Close Menu
    Top News

    ಧವಳ ಕೋ ಆಪರೇಟಿವ್ ಸೊಸೈಟಿ ರೂ. 50.95 ಲಕ್ಷ ನಿವ್ವಳ ಲಾಭ

    April 27, 2026

    ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮ, ಸಹಕಾರ ಸಿಂಧೂರ ವಾಣಿಜ್ಯ ಸಂಕೀರ್ಣ ಉದ್ಘಾಟನೆ

    April 27, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಕೆ.ಸಿ.ರೋಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    April 26, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮ, ಸಹಕಾರ ಸಿಂಧೂರ ವಾಣಿಜ್ಯ ಸಂಕೀರ್ಣ ಉದ್ಘಾಟನೆ
    News

    ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮ, ಸಹಕಾರ ಸಿಂಧೂರ ವಾಣಿಜ್ಯ ಸಂಕೀರ್ಣ ಉದ್ಘಾಟನೆ

    adminBy adminApril 27, 2026

    ಕಾರ್ಕಳ: ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮದ ಅಂಗವಾಗಿ ಭಾನುವಾರ ಕಾರ್ಕಳ ಜೋಡು ರಸ್ತೆಯಲ್ಲಿ ಸಹಕಾರ ಸಿಂಧೂರ ವಾಣಿಜ್ಯ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಗೋವಾದ ಶ್ರೀ ಸಂಸ್ಥಾನ ಕೈವಲ್ಯ ಮಠಾಧೀಶರಾದ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿಯವರು ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಹಕಾರ ಸಂಘಗಳು ಕೇವಲ ಹಣಕಾಸಿನ ವಹಿವಾಟಿಗೆ ಸೀಮಿತವಾಗದೆ, ಸಮಾಜದ ಆತ್ಮನಿರ್ಭರತೆಗೆ ಭದ್ರ ಬುನಾದಿಯಾಗುತ್ತಿವೆ. ಒಗ್ಗಟ್ಟಿನ ಸಹಯೋಗವೇ ಸಮಾಜದ ನಿಜವಾದ ಶಕ್ತಿಯಾಗಿದ್ದು, ಸೇವೆಯೇ ಅದರ ಮೂಲಮಂತ್ರವಾಗಲಿ’ ಎಂದು ಹೇಳಿದರು.
    ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಸಹಕಾರಿ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲಾಗಿದ್ದು, ಸಮಾಜದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡುತ್ತಿದೆ ಎಂದರು.
    ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸಹಕಾರ ರತ್ನ ಕಡಾರಿ ರವೀಂದ್ರ ಪ್ರಭು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿ, 1996ರಲ್ಲಿ ಕಡ್ತಲ ರವೀಂದ್ರ ನಾಯಕ್ ಅವರೊಂದಿಗೆ ಭದ್ರ ಬುನಾದಿ ಹಾಕಿ ಆರಂಭಿಸಿದ ಸಂಸ್ಥೆ ಇಂದು 30 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದೆ ಎಂದರು.


    ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ|ಎಂ. ಎನ್.ರಾಜೇಂದ್ರ ಕುಮಾರ್ ಮಾತನಾಡಿ, 30 ವರ್ಷಗಳಿಂದ ಕಪ್ಪುಚುಕ್ಕೆ ಇಲ್ಲದೆ ರಾಜಾಪುರ ಸೊಸೈಟಿ ಸಂಸ್ಥೆಯು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು. ರಾಜಾಪುರ ಸಾರಸ್ಥತ ಸೊಸೈಟಿಯು ಮೂರು ದಶಕಗಳಿಂದ ಪಾರದರ್ಶಕವಾಗಿ ಕಾರ್ಯನಿರ್ವಹಿಸುವ ಮೂಲಕ ಜನಸಾಮಾನ್ಯರ ವಿಶ್ವಾಸ ಗಳಿಸಿದೆ. ಸಹಕಾರಿ ಕ್ಷೇತ್ರಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ೨೫೨೦ ಕೋಟಿ ರೂ. ಮಂಜೂರು ಮಾಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
    ಕಾರ್ಕಳ ಶಾಸಕ ಸುನೀಲ್ ಕುಮಾರ್‌ ತ್ರಿಂಶತಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್‌ ಶೆಟ್ಟಿ ಮಾತನಾಡಿದರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಸದಾಶಿವ ಪ್ರಭು ಬಿ., ಮಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಗೋಕುಲದಾಸ್ ನಾಯಕ್, ಉದ್ಯಮಿ ಸಂತೋಷ್ ವಾಗ್ಳೆ, ಅಡಪಾಡಿ ಕ್ಷೇತ್ರದ ಧರ್ಮದರ್ಶಿ ಪುಂಡಲೀಕ ನಾಯಕ್, ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಆಡಳಿತ ಮೊಕ್ತೇಸರ ಚೇತನ್ ನಾಯಕ್ ಉಪಸ್ಥಿತರಿದ್ದರು. ಸಂಸ್ಥೆಯ ಉಪಾಧ್ಯಕ್ಷ ನೀರೆ ರವೀಂದ್ರ ನಾಯಕ್ ಸ್ವಾಗತಿಸಿ, ಸಿಇಒ ಸುರೇಂದ್ರ ನಾಯಕ್ ವಂದಿಸಿ, ಸಂತೋಷ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    B.Jayakara Shetty Indrali Kadari Ravindra Prabhu Kaivalya Mata Muniyalu Udayakumar Shetty Pejavara Vishwaprasanna Theertha Swameeji Rajapura Saraswatha Credit Cooperative Society Sahakara Sindhoora Shree Shivananda Saraswathi Swameeji Sunil Kumar
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಕೆ.ಸಿ.ರೋಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
    Next Article ಧವಳ ಕೋ ಆಪರೇಟಿವ್ ಸೊಸೈಟಿ ರೂ. 50.95 ಲಕ್ಷ ನಿವ್ವಳ ಲಾಭ

    Related Posts

    ಧವಳ ಕೋ ಆಪರೇಟಿವ್ ಸೊಸೈಟಿ ರೂ. 50.95 ಲಕ್ಷ ನಿವ್ವಳ ಲಾಭ

    April 27, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಕೆ.ಸಿ.ರೋಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    April 26, 2026

    ಶ್ರೀ ಗೋಕರ್ಣನಾಥ ಕೋ ಆಪರೇಟಿವ್‌ ಬ್ಯಾಂಕ್‌ ದಾಖಲೆಯ ರೂ. 3.07 ಕೋಟಿ ಲಾಭ

    April 25, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಧವಳ ಕೋ ಆಪರೇಟಿವ್ ಸೊಸೈಟಿ ರೂ. 50.95 ಲಕ್ಷ ನಿವ್ವಳ ಲಾಭ

    April 27, 2026

    ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮ, ಸಹಕಾರ ಸಿಂಧೂರ ವಾಣಿಜ್ಯ ಸಂಕೀರ್ಣ ಉದ್ಘಾಟನೆ

    April 27, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಕೆ.ಸಿ.ರೋಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    April 26, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.