Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಬೆಳ್ಳಂಪಳ್ಳಿ ನವೀಕೃತ ಶಾಖೆ ಉದ್ಘಾಟನಾ ಸಮಾರಂಭ
    News

    ನಾಳೆ ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಬೆಳ್ಳಂಪಳ್ಳಿ ನವೀಕೃತ ಶಾಖೆ ಉದ್ಘಾಟನಾ ಸಮಾರಂಭ

    adminBy adminApril 7, 2026

    ಮಂಗಳೂರು: ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಹವಾನಿಯಂತ್ರಿತವಾಗಿ ನವೀಕೃತಗೊಂಡ ಬೆಳ್ಳಂಪಳ್ಳಿ ಶಾಖೆಯ ಉದ್ಘಾಟನಾ ಸಮಾರಂಭ ಏಪ್ರಿಲ್ 8ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4

    ಬೆಳ್ಳಂಪಳ್ಳಿ ಶಾಖೆಯ ವಠಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪರಮಪೂಜ್ಯ ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ, ಸರಸ್ವತೀ ಪೀಠ, ವೇಣುಗಿರಿ ಪಡುಕುತ್ಯಾರು ಇಲ್ಲಿಯ ಜಗದ್ಗುರು, ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಗಳವರು ಉದ್ಘಾಟನೆ ನೆರವೇರಿಸಿ ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಲಿದ್ದಾರೆ.
    ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿಗಳವರು ಶ್ರೀ ವಿಶ್ವಕರ್ಮ ಜಗದ್ಗುರು ಪೀಠ, ಅರೆಮಾದನಹಳ್ಳಿ, ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠ, ಅರಕಲಗೂಡು, ಹಾಸನ ಜಿಲ್ಲೆ ಇವರು ಆಶೀರ್ವಚನ ನೀಡುವರು.
    ಎಸ್.ಕೆ.ಜಿ.ಐ. ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಆರ್.ಕೆ, ರೈತರ ಸಹಕಾರಿ ಸಂಘ ನಿ.. ಹಿರಿಯಡ್ಕ ಇದರ ಅಧ್ಯಕ್ಷ ಬಿ.ಅಶೋಕ್ ಕುಮಾರ್ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ಸೀತಾರಾಮ ಶೆಟ್ಟಿಗಾರ್ ಸಿ, ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಅಚ್ಚುತ ಆಚಾರ್ಯ, ಕಟ್ಟಡ ಮಾಲಕರಾದ ಪ್ರಸನ್ನ ಪ್ರಭು ಭಾಗವಹಿಸಲಿದ್ದಾರೆ.
    ಸಂಘದ ಉಪಾಧ್ಯಕ್ಷ ಎ.ಆನಂದ ಆಚಾರ್ಯ, ಪ್ರಧಾನ ವ್ಯವಸ್ಥಾಪಕರಾದ ಯಜ್ನೇಶ್ವರ, ಶಾಖೆಯ ವ್ಯವಸ್ಥಾಪಕರಾದ (ಪ್ರಭಾರ) ಮೋಹನದಾಸ್ ಆಚಾರ್ಯ ಟಿ.ಬಿ. ಪಾಲ್ಗೊಳ್ಳಲಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕರಾದ ಕೆ.ಯಜ್ನೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ವಿ.ಜಯ ಆಚಾರ್, ಕೆ.ಶಶಿಕಾಂತ ಆಚಾರ್ಯ, ಮಲ್ಲಪ್ಪ ಎನ್. ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು., ಕೆ. ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ ಎ.ಎಸ್. ಮತ್ತು ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Banking Bellamaplli Co Operative ministry Cooperative Cooperative Department Cooperative Registrar SK Goldsmiths Industrial Co Operative Society
    Previous Articleಎಂಸಿಸಿ ಬ್ಯಾಂಕ್ 2025-26ರ ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ ದಾಖಲು
    Next Article ಅಭೂತಪೂರ್ವ ಪ್ರಗತಿ ದಾಖಲಿಸಿದ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.