ಮಂಗಳೂರು: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸಂಘದ ಸದಸ್ಯರಿಗೆ ಮಾಡಿರುವ ಉಚಿತ ಅಪಘಾತ ವಿಮೆ ಸೌಲಭ್ಯವನ್ನು ಶುಕ್ರವಾರ ವಿತರಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
2025ರ ಏಪ್ರಿಲ್ 1ರಂದು ಈ ವಿಮಾ ಸೌಲಭ್ಯ ಜಾರಿಗೊಳಿಸಿದ್ದು, ಇತ್ತೀಚೆಗೆ ಅಪಘಾತದಲ್ಲಿ ಮೃತರಾಗಿರುವ ಕೊಟ್ಟಾರ ಚೌಕಿ ಶಾಖೆಯ ಮಾಜಿ ಜನತಾ ನಿಧಿ ಸಂಗ್ರಾಹಕ ಹಾಗೂ ಸದಸ್ಯರಾದ ಅಶೋಕ್ ಆಚಾರ್ಯ ಬಿ ಇವರ ಪತ್ನಿ ಜಯಂತಿ ಅಶೋಕ್ ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಪಿ.ಉಪೇಂದ್ರ ಆಚಾರ್ಯರು ವಿಮಾ ಮೊತ್ತ ರೂ.2 ಲಕ್ಷದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಎ.ಆನಂದ ಆಚಾರ್ಯ, ನಿರ್ದೇಶಕರಾದ ಕೆ.ಯಜ್ಞೇಶ್ವರ ಆಚಾರ್ಯ, ವೈ.ವಿ.ವಿಶ್ವಜ್ಞಮೂರ್ತಿ, ಕೆ. ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್ ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು., ಕೆ.ಪ್ರಕಾಶ್ ಆಚಾರ್ಯ, ಮಂಜುನಾಥ ಆಚಾರ್ಯ, ಚಂದ್ರಶೇಖರ ಎ.ಎಸ್ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


