Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅಭೂತಪೂರ್ವ ಪ್ರಗತಿ ದಾಖಲಿಸಿದ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್
    News

    ಅಭೂತಪೂರ್ವ ಪ್ರಗತಿ ದಾಖಲಿಸಿದ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್

    adminBy adminApril 8, 2026

    ಪುತ್ತೂರು: ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ತನ್ನ 2025-26ನೇ ಹಣಕಾಸು ವರ್ಷದ (31-03-2026ಕ್ಕೆ ಕೊನೆಗೊಂಡಂತೆ) ವಾರ್ಷಿಕ ಫಲಿತಾಂಶವನ್ನು ಪ್ರಕಟಿಸಿದ್ದು, 117 ವರ್ಷ ಇತಿಹಾಸವಿರುವ ಬ್ಯಾಂಕ್ 2025-26ರಲ್ಲಿ ಬ್ಯಾಂಕಿನ ಇತಿಹಾಸದಲ್ಲೇ ಅತ್ಯಂತ ಗಮನಾರ್ಹ ಸಾಧನೆ ದಾಖಲಿಸಿದೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.

    https://chat.whatsapp.com/FCEnlTkAKCC0MGPhXtX4i4

    ಆರ್ಥಿಕ ಸಾಧನೆಯ ಮುಖ್ಯಾಂಶಗಳು:

    ಬ್ಯಾಂಕು ಕಳೆದ ಹಣಕಾಸು ವರ್ಷದಲ್ಲಿ ಒಟ್ಟು ರೂ. 149.00 ಕೋಟಿ ರೂ.ಗಳ ವ್ಯವಹಾರ ನಡೆಸುವ ಮೂಲಕ 18%ರಷ್ಟು ನಿವ್ವಳ ಪ್ರಗತಿ ದಾಖಲಿಸಿದೆ. ಬ್ಯಾಂಕಿನ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದ ಏರಿಕೆ ಕಂಡುಬಂದಿರುವುದು ಇದೇ ಮೊದಲು ಎಂಬುದು ವಿಶೇಷ.
    ಒಟ್ಟು ಸಾಲ ಮತ್ತು ಮುಂಗಡಗಳು: ರೂ. 61.00 ಕೋಟಿ

    ಒಟ್ಟು ವ್ಯವಹಾರ: ರೂ. 149.00 ಕೋಟಿ

    ದಾಖಲೆಯ ಸಾಲ ವಸೂಲಾತಿ ಮತ್ತು ಕನಿಷ್ಠ ಎನ್.ಪಿ.ಎ (NPA):

    ಬ್ಯಾಂಕು ಸಾಲ ವಸೂಲಾತಿಯಲ್ಲಿ ಮೈಲಿಗಲ್ಲು ಸ್ಥಾಪಿಸಿದ್ದು, ಅತ್ಯಂತ ಶಿಸ್ತುಬದ್ಧ ಆಡಳಿತವನ್ನು ಪ್ರದರ್ಶಿಸಿದೆ.

    ಸಾಲ ವಸೂಲಾತಿ ಪ್ರಮಾಣ: 99.11%

    (Gross NPA): 0 0.89%

    * ನಿವ್ವಳ ವರಮಾನರಹಿತ ಆಸ್ತಿ (Net NPA): 0% (ಶೂನ್ಯ)

    ಇದು ಬ್ಯಾಂಕಿನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದ್ದು, ಬ್ಯಾಂಕಿನ ಆರ್ಥಿಕ ಭದ್ರತೆಗೆ ಸಾಕ್ಷಿಯಾಗಿದೆ.

    ಪ್ರಸಕ್ತ ಸಾಲಿನಲ್ಲಿ ಬ್ಯಾಂಕು ರೂ. 1.88 ಕೋಟಿಗಳ ಒಟ್ಟು ಲಾಭ (Gross Profit) ಗಳಿಸಿದೆ. (ಲೆಕ್ಕಪರಿಶೋಧನೆಗೆ ಒಳಪಟ್ಟು). ಸರ್ಕಾರದ ನಿಯಮಾನುಸಾರ ಆದಾಯ ತೆರಿಗೆ ಪಾವತಿಯ ನಂತರ ನಿವ್ವಳ ಲಾಭ ಘೋಷಿಸಲಾಗುವುದು.
    ಬ್ಯಾಂಕು ಸತತ ಮೂರನೇ ವರ್ಷವೂ ‘ಆರ್ಥಿಕವಾಗಿ ಸದೃಢ ಮತ್ತು ಉತ್ತಮವಾಗಿ ನಿರ್ವಹಿಸಲ್ಪಡುತ್ತಿರುವ ಬ್ಯಾಂಕ್’ (FSWM Bank) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಡಿಜಿಟಲೀಕರಣದ ಗುರಿ:
    ಬ್ಯಾಂಕನ್ನು ಆಧುನೀಕರಿಸುವ ನಿಟ್ಟಿನಲ್ಲಿ ಈಗಾಗಲೇ 50%ರಷ್ಟು ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಂಡಿದೆ. ಉಳಿದ 50% ಕಾರ್ಯವು ಭರದಿಂದ ಸಾಗುತ್ತಿದ್ದು, ಜೂನ್ 30, 2026ರ ಒಳಗಾಗಿ ಬ್ಯಾಂಕನ್ನು ಸಂಪೂರ್ಣ ಡಿಜಿಟಲ್ ಬ್ಯಾಂಕ್ ಆಗಿ ಪರಿವರ್ತಿಸುವ ಗುರಿ ಹೊಂದಲಾಗಿದೆ ಎಂದು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಪ್ರಕಟಣೆ ತಿಳಿಸಿದೆ.

    ಈ ಎಲ್ಲಾ ಸಾಧನೆಗಳಿಗೆ ಸಹಕರಿಸಿದ ಬ್ಯಾಂಕಿನ ಗ್ರಾಹಕರಿಗೆ, ನಿರ್ದೇಶಕ ಮಂಡಳಿಗೆ ಮತ್ತು ಸತತ ಪರಿಶ್ರಮ ಹಾಕಿ ದಾಖಲೆಯ ಈ ಸಾಧನೆಗೆ ಕಾರಣಕರ್ತರಾದ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿ ವರ್ಗಕ್ಕೆ ಬ್ಯಾಂಕಿನ ಆಡಳಿತ ಮಂಡಳಿಯು ಅಭಿನಂದನೆ ಸಲ್ಲಿಸಿದೆ ಎಂದು ಬ್ಯಾಂಕ್ ಅಧ್ಯಕ್ಷರಾದ ಎನ್.ಕಿಶೋರ್ ಕೊಳತ್ತಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
    EMAIL: sahakaraspandana@gmail.com

    Banking Cooperative Cooperative Department Cooperative Registrar N Kishor Kolatthaya Putturu Co Operative Town Bank
    Previous Articleನಾಳೆ ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಬೆಳ್ಳಂಪಳ್ಳಿ ನವೀಕೃತ ಶಾಖೆ ಉದ್ಘಾಟನಾ ಸಮಾರಂಭ
    Next Article ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ರೂ.3.40 ಕೋಟಿ ನಿವ್ವಳ ಲಾಭ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.