Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ದಾಖಲೆಯ 830 ಕೋಟಿ ರೂ. ವ್ಯವಹಾರ, 7.50 ಕೋಟಿ ರೂ. ಲಾಭ
    News

    ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ದಾಖಲೆಯ 830 ಕೋಟಿ ರೂ. ವ್ಯವಹಾರ, 7.50 ಕೋಟಿ ರೂ. ಲಾಭ

    adminBy adminApril 2, 2026
    Oplus_131072

    ಮಂಗಳೂರು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಸಾದ್ವಿ ಶ್ರೀ ಮಾತಾನಂದಮಯಿಯವರ ಗೌರವ ಮಾರ್ಗದರ್ಶನದೊಂದಿಗೆ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ಸಾಧನೆಯೊಂದಿಗೆ 830 ಕೋಟಿ ರೂ. ವ್ಯವಹಾರ ನಡೆಸಿದ್ದು, 7.50 ಕೋಟಿ ರೂ. ಲಾಭ ಗಳಿಸಿದೆ. ಕಳೆದ ಸಾಲಿಗೆ ಹೋಲಿಸಿದರೆ ಲಾಭ ಗಳಿಕೆಯಲ್ಲಿ ಶೇ.36.36 ಏರಿಕೆಯಾಗಿದೆ ಎಂದು ಸಂಘದ ಅಧ್ಯಕ್ಷ ಸಹಕಾರ ರತ್ನ ಎ.ಸುರೇಶ್ ರೈ ತಿಳಿಸಿದ್ದಾರೆ.

    https://chat.whatsapp.com/FCEnlTkAKCC0MGPhXtX4i4

    ಬುಧವಾರ ಸಂಘದ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನ ವ್ಯವಹಾರಕ್ಕಿಂತ ಈ ಬಾರಿ ಶೇ.23.20 ಏರಿಕೆಯಾಗಿದೆ. ಸಹಕಾರಿಯು 24 ಶಾಖೆಗಳ ಮೂಲಕ 458 ಕೋಟಿ ರೂ. ಠೇವಣಿ ಸಂಗ್ರಹಿಸಿದೆ. ಠೇವಣಿ ಸಂಗ್ರಹದಲ್ಲಿ ಕಳೆದ ಸಾಲಿಗಿಂತ ಶೇ.24.92 ಹೆಚ್ಚಳವಾಗಿದೆ. ಸಾಲ ಮತ್ತು ಮುಂಗಡ 372 ಕೋಟಿ ರೂ., ಪಾಲು ಬಂಡವಾಳ 2.52 ಕೋಟಿ ರೂ., ನಿಧಿಗಳು 21 ಕೋಟಿ ರೂ. ಮತ್ತು ದುಡಿಯುವ ಬಂಡವಾಳ 482 ಕೋಟಿ ಹೊಂದಿದೆ ಎಂದು ತಿಳಿಸಿದರು. 2011ರಲ್ಲಿ ಕಾರ್ಯಾರಂಭವಾದ ಒಡಿಯೂರು ಶ್ರೀ ವಿವಿದೋದ್ದೇಶ ಸೌಹಾರ್ದ ಸಹಕಾರ ಸಂಘದ ಎಲ್ಲ ಶಾಖೆಗಳು ಪ್ರಸ್ತುತ ಗಣಕೀಕೃತಗೊಂಡು ಕೋರ್ ಸಿಸ್ಟಂ ಸಾಫ್ಟ್‌ವೇರ್ ಅಳವಡಿಸಿದೆ. ಪ್ರತಿವರ್ಷ ಲೆಕ್ಕಪರಿಶೋಧನೆಯಲ್ಲಿ ಎ ಶ್ರೇಣಿ ಪಡೆಯುತ್ತಿದೆ. ಕಳೆದ ವರ್ಷ ಸದಸ್ಯರಿಗೆ ಶೇ.21 ಡಿವಿಡೆಂಡ್ ನೀಡಿದೆ. ಸಹಕಾರಿಯ ಆಡಳಿತ ಕಚೇರಿ ಮತ್ತು ಪಂಪ್‌ವೆಲ್ ಶಾಖೆಯು ಪಂಪ್‌ವೆಲ್‌ನಲ್ಲಿರುವ ಲೋಟಸ್ ಗ್ಯಾಲಕ್ಸಿಯಲ್ಲಿ ಸುಮಾರು 7 ಸಾವಿರ ಚದರಡಿಯ ವಿಶಾಲ ಕಟ್ಟಡ ಕೋಣೆಗಳನ್ನು ಸ್ವಂತಕ್ಕೆ ಖರೀದಿಸಿ, ಹವಾನಿಯಂತ್ರಿತ ಸುಸಜ್ಜಿತ ಆತ್ಯಾಧುನಿಕ ಸೌಲಭ್ಯಗಳೊಂದಿಗೆ ಕಾರ್ಯಾಚರಿಸುತ್ತಿದೆ. ಸಹಕಾರಿಯ ಐದು ಶಾಖೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿವೆ. ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಸಹಕಾರಿಯು ನಾಲ್ಕು ವರ್ಷಗಳಿಂದ ಉತ್ತಮ ಸೌಹಾರ್ದ ಪ್ರಶಸ್ತಿಯನ್ನು ಪಡೆದಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಸುಮಾರು 8 ಸಾವಿರ ಒಡಿಯೂರು ಶ್ರೀ ವಿಕಾಸವಾಹಿನಿ ಸ್ವಸಹಾಯ ಗುಂಪುಗಳಲ್ಲಿ ಸುಮಾರು 68 ಸಾವಿರಕ್ಕೂ ಹೆಚ್ಚು ಸದಸ್ಯರಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
    ಸಂಘದ ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ನಿರ್ದೇಶಕರಾದ ವೇಣುಗೋಪಾಲ ಮಾರ್ಲ, ಲೋಕನಾಥ ಶೆಟ್ಟಿ ಮಂಗಳೂರು, ಗಣಪತಿ ಭಟ್‌ ಸೇರಾಜೆ ಹಾಗೂ ಸಿಇಒ ದಯಾನಂದ ಶೆಟ್ಟಿ ಬಾಕ್ರಬೈಲು ಹಾಗೂ ಶಾಖಾ ವ್ಯವಸ್ಥಾಪಕರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    A Suresh Rai Banking Co Operative ministry Cooperative Department Lotus Galaxi Odiyuru Shree Vividhoddesha Souharda Co Operative Society
    Previous Articleಹೊಸ ಹಣಕಾಸು ವರ್ಷಕ್ಕೆ ಹಲವು ನಿಯಮಗಳಲ್ಲಿ ಬದಲಾವಣೆ
    Next Article ಗಂಗೊಳ್ಳಿ ಟೌನ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಸಾರ್ವಕಾಲಿಕ ಸಾಧನೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.