Close Menu
    Top News

    ಆಧುನಿಕ ಬ್ಯಾಂಕಿಂಗ್ ಜೊತೆಗೆ ಸಮಾಜಮುಖಿ ಚಟುವಟಿಕೆಯಲ್ಲೂ ವಿಶ್ವಕರ್ಮ ಬ್ಯಾಂಕ್‌ ಮುಂಚೂಣಿ

    May 23, 2026

    ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಭೇಟಿ

    May 23, 2026

    ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಸತತ ಐದನೇ ಬಾರಿಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’

    May 23, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಸತತ ಐದನೇ ಬಾರಿಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’
    News

    ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಸತತ ಐದನೇ ಬಾರಿಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’

    adminBy adminMay 23, 2026

    ಮಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಆಟಲ್ ಪಿಂಚಣಿ ಯೋಜನೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿರುವ ದಕ್ಷಿಣ ಕನ್ನಡ జిಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ 2025-26ನೇ ಸಾಲಿನಲ್ಲೂ ಎಪಿವೈ ರಾಷ್ಟ್ರೀಯ ವಾರ್ಷಿಕ ಪ್ರಶಸ್ತಿಗೆ ಪಾತ್ರವಾಗಿದ್ದು, ಈ ಪ್ರಶಸ್ತಿಯನ್ನು ಬ್ಯಾಂಕ್ ಸತತ ಐದನೇ ಬಾರಿಗೆ ತನ್ನ ಮುಡಿಗೇರಿಸಿಕೊಂಡಿದೆ.

    https://chat.whatsapp.com/FCEnlTkAKCC0MGPhXtX4i4
    ಕೇಂದ್ರ ಸರಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕೋರಿಕೆಯಂತೆ ಎಸ್‌ಸಿಡಿಸಿಸಿ ಬ್ಯಾಂಕ್ 2019ರ ಜನವರಿ 11ರಂದು ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದು, ಬ್ಯಾಂಕ್‌ನ ಪ್ರತೀ ಶಾಖೆಯಲ್ಲೂ ಅಟಲ್ ಪಿಂಚಣಿ ಚಂದಾದಾರರನ್ನು ನೊಂದಾಯಿಸುವ ಗುರಿಯನ್ನು ಪ್ರತಿವರ್ಷ ನೀಡುತ್ತ ಬಂದಿದೆ. 2025-26ನೇ ಸಾಲಿಗೆ ಬ್ಯಾಂಕ್ ಪ್ರತೀ ಶಾಖೆಗೆ 20 ಚಂದಾದಾರರ ದಾಖಲಾತಿಯನ್ನು ನೀಡಿದ್ದು ಅದರಂತೆ ತನ್ನ 111 ಶಾಖೆಗಳಿಗೆ ಒಟ್ಟು 2,260 ಚಂದಾದಾರರನ್ನು ನೊಂದಾಯಿಸುವ ಗುರಿ ನೀಡಿತ್ತು. ಎಲ್ಲ ಶಾಖೆಗಳ ಮುಖಾಂತರ ಒಟ್ಟು 3,790 ಚಂದಾದಾರರನ್ನು ನೊಂದಾಯಿಸಿ ಗುರಿ ಮೀರಿದ ಸಾಧನೆ ಮಾಡಿದೆ. ಬ್ಯಾಂಕ್ ತನ್ನ ಸಾಮೂಹಿಕ ಪ್ರಯತ್ನ ಮತ್ತು ಅನುಕರಣೀಯ ಕಾರ್ಯನಿರ್ವಹಣೆಯಿಂದಾಗಿ ಅಟಲ್ ಪಿಂಚಣಿ ಯೋಜನೆಯಲ್ಲಿ ನಿಗದಿಪಡಿಸಲಾದ ವಾರ್ಷಿಕ ದಾಖಲಾತಿ ಗುರಿಯನ್ನು ಸಾಧಿಸಿದ್ದಕ್ಕಾಗಿ ಭಾರತ ಸರಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ.ಎನ್‌ ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಿ, ಎಪಿವೈ ವಾರ್ಷಿಕ ಪ್ರಶಸ್ತಿಯನ್ನು ನೀಡಿದೆ.

