Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ 3.02 ಕೋಟಿ ರೂ. ನಿವ್ವಳ ಲಾಭ
    News

    ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ 3.02 ಕೋಟಿ ರೂ. ನಿವ್ವಳ ಲಾಭ

    adminBy adminApril 22, 2026

    ಪುತ್ತೂರು: ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು 2025-26ನೇ ಸಾಲಿನಲ್ಲಿ 842.47 ಕೋಟಿ ರೂ. ವ್ಯವಹಾರ ನಡೆಸಿದ್ದು, 3.02 ಕೋಟಿ ರೂ.ಗಳ ನಿವ್ವಳ ಲಾಭ ಗಳಿಸುವುದರ ಮೂಲಕ ಸಾರ್ವಕಾಲಿಕ ಪ್ರಗತಿ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಭಾಸ್ಕರ್ ಎಂ ಪೆರುವಾಯಿ ತಿಳಿಸಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಸುದೀರ್ಘ 68 ವರ್ಷಗಳ ಇತಿಹಾಸ ಹೊಂದಿರುವ ಗ್ರಾಮೀಣ ಗುಡಿಕೈಗಾರಿಕೆಯಾದ ಕುಂಬಾರಿಕೆಯ ಅಭಿವೃದ್ಧಿಗಾಗಿ ಸಹಕಾರಿ ಕ್ಷೇತ್ರದಲ್ಲಿ ಕಾರ್ಯಯೋಜನೆ ರೂಪಿಸಿ ಬೆಳೆಸುತ್ತಿರುವ ಸಹಕಾರ ಸಂಘವು ದಕ್ಷಿಣ ಕನ್ನಡ ಜಿಲ್ಲಾದ್ಯಂತ 18 ಶಾಖೆಗಳನ್ನು ಹೊಂದಿದೆ. ಪುತ್ತೂರು ತಾಲೂಕಿನ ಆರಿಯಡ್ಕ ಗ್ರಾಮದಲ್ಲಿ ಕುಂಬಾರಿಕಾ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದ್ದು, ಈ ಭಾಗದ ಕುಶಲಕರ್ಮಿಗಳ ಉತ್ಪನ್ನಗಳಿಗೆ ಯೋಗ್ಯ ಮಾರುಕಟ್ಟೆ ಒದಗಿಸುತ್ತಿದೆ.
    ಸಹಕಾರ ಸಂಘವು ಎಲ್ಲಾ ವರ್ಗದ ಸದಸ್ಯರಿಗೆ ಸೇವೆಯನ್ನು ನೀಡಿದ್ದು ಸಂಘವು 155 ಕೋಟಿ ರೂ. ಠೇವಣಿ ಹೊಂದಿದ್ದು, ವಿವಿಧ ಯೋಜನೆಗಳಿಗೆ ನೀಡಲಾದ ಸಾಲದಲ್ಲಿ 117 ಕೋಟಿ ರೂ. ಹೊರಬಾಕಿ ಸಾಲ ಇರುತ್ತದೆ. ಸಂಘದಲ್ಲಿ ದುಡಿಯುವ ಬಂಡವಾಳ 164.54 ಕೋಟಿ ರೂ. ಇರುತ್ತದೆ. ಲೆಕ್ಕ ಪರಿಶೋಧನೆಯಲ್ಲಿ ನಿರಂತರವಾಗಿ ಎ ದರ್ಜೆ ಕಾಯ್ದುಕೊಂಡಿದ್ದು, ಸಹಕಾರ ಸಂಘದ ಹೆಚ್ಚಿನ ಶಾಖೆಗಳನ್ನು ಹವಾನಿಯಂತ್ರಣಗೊಳಿಸಿ ಸುಸಜ್ಜಿತ ಬ್ಯಾಂಕಿಂಗ್ ವ್ಯವಹಾರವ ನಡೆಸಲಾಗುತ್ತಿದೆ. ಸಂಘದ ಸದಸ್ಯರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲಗಳನ್ನು ನೀಡಲಾಗುತ್ತಿದ್ದು ಸದಸ್ಯರ ಠೇವಣಿಗಳಿಗೆ ಆಕರ್ಷಕ ದರದ ಬಡ್ಡಿಯನ್ನು ನೀಡುತ್ತಿದೆ.
    ಸಹಕಾರ ಸಂಘದ ವಿಶೇಷ ಸಾಧನೆಯನ್ನು ಗುರುತಿಸಿ ಸತತ 6 ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ವಿಶೇಷ ಸಾಧನೆ ಪ್ರಶಸ್ತಿ ಹಾಗೂ ವಿಭಾಗ ಮಟ್ಟದಲ್ಲಿ 2 ಬಾರಿ ಪ್ರಶಸ್ತಿಯನ್ನು ಪಡೆದಿದೆ. ಸಂಘವು ನಿರಂತರ ಲಾಭದಲ್ಲಿ ಮುಂದುವರಿಯುವ ಜತೆಗೆ ಸದಸ್ಯರಿಗೆ ಗರಿಷ್ಠ ಲಾಭಾಂಶ ವಿತರಣೆ ಮಾಡಲಾಗುತ್ತಿದೆ. ಸದಸ್ಯ ಸ್ನೇಹಿ ವಿಶ್ವಾಸಾರ್ಹತೆಯಿಂದ ಕೂಡಿದ ವ್ಯವಹಾರ, ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ಮಾರಾಟಕ್ಕೆ ನಿರಂತರ ಪ್ರೋತ್ಸಾಹ ನೀಡುತ್ತ, ಪುತ್ತೂರು ನಗರದಲ್ಲಿ ಸ್ವಂತ ಕಟ್ಟಡದಲ್ಲಿ ಕೇಂದ್ರ ಕಚೇರಿ ಹೊಂದಿದೆ. ಕೌಡಿಚ್ಚಾರು, ಮಾಣಿ, ಬೆಳ್ಳಾರೆ. ವಿಟ್ಲ ಬಿ.ಸಿ.ರೋಡು ಶಾಖೆಗಳು ಸುಸಜ್ಜಿತ ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು ಮಂಗಳೂರು ನಗರದಲ್ಲಿ ಶಾಖೆ ತೆರೆಯುವುದು ಮತ್ತು ಬೆಳ್ಳಾರೆ ಶಾಖೆಗೆ ಬೆಳ್ಳಾರೆ ಪೇಟೆಯಲ್ಲಿ ಖರೀದಿಸಲಾದ ಜಮೀನಿನಲ್ಲಿ ಸುಸಜ್ಜಿತ ಕಟ್ಟಡವನ್ನು ರಚಿಸುವ ಕಾರ್ಯಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಭಾಸ್ಕರ್ ಎಂ ಪೆರುವಾಯಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Banking Bhaskar M Peruvaayi Co Operative ministry Cooperative Cooperative Department Cooperative Registrar Kumbarara Gudi Kaigarika Sahakara Sangha Putturu
    Previous Articleಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರೂ. 5.85 ಕೋಟಿ ನಿವ್ವಳ ಲಾಭ
    Next Article ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.