Close Menu
    Top News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ 14ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ

    April 28, 2026

    ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

    April 28, 2026

    ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಾಖೆ ಮೇ 3ರಂದು ಶಿರ್ತಾಡಿಯಲ್ಲಿ ಉದ್ಘಾಟನೆ

    April 28, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ 14ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ 14ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ

    adminBy adminApril 28, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ 14ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಮಾಡೂರು ಶಾಖೆಯಲ್ಲಿ ಜರುಗಿತು.

    https://chat.whatsapp.com/FCEnlTkAKCC0MGPhXtX4i4

    ಸಂಘದ ಸದಸ್ಯರಾದ ಬಿ.ಎಸ್. ಭಾಸ್ಕರ್, ಸೀತಾರಾಮ ಪೂಜಾರಿ, ಗೋಪಾಲ ಯು. ಹಾಗೂ ಇಸ್ಮಾಯಿಲ್ ಅಚ್ಚಬ್ಬ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.
    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಬಿ.ಎಸ್. ಭಾಸ್ಕರ್ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದು, ನಮ್ಮೆಲ್ಲರ ಅಚ್ಚುಮೆಚ್ಚಿನ ಸಂಘವಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


    ಸದಸ್ಯರಾದ ಗೋಪಾಲ ಯು ಮಾತನಾಡಿ “ಸೇವಾ ಮನೋಭಾವದ ಉದ್ದೇಶದಿಂದ ಸಹಕಾರಿ ಕ್ಷೇತದಲ್ಲಿ ಸೇವೆ ಸಲ್ಲಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇನ್ನೂ ಹೆಚ್ಚಿನ ಉನ್ನತ ಸ್ಥಾನಕ್ಕೆ ಏರಲಿ” ಎಂದು ಶುಭ ಹಾರೈಸಿದರು.
    ಸದಸ್ಯರಾದ ಗಣೇಶ್ ಭಂಡಾರಿ ಮಾತನಾಡಿ “ಸಿಬ್ಬಂದಿಗಳು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದ್ದು, ನಮ್ಮೆಲ್ಲರ ದೈನಂದಿನ ವ್ಯವಹಾರಕ್ಕೆ ಉತ್ತಮ ಸಂಘವಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿ ಹೊಂದಲು ಸಾಧ್ಯವಾಗಿದೆ. ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10.00 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10.50 ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ಸದಸ್ಯರಿಗೆ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ. ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು.
    ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಆನಂದ್ ಎಸ್.ಕೊಂಡಾಣ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತರರು ಉಪಸ್ಥಿತರಿದ್ದರು.
    ಶಾಖೆಯ ಸಿಬ್ಬಂದಿ ಮೇಘಶ್ರೀ ಪಿ.ಎನ್. ಸ್ವಾಗತಿಸಿ, ಪ್ರದೀಪ್ ಕುಮಾರ್ ಕೆ. ವಂದಿಸಿದರು. ಶಾಖೆಯ ಪ್ರಭಾರ ಶಾಖಾಧಿಕಾರಿ ಭವ್ಯ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Atmashakti vividhoddesha sahakara sangha Banking Chittaranjan Bolar Co Operative ministry Cooperative Cooperative Department Cooperative Registrar Madooru
    Previous Articleಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

    Related Posts

    ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

    April 28, 2026

    ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಾಖೆ ಮೇ 3ರಂದು ಶಿರ್ತಾಡಿಯಲ್ಲಿ ಉದ್ಘಾಟನೆ

    April 28, 2026

    ಧವಳ ಕೋ ಆಪರೇಟಿವ್ ಸೊಸೈಟಿ ರೂ. 50.95 ಲಕ್ಷ ನಿವ್ವಳ ಲಾಭ

    April 27, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ 14ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ

    April 28, 2026

    ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

    April 28, 2026

    ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಾಖೆ ಮೇ 3ರಂದು ಶಿರ್ತಾಡಿಯಲ್ಲಿ ಉದ್ಘಾಟನೆ

    April 28, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.