Close Menu
    Top News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಕೆ.ಸಿ.ರೋಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    April 26, 2026

    ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ದಾಖಲೆಯ ರೂ. 3.07 ಕೋಟಿ ಲಾಭ

    April 25, 2026

    ಕೆ.ಸಿ.ರೋಡ್‌ನಲ್ಲಿ ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ, ದಂತ ಚಿಕಿತ್ಸಾ ಶಿಬಿರ

    April 25, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಕೆ.ಸಿ.ರೋಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಕೆ.ಸಿ.ರೋಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    adminBy adminApril 26, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೆ.ಸಿ ರೋಡ್ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ನುರಿತ ವೈದ್ಯರ ತಂಡದವರಿ0ದ ಉಚಿತ ವೈದ್ಯಕೀಯ ಹಾಗೂ ಕಣ್ಣಿನ ತಪಾಸಣಾ ಶಿಬಿರವು ಉಚ್ಚಿಲಸ್ ಕಾಂಪ್ಲೆಕ್ಸ್, ಸುಜಾತ ಜ್ಯುವೆಲ್ಲರಿ ಹತ್ತಿರ, ಕೆ.ಸಿ. ರೋಡ್ (ಶಾಖೆಯ ಆವರಣ) ದಲ್ಲಿ ಜರುಗಿತು.

    https://chat.whatsapp.com/FCEnlTkAKCC0MGPhXtX4i4

    ಈ ಶಿಬಿರವನ್ನು ಶ್ರೀ ಕೃಷ್ಣ ಭಜನಾ ಮಂದಿರ (ರಿ.) ಕೆ.ಸಿ ರೋಡ್, ಕೃಷ್ಣನಗರ, ತಲಪಾಡಿ ಇದರ ಅಧ್ಯಕ್ಷರಾದ ಚಂದ್ರಶೇಖರ ಉದ್ಘಾಟಿಸಿ ಮಾತನಾಡಿ “ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸತತವಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಿರುತ್ತಿರುವುದು ಶ್ಲಾಘನೀಯ” ಎಂದು ಶಿಬಿರಕ್ಕೆ ಶುಭ ಹಾರೈಸಿದರು.

    ಕೆ.ಎಂ.ಸಿ. ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ| ಉತ್ಕರ್ಷ್ ಮಾತನಾಡಿ, “ಆರೋಗ್ಯದ ಸಮಸ್ಯೆ ಯಾವ ರೀತಿ ಬರುತ್ತದೆ, ಇದರ ಮುಂಜಾಗ್ರತೆಯನ್ನು ಯಾವ ರೀತಿ ಮಾಡಬಹುದು ಹಾಗೂ ಉಚಿತ ವೈದ್ಯಕೀಯ ಶಿಬಿರದ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.

    ಕೆ.ಸಿ ರೋಡ್‌ನ ಉಚ್ಚಿಲಸ್ ಕಾಂಪ್ಲೆಕ್ಸನ ಮಾಲಕರಾದ ಅಬ್ಬಾಸ್ ಉಚ್ಚಿಲ್ ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಯಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಸತತವಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಿ, ಜನ ಸಾಮಾನ್ಯರ ಆರೋಗ್ಯ ಬಗ್ಗೆ ಕಾಳಜಿ ವಹಿಸುತ್ತಿರುವುದು ಶ್ಲಾಘನೀಯ” ಎಂದರು.
    ಕೆ.ಎಂ.ಸಿ. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹರ್ಬಟ್ ಪಿರೈರಾ ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಕೆ.ಎಂ.ಸಿ. ಆಸ್ಪತ್ರೆಯು ಹಲವಾರು ಉಚಿತ ಶಿಬಿರಗಳನ್ನು ಆಯೋಜನೆ ಮಾಡುತ್ತಾ ಬರುತ್ತಿದೆ. ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುವುದು, ಬಿ.ಪಿ. ಮತ್ತು ಮದುಮೇಹ ತಪಾಸಣೆ, ಎಲುಬು, ಕೀಲು, ಕಿವಿ, ಮೂಗು, ಗಂಟಲು ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಉಚಿತ ಔಷಧಿ ವಿತರಣೆ ನೀಡಲಾಗುವುದು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ. ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ 107ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ರೋಗ ಬರುವುದಕ್ಕಿಂತ ಮುಂಚಿತವಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಇಂತಹ ಉಚಿತ ಆರೋಗ್ಯ ಶಿಬಿರಗಳಲ್ಲಿ ತಪಾಸಣೆ ಮಾಡಿಸುವುದರ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬಹುದು. ಈ ಶಿಬಿರವು ಕೆ.ಸಿ ರೋಡ್ ಪರಿಸರದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಕೆ.ಎಂ.ಸಿ. ಆಸ್ಪತ್ರೆ ಆಡಳಿತ ವರ್ಗ, ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ಞತೆ ಸಲ್ಲಿಸಿದರು.
    ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಆನಂದ ಎಸ್ ಕೊಂಡಾಣ, ಗೋಪಾಲ್ ಎಮ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಶ್ರೀ ಕೃಷ್ಣ ಭಜನಾ ಮಂದಿರ (ರಿ.) ಕೆ.ಸಿ ರೋಡ್, ಕೃಷ್ಣ ನಗರ-ತಲಪಾಡಿ ಇದರ ಗೌರವಾಧ್ಯಕ್ಷರಾದ ಜಗನ್ನಾಥ, ಕಾರ್ಯದರ್ಶಿ ಕಾರ್ತಿಕ್ ಮತ್ತಿತರರು ಉಪಸ್ಥಿತರಿದ್ದರು.

