ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ 14ನೇ ವಾರ್ಷಿಕೋತ್ಸವ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಮಾಡೂರು, ಶ್ರೀ ಶಾಸ್ತಾರ ಬಳಗ, ಶ್ರೀ ಶಾಸ್ತಾರ ಮಹಿಳಾ ಮಂಡಳಿ ಮತ್ತು ಭಜಕ ವೃಂದ ಮಡ್ಯಾರ್ ಹಾಗೂ ಎನ್.ಜಿ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿ೦ದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವು ಮಾತೃಶ್ರೀ ಕಾಂಪ್ಲೆಕ್ಸ್, ಮಾಡೂರು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷ ತೆಯಲ್ಲಿ ಜರುಗಿತು.
https://chat.whatsapp.com/FCEnlTkAKCC0MGPhXtX4i4
ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇಲ್ಲಿನ ವೈದ್ಯರಾದ ಡಾ| ಇಮ್ರಾನ್ ಪಾಷಾ ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸತತ ನೂರಕ್ಕೂ ಮಿಕ್ಕಿ ಉಚಿತ ವೈದ್ಯಕೀಯ ಶಿಬಿರ ಆಯೋಜಿಸಿ, ಸಮಾಜದ ಎಲ್ಲಾ ಜನರಿಗೆ ಉಚಿತ ಸೇವೆ ಒದಗಿಸುತ್ತ ಬಂದಿದೆ. ಒಂದೇ ದಿನದಲ್ಲಿ ಮಾಡೂರು ಮತ್ತು ಕಸಿಹಿತ್ಲು, ಜಪ್ಪಿನಮೊಗರುವಿನಲ್ಲಿ ಆರೋಗ್ಯ ಶಿಬಿರ ಆಯೋಜಿಸಿದ್ದು ಸಂಘದ ವಿಶೇಷತೆ. ಜನಸಾಮಾನ್ಯರು ತಮ್ಮ ಆರೋಗ್ಯದ ಕಾಳಜಿಯನ್ನು ನೋಡಿಕೊಳ್ಳಬೇಕು ಮತ್ತು ಶಿಬಿರದಲ್ಲಿ ಲಭ್ಯವಿರುವ ಸೇವೆಗಳ ಬಗ್ಗೆ ಮಾಹಿತಿ ನೀಡಿ, ಈ ಶಿಬಿರದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯ ಹಸಿರು ಕಾರ್ಡನ್ನು ವಿತರಿಸಲಾಗುವುದು. ಶಿಬಿರಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ 14 ವರ್ಷಗಳಿಂದ ವೈದ್ಯಕೀಯ ಶಿಬಿರ ಏರ್ಪಡಿಸುತ್ತಿದ್ದು, ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನ ಪಡೆಯುತ್ತಿದ್ದಾರೆ. ಸಂಘವು ೨೦೨೫-೨೬ನೇ ಸಾಲಿನಲ್ಲಿ ರೂ. 304 ಕೋಟಿಗೂ ಮಿಕ್ಕಿ ಠೇವಣಿ, ರೂ. 278 ಕೋಟಿಗೂ ಮಿಕ್ಕಿ ಸಾಲ, ಹಾಗೂ ರೂ. 3.5 ಕೋಟಿಗೂ ಮಿಕ್ಕಿ ಲಾಭ ಗಳಿಸಿರುವುದು ಸಂಘದ ಪ್ರಗತಿಯ ದ್ಯೋತಕವಾಗಿದೆ ಎಂದರು.
ಸಂಘದ ನಿರ್ದೇಶಕರಾದ ಆನಂದ ಎಸ್ ಕೊಂಡಾಣ, ರಮಾನಾಥ ಸನಿಲ್, ಗೋಪಾಲ್ ಎಮ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತು ಶ್ರೀ ಶಾಸ್ತಾರ ಬಳಗ, ಶ್ರೀ ಶಾಸ್ತಾರ ಮಹಿಳಾ ಮಂಡಳಿ ಮತ್ತು ಭಜಕ ವೃಂದ, ಮಡ್ಯಾರ್ ಇದರ ಅಧ್ಯಕ್ಷ ಸೂರಜ್ ಗಟ್ಟಿ ಕೊಂಡಾಣ, ಶ್ರೀ ಶಾಸ್ತಾರ ಕಟ್ಟೆ ಇದರ ಅರ್ಚಕರಾದ ಯೋಗೀಶ್ ಪೂಜಾರಿ, ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರ ಮಾಡೂರು ಇಲ್ಲಿಯ ಗುರುಸ್ವಾಮಿ ಭಾಸ್ಕರ್, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಇಲ್ಲಿನ ವೈದ್ಯರಾದ ಡಾ| ಆಯಿಷಾ ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು ೧೦೦ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ವೈದ್ಯಕೀಯ ಶಿಬಿರದ ಪ್ರಯೋಜನ ಪಡೆದುಕೊಂಡರು. ಮಾಡೂರು ಶಾಖೆಯ ಪ್ರಭಾರ ಶಾಖಾಧಿಕಾರಿ ಭವ್ಯ ಸ್ವಾಗತಿಸಿ. ಸಂಘದ ಸಿಬ್ಬಂದಿ ರತಿಕಾ ವಂದಿಸಿದರು. ಸಂಘದ ಉಳ್ಳಾಲ ಶಾಖೆಯ ಹಿರಿಯ ಶಾಖಾಧಿಕಾರಿ ಸಚಿನ್ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