    ಗಣನೀಯ ಪ್ರಗತಿ
    2019-2000ರಿಂದ 2025-26ನೇ ಹಣಕಾಸು ವರ್ಷದಲ್ಲಿ ಅಟಲ್ ಪಿಂಚಣಿ ಯೋಜನೆಗೆ ಚಂದಾದಾರರನ್ನು ನೋಂದಾಯಿಸುವಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಗಣನೀಯ ಪ್ರಗತಿ ಸಾಧಿಸಿದೆ. ಇದುವರೆಗೆ ಒಟ್ಟು 16,564 ಎಪಿವೈ ಚಂದಾದಾರರ ನೋಂದಣಿ ಮಾಡಿದೆ. ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಅವರ ದಕ್ಷ ಮುಂದಾಳತ್ವದಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಬ್ಯಾಂಕ್ ಸತತ ಐದು (2021-22ರಿಂದ 2025-26ರವರೆಗೆ) ಬಾರಿ ಪಡೆದುಕೊಂಡಿದೆ.
    ಹೊಸದಿಲ್ಲಿಯಲ್ಲಿ ನಡೆದ ‘ಎಪಿವೈ ವಾರ್ಷಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕೇಂದ್ರ ಸರಕಾರದ ಹಣಕಾಸು ಸೇವೆಗಳಕಾರ್ಯದರ್ಶಿ ಎಂ.ನಾಗರಾಜ್, ವಿಶೇಷ ಕಾರ್ಯದರ್ಶಿ ಸಂಜಯ್‌ ಲೋಹಿಯಾ, ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಪೂರ್ಣಾವಧಿ ಸದಸ್ಯೆ ಮಮತಾ ಶಂಕರ್, ಕಾರ್ಯನಿರ್ವಾಹಕ ನಿರ್ದೇಶಕಿ ಸುಮಿತಾ ಕೌರ್‌ ಕಪೂರ್ ಹಾಗೂ ಮುಖ್ಯ ಮಹಾಪ್ರಬಂಧಕರಾದ ಪ್ರವೇಶ್ ಕುಮಾ‌ರ್ ಉಪಸ್ಥಿತಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಮಹಾಪ್ರಬಂಧಕಿಯರಾದ ಶರ್ಮಿಳಾ ಗಡಿಯಾರ್‌ ಮತ್ತು ವಿದ್ಯಾ ಕಾರ್ನಾಡ್ ಎಪಿವೈ ವಾರ್ಷಿಕ ಪ್ರಶಸ್ತಿ ಸ್ವೀಕರಿಸಿದ್ದು, ಶುಕ್ರವಾರ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಮಹಾಪ್ರಬಂಧಕ ಸುನಿಲ್ ಕುಮಾರ್‌ ಹೊಳ್ಳ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    APY National Award Atal Pinchani Yojane Dr.M.N.Rajendra Kumar SCDCC Bank
    Previous Articleಎಂಸಿಸಿ ಬ್ಯಾಂಕಿಗೆ ಇಥಿಯೋಪಿಯಾದ ಡ್ಯಾಶೆನ್ ಬ್ಯಾಂಕ್ ಎಸ್.ಸಿ. ಇದರ ಆಡಳಿತ ಮಂಡಳಿಯ ನಿರ್ದೇಶಕರ ಭೇಟಿ
    Next Article ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಭೇಟಿ

    Related Posts

    ಆಧುನಿಕ ಬ್ಯಾಂಕಿಂಗ್ ಜೊತೆಗೆ ಸಮಾಜಮುಖಿ ಚಟುವಟಿಕೆಯಲ್ಲೂ ವಿಶ್ವಕರ್ಮ ಬ್ಯಾಂಕ್‌ ಮುಂಚೂಣಿ

    May 23, 2026

    ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಭೇಟಿ

    May 23, 2026

    ಎಂಸಿಸಿ ಬ್ಯಾಂಕಿಗೆ ಇಥಿಯೋಪಿಯಾದ ಡ್ಯಾಶೆನ್ ಬ್ಯಾಂಕ್ ಎಸ್.ಸಿ. ಇದರ ಆಡಳಿತ ಮಂಡಳಿಯ ನಿರ್ದೇಶಕರ ಭೇಟಿ

    May 23, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆಧುನಿಕ ಬ್ಯಾಂಕಿಂಗ್ ಜೊತೆಗೆ ಸಮಾಜಮುಖಿ ಚಟುವಟಿಕೆಯಲ್ಲೂ ವಿಶ್ವಕರ್ಮ ಬ್ಯಾಂಕ್‌ ಮುಂಚೂಣಿ

    May 23, 2026

    ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಭೇಟಿ

    May 23, 2026

    ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಸತತ ಐದನೇ ಬಾರಿಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’

    May 23, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.