ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಕಾರ್ಯಕ್ಕೆ ಡಾ| ಆತ್ಮರಂಜನ್ ರೈ ಶ್ಲಾಘನೆ
ಬಂಟ್ವಾಳ: ವಿಶ್ವಕರ್ಮ ಸಹಕಾರ ಬ್ಯಾಂಕ್ ಆರ್ಥಿಕ ಚಟುವಟಿಕೆಗಳೊಂದಿಗೆ ಸಮಾಜಮುಖಿಯಾಗಿ ಸ್ವಚ್ಛತೆಯಂತಹ ಅವಶ್ಯ ಪರಿಸರ ಜಾಗೃತಿಯ ಕಾರ್ಯವನ್ನು ಯಾವುದೇ ತಾರತಮ್ಯವಿಲ್ಲದೆ ಎಲ್ಲರನ್ನೂ ಸೇರಿಸಿಕೊಂಡು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಡಾ| ಆತ್ಮರಂಜನ್ ರೈ ಹೇಳಿದರು.
https://chat.whatsapp.com/FCEnlTkAKCC0MGPhXtX4i4
ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಮೆಲ್ಕಾರ್ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ಭಾನುವಾರ ನಡೆದ 36ನೇ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಡಾ| ಆತ್ಮರಂಜನ್ ರೈ, ವ್ಯವಸ್ಥಾಪಕ ಸಮಿತಿ ಸದಸ್ಯರಾದ ಆಡಳಿತ ಸದಸ್ಯರಾದ ಪ್ರತಿಭಾ ಎ. ರೈ ಹಾಗೂ ಯುವಸಂಗಮ ಮೆಲ್ಕಾರ್ ಇದರ ಗೌರವಾಧ್ಯಕ್ಷ ಎಂ.ಎನ್. ಕುಮಾರ್ ಹಸಿರು ನಿಶಾನೆ ತೋರಿಸುವ ಮೂಲಕ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ ಪರಿಸರದಲ್ಲಿ ಪರಿಸರದಲ್ಲಿ ಸ್ವಚ್ಚತಾ ಶ್ರಮದಾನ ನಡೆಯಿತು.
ಬ್ಯಾಂಕಿನ ನಿರ್ದೇಶಕರಾದ ಜಯಪ್ರಕಾಶ್ ಆಚಾರ್ಯ ಭಂಡಾರಿಬೆಟ್ಟು, ಬಿಜು ಜಯ ಆಚಾರ್ಯ, ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ.ಪ್ರಶಾಂತ್ ಮಾರ್ಲ, ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಸದಸ್ಯರು, ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ವ್ಯವಸ್ಥಾಪಕ ಆನಂದ್, ಗ್ರಾಮ ಪಂಚಾಯತ್ ಸದಸ್ಯ ರಾಘವ ಪೂಜಾರಿ, ಯುವ ಸಂಗಮ ಮೆಲ್ಕಾರ್ ಇದರ ಸದಸ್ಯರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೆಲ್ಕಾರ್ ಇದರ ಸದಸ್ಯರು, ಶಾಖಾ ವ್ಯವಸ್ಥಾಪಕರಾದ ಉಷಾ ಕೆ ಹಾಗೂ ಸಿಬ್ಬಂದಿಗಳು, ಬ್ಯಾಂಕಿನ ಸದಸ್ಯರು, ಗ್ರಾಹಕರು ಸ್ವಯಂಸೇವಕರಾಗಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಸಹಕರಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com



