ಮಂಗಳೂರು: ಎಸ್.ಕೆ.ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ಕಚೇರಿ “ವಿಶ್ವಸೌಧ”ಕ್ಕೆ ಇತ್ತೀಚೆಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಐಎಎಸ್ ಭೇಟಿ ನೀಡಿದರು.
https://chat.whatsapp.com/FCEnlTkAKCC0MGPhXtX4i4
ಎಸ್.ಕೆ.ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ, ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು ಮತ್ತು ಪ್ರಧಾನ ವ್ಯವಸ್ಥಾಪಕರು ಕೆ.ಎಸ್. ಪ್ರಭಾಕರ್ ಅವರನ್ನು ಸ್ವಾಗತಿಸಿ, ಗೌರವಿಸಿ ಸನ್ಮಾನಿಸಿದರು. ಸಂಸ್ಥೆಯ ಆರ್ಥಿಕ ಸ್ಥಿತಿಗತಿಗಳನ್ನು ಮತ್ತು ನಡೆದು ಬಂದ ದಾರಿಯನ್ನು ಪರಿಶೀಲಿಸಿ ದಕ್ಷಿಣ ಕನ್ನಡದಲ್ಲಿ ತನ್ನ ವಿಶಿಷ್ಟ ಛಾಪು ಮೂಡಿಸಿರುವ ಎಸ್.ಕೆ.ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ಕಾರ್ಯಾಚರಣೆ ಮತ್ತು ಪ್ರಮುಖ ಸಾಮರ್ಥ್ಯಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಕೆ.ಎಸ್. ಪ್ರಭಾಕರ್ ಅವರು ಶ್ಲಾಘಿಸಿದರು. ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ದಿ| ಪಾಲ್ಕೆ ಬಾಬುರಾಯ ಆಚಾರ್ಯರ ನೇತೃತ್ವದಲ್ಲಿ ಸ್ಥಾಪನೆಗೊಂಡ ಈ ಸಂಸ್ಥೆಯ ಹೆಸರು ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಬೆಳೆಯುವಂತಾಗಲಿ ಎಂದು ಶುಭ ಹಾರೈಸಿದರು.
ಸೊಸೈಟಿಯ ನಿರ್ದೇಶಕರಾದ ವಿ.ಜಯ ಆಚಾರ್, ಕೆ.ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್ ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ., ರಮೇಶ್ ರಾವ್ ಯು, ಚಂದ್ರಶೇಖರ್ ಎ.ಎಸ್., ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com