    ಈ ಶಿಬಿರವನ್ನು ಎನ್.ಜಿ ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ಶ್ರೀ ಕೃಷ್ಣ ಭಜನಾ ಮಂದಿರ (ರಿ.) ಕೆ.ಸಿ ರೋಡ್, ಕೃಷ್ಣ ನಗರ, ತಲಪಾಡಿ ಹಾಗೂ ಶ್ರೀ ಲಕ್ಷ್ಮೀ ಶಾಮಿಯಾನ, ಪನೀರ್-ಬಾಳಿಕೆ, ಕೋಟೆಕಾರ್ ಇವರುಗಳ ಜಂಟಿ ಸಹಯೋಗದೊಂದಿಗೆ ಆಯೋಜನೆ ಮಾಡಲಾಗಿತ್ತು. 150ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಪ್ರಯೋಜನ ಪಡೆದುಕೊಂಡರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರ್‌ವೆಲ್ ಶಾಖೆಯ ಹಿರಿಯ ಶಾಖಾಧಿಕಾರಿ ಸೌಮ್ಯಲತಾ ಸ್ವಾಗತಿಸಿ, ಕೆ.ಸಿ ರೋಡ್ ಶಾಖೆಯ ಶಾಖಾಧಿಕಾರಿ ಶಿವರಾಮ್ ವಂದಿಸಿದರು. ಸಂಘದ ಉಳ್ಳಾಲ ಶಾಖೆಯ ಹಿರಿಯ ಶಾಖಾಧಿಕಾರಿ ಸಚಿನ್ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Atmashakti vividhoddesha sahakara sangha Cooperative Cooperative Department Cooperative Registrar Health Camp KC Road
    Previous Articleಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ದಾಖಲೆಯ ರೂ. 3.07 ಕೋಟಿ ಲಾಭ

    Related Posts

    ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ದಾಖಲೆಯ ರೂ. 3.07 ಕೋಟಿ ಲಾಭ

    April 25, 2026

    ಕೆ.ಸಿ.ರೋಡ್‌ನಲ್ಲಿ ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ, ದಂತ ಚಿಕಿತ್ಸಾ ಶಿಬಿರ

    April 25, 2026

    ಶ್ರೀಶಾ ಸೌಹಾರ್ದ ಸೊಸೈಟಿಯಿಂದ 100 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ: ಅರ್ಜಿ ಆಹ್ವಾನ

    April 24, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಕೆ.ಸಿ.ರೋಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    April 26, 2026

    ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ದಾಖಲೆಯ ರೂ. 3.07 ಕೋಟಿ ಲಾಭ

    April 25, 2026

    ಕೆ.ಸಿ.ರೋಡ್‌ನಲ್ಲಿ ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ, ದಂತ ಚಿಕಿತ್ಸಾ ಶಿಬಿರ

    April 25, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.