ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅಭಿಪ್ರಾಯ
ಮಂಗಳೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನವೀನ ಹೆಜ್ಜೆ ಇಟ್ಟಿರುವ ಎಸ್‌ಸಿಡಿಸಿಸಿ ಬ್ಯಾಂಕ್, ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಗಳನ್ನು ಪರಿಚಯಿಸುವ ಮೂಲಕ ಗ್ರಾಹಕರಿಗೆ ಆಧುನಿಕ ಹಾಗೂ ವೇಗವಾದ ಹಣಕಾಸು ಸೇವೆಗಳನ್ನು ಒದಗಿಸುತ್ತಿದೆ. ಈ ಹೊಸ ಯೋಜನೆಗಳಿಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
https://chat.whatsapp.com/FCEnlTkAKCC0MGPhXtX4i4
ಬ್ಯಾಂಕ್‌ನಲ್ಲಿ ಬುಧವಾರ ಆಯೋಜಿಸಲಾದ ಡಿಜಿಟಲ್ ಬ್ಯಾಂಕಿಂಗ್ ಹಾಗೂ ಸೈಬರ್ ಭದ್ರತೆ ಕುರಿತ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತ್ವರಿತ ಮತ್ತು ಸುರಕ್ಷಿತ ಸೇವೆಗಳು ಅತ್ಯಗತ್ಯವಾಗಿದ್ದು, ಗ್ರಾಹಕರ ನಿರೀಕ್ಷೆಗಳಿಗೆ ತಕ್ಕಂತೆ ಸೇವೆಗಳನ್ನು ವಿಸ್ತರಿಸುವುದು ಬ್ಯಾಂಕಿನ ಪ್ರಮುಖ ಗುರಿಯಾಗಿದೆ ಎಂದರು. ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಆರ್‌ಟಿಜಿಎಸ್, ನೆಫ್ಟ್, ಸಿಟಿಎಸ್, ಎಸ್‌ಎಂಎಸ್ ಅಲರ್ಟ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್ ಮತ್ತು ಪಿಒಎಸ್ ಸೇರಿದಂತೆ ಹಲವು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ. ಇತ್ತೀಚಿನ ತಾಂತ್ರಿಕ ಅಭಿವೃದ್ಧಿಗಳ ಹಿನ್ನೆಲೆಯಲ್ಲಿ, ಗ್ರಾಹಕರು ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಸುಲಭ ಮತ್ತು ವೇಗವಾದ ಸೇವೆಯನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಹೇಳಿದರು. ಈ ಅಗತ್ಯವನ್ನು ಮನಗಂಡು, ಗ್ರಾಹಕರಿಗೆ ಇನ್ನಷ್ಟು ಸುಲಭ ಮತ್ತು ಸುರಕ್ಷಿತ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಯುಪಿಐ ಮತ್ತು ಐಎಂಪಿಎಸ್ ವ್ಯವಸ್ಥೆಗಳನ್ನು ಜಾರಿಗೆ ತರಲಾಗಿದೆ. ಈ ಸೇವೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಬ್ಯಾಂಕ್ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಮಹಾಪ್ರಬಂಧಕ ಸುನೀಲ್ ಕುಮಾರ್ ಹೊಳ್ಳ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


