ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಎಲ್ಯಾರ್‌ಪದವು ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು ಹಾಗೂ ಕಣಚೂರು ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಇವರ ನುರಿತ ವೈದ್ಯರ ತಂಡದವರಿಂದ ಉಚಿತ ನೇತ್ರ ತಪಾಸಣಾ, ದಂತ ಚಿಕಿತ್ಸಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಎಲ್ಯಾರ್‌ಪದವಿನ ಹೋಲಿ ಕ್ರಾಸ್ ಚರ್ಚ್ ಬಳಿಯ ಶರೂನ್ ಸ್ಟ್ರಕ್ಚರ್‌ನಲ್ಲಿ ಭಾನುವಾರ ಜರುಗಿತು.
https://chat.whatsapp.com/FCEnlTkAKCC0MGPhXtX4i4
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ನ ನೋಡೆಲ್ ಅಧಿಕಾರಿ ಪ್ರಶಾಂತ್ ಪೂರ್ಜೆ ಶಿಬಿರ ಉದ್ಘಾಟಿಸಿ ಮಾತನಾಡಿ, ರೋಗ ಬಂದಿರುವವರು ಮಾತ್ರ ಚಿಕಿತ್ಸೆ ಪಡೆಯುವುದಲ್ಲದೇ, ರೋಗ ಬರುವ ಮುಂಚಿತವಾಗಿ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿಕೊಂಡು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ. ಈ ಶಿಬಿರದಲ್ಲಿ ಆಯುಷ್ಮಾನ್ (ಅಭಾ) ಕಾರ್ಡ್ ಮತ್ತು ಇ-ಶ್ರಮ್ ಕಾರ್ಡ್ ಉಚಿತ ನೋಂದಣಿ ಮಾಡಲಾಗುತ್ತಿದ್ದು ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಿ.ಎಸ್.ಐ ಬೆಥಾನ್ಯ ಚರ್ಚ್ ಬೆಳ್ಮ ಕೊಣಾಜೆ ಇದರ ಸದಸ್ಯರು ಮತ್ತು ಶರೂನ್ ಸ್ಟ್ರಕ್ಚರ್ ಕಟ್ಟಡದ ಮಾಲೀಕರಾದ ರೊನಾಲ್ಡ್ ಜೆ.ಅಮ್ಮಣ್ಣ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ಜನಸಾಮಾನ್ಯರ ಆರೋಗ್ಯದ ಕಾಳಜಿ ವಹಿಸಿ ಎಲ್ಲಾ ಶಾಖೆಗಳಲ್ಲಿ ಉಚಿತ ಆರೋಗ್ಯ ಶಿಬಿರ ನಡೆಸುತ್ತಿರುವುದಕ್ಕೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಗೆ ಕೃತಜ್ಞತೆ ಸಲ್ಲಿಸಿದರು. ಕೊಣಾಜೆ ಪಂಚಾಯತ್ ಮಾಜಿ ಅಧ್ಯಕ್ಷರಾದ ಗೀತಾ ಕುಂದರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಜನರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರ ಆಯೋಜಿಸಿ ಅವರಿಗೆ ಬೇಕಾದ ಸೌಲಭ್ಯಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರ ಏರ್ಪಡಿಸುತ್ತ ಬಂದಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರ ನೀಡುತ್ತಿವೆ. ಸಂಘದಲ್ಲಿ ಬ್ಯಾಂಕ್‌ಗಳಿಗೆ ನೇರವಾಗಿ ಹಣ ವರ್ಗಾವಣೆ, ಮಣಿಪಾಲ್ ಆರೋಗ್ಯ ಕಾರ್ಡ್ ಹೊಸ ಹಾಗೂ ನವೀಕರಣ ಸೌಲಭ್ಯ , ವಿಮಾ ಸೌಲಭ್ಯ ಮತ್ತು ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂಗೆ ರೂ.12,000ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಗರಿಷ್ಠ ಮೌಲ್ಯದಲ್ಲಿ ಶೀಘ್ರಗತಿಯಲ್ಲಿ ಸಾಲ ನೀಡುವುದಲ್ಲದೇ, ಯಾವುದೇ ಹಣಕಾಸು ಸಂಸ್ಥೆಗಳಲ್ಲಿ ಅಡವಿಟ್ಟಿರುವ ಚಿನ್ನಾಭರಣಗಳನ್ನು ಬಿಡಿಸಿ ನಮ್ಮಲ್ಲಿ ಸಾಲ ನೀಡುವ ಸೌಲಭ್ಯ ಕೂಡ ಲಭ್ಯವಿರುವುದಾಗಿ ತಿಳಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಗೋಪಾಲ್ ಎಂ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಮಹಿಳಾ ಸಂಘ ಅಂಬ್ಲಮೊಗರು ಇದರ ಅಧ್ಯಕ್ಷರಾದ ದೀಪಕ್, ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರ ಎಲ್ಯಾರ್‌ಪದವು ಇದರ ಉಪಾಧ್ಯಕ್ಷ ಯೋಗೀಶ್, ಅರ್ಧನಾರೀಶ್ವರ ಮಹಿಳಾ ಮಂಡಳಿ, ಸಂಪಿಗೆದಡಿ, ಹರೇಕಳ ಇದರ ಅಧ್ಯಕ್ಷರಾದ ಬಬಿತಾ ಹೆಗ್ಡೆ, ಕುತ್ತಿಮುಗೇರು ಸೇವಾ ಸಮಿತಿ ಹರೇಕಳ ಇದರ ಉಪಾಧ್ಯಕ್ಷರಾದ ಸತೀಶ್ ಬಂಗೇರ, ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್, ಮಂಗಳೂರು ಇದರ ವೈದ್ಯರಾದ ಡಾ.ಆರಾಧನ, ಕಣಚೂರು ಮೆಡಿಕಲ್ ಕಾಲೇಜ್ ಆಸ್ಪತ್ರೆ ನಾಟೆಕಲ್ ಇದರ ವೈದ್ಯರಾದ ಡಾ.ಪ್ರಬಿತಾ ಮತ್ತು ಪಿ.ಆರ್.ಒ ರಶೀದ್, ಹಾಲು ಉತ್ಪಾದಕರ ಸಂಘ ಇದರ ಸಿಬ್ಬಂದಿ ವಿದ್ಯಾ ಮತ್ತು ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ವೈದ್ಯಕೀಯ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಮಹಿಳಾ ಸಂಘ ಅಂಬ್ಲಮೊಗರು, ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರ ಎಲ್ಯಾರ್ ಪದವು, ಶ್ರೀ ಅರ್ಧನಾರೀಶ್ವರ ಮಹಿಳಾ ಮಂಡಳಿ, ಸಂಪಿಗೆದಡಿ, ಹರೇಕಳ, ಕುತ್ತಿಮುಗೇರು ಸೇವಾ ಸಮಿತಿ, ಹರೇಕಳ, ಸಿ.ಎಸ್.ಐ. ಬೆಥಾನ್ಯ ಚರ್ಚ್ ಬೆಳ್ಮ, ಕೊಣಾಜೆ, ಹೋಲಿ ಕ್ರಾಸ್ ಚರ್ಚ್ ಎಲ್ಯಾರ್ ಪದವು ಹಾಗೂ ಹಾಲು ಉತ್ಪಾದಕರ ಸಂಘ, ಎಲ್ಯಾರ್ ಪದವು ಇವರುಗಳ ಜಂಟಿ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು. ಸುಮಾರು 200ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಔಷಧ ವಿತರಣೆ, ಹಾಗೂ ನೇತ್ರ ತಪಾಸಣೆ ನಡೆಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸಾಮಾನ್ಯ ಸೇವಾ ಕೇಂದ್ರ ಮಂಗಳೂರು ನಗರ, ಇವರ ವತಿಯಿಂದ ಆಯುಷ್ಮಾನ್ (ಅಭಾ) ಕಾರ್ಡ್ ಮತ್ತು ಇ-ಶ್ರಮ್ ಕಾರ್ಡ್ ಉಚಿತ ನೋಂದಣಿ ಮಾಡಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ರವಿಕಲಾ ವಿಶ್ವನಾಥ್ ಸ್ವಾಗತಿಸಿ, ಸಿಬ್ಬಂದಿ ನಿಶ್ಮಿತಾ ವಂದಿಸಿದರು. ಕವಿತಾ ಶೋಶಿತ್ ಕಾರ್ಯಕ್ರಮ ನಿರ್ವಹಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com


