhrama
    Previous Articleಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

    Related Posts

    ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

    March 11, 2026

    ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಪ್ರಥಮ ವಾರ್ಷಿಕೋತ್ಸವ

    March 11, 2026

    ದೇಶದಲ್ಲಿ 3.49 ಲಕ್ಷ ಸಹಕಾರ ಸಂಘಗಳು ಲಾಭದಾಯಕ: 47,688 ಸಂಘಗಳು ದಿವಾಳಿ ಹಂತದಲ್ಲಿ

    March 11, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆಯ ಅರಿವು ಜಾಗೃತಿ ನಿರಂತರವಾಗಿರಲಿ

    March 16, 2026

    ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

    March 11, 2026

    ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಪ್ರಥಮ ವಾರ್ಷಿಕೋತ್ಸವ

    March 11, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.