Close Menu
    Top News

    ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯ ಫಲಿತಾಂಶ ಪ್ರಕಟಕ್ಕೆ ಕೋರ್ಟ್ ಹಸಿರು ನಿಶಾನೆ, ಜೂನ್ 3ಕ್ಕೆ ದಿನ ನಿಗದಿ

    May 27, 2026

    10 ವರ್ಷಗಳ ಅಧಿಕಾರಾವಧಿಯ ನಂತರ ಸಹಕಾರಿ ಬ್ಯಾಂಕ್ ನಿರ್ದೇಶಕರಿಗೆ 3 ವರ್ಷಗಳ ಕೂಲಿಂಗ್-ಆಫ್ ಅವಧಿ: ಆರ್‌ಬಿಐ

    May 27, 2026

    ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಿಬ್ಬಂದಿ ಭೇಟಿ

    May 25, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯ ಫಲಿತಾಂಶ ಪ್ರಕಟಕ್ಕೆ ಕೋರ್ಟ್ ಹಸಿರು ನಿಶಾನೆ, ಜೂನ್ 3ಕ್ಕೆ ದಿನ ನಿಗದಿ
    News

    ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯ ಫಲಿತಾಂಶ ಪ್ರಕಟಕ್ಕೆ ಕೋರ್ಟ್ ಹಸಿರು ನಿಶಾನೆ, ಜೂನ್ 3ಕ್ಕೆ ದಿನ ನಿಗದಿ

    adminBy adminMay 27, 2026

    ಮೂಡುಬಿದಿರೆ: ಕಳೆದ ಒಂದೂವರೆ ವರ್ಷಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಫಲಿತಾಂಶ ಪ್ರಕಟಣೆಗೆ ಕೊನೆಗೂ ನ್ಯಾಯಾಲಯ ಅನುಮತಿ ನೀಡಿದೆ.

    https://chat.whatsapp.com/FCEnlTkAKCC0MGPhXtX4i4

    ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯ ನೀಡಿದ ಆದೇಶದಂತೆ, ಜೂನ್ 3ರಂದು ಬೆಳಗ್ಗೆ 11.30ಕ್ಕೆ ಸಂಘದ ಪ್ರಧಾನ ಕಚೇರಿಯ ಆವರಣದಲ್ಲಿ ಅಧಿಕೃತವಾಗಿ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
    ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಗೆ 2025ರ ಜುಲೈ 10ರಂದು ಚುನಾವಣೆ ನಡೆದಿತ್ತು. ಆದರೆ ಸಂಘದ ಉಪನಿಯಮಾವಳಿ ಹಾಗೂ ಮತದಾನದ ಪ್ರಕ್ರಿಯೆಗೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಾಗಿದ್ದ ಹಿನ್ನೆಲೆಯಲ್ಲಿ ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆಗೆ ತಡೆ ವಿಧಿಸಲಾಗಿತ್ತು. ಆಡಳಿತಾಧಿಕಾರಿಗಳ ಅವಧಿಯಲ್ಲೇ ಚುನಾವಣೆ ನಡೆದಿದ್ದರೂ, ಕಾನೂನು ಹೋರಾಟದ ಕಾರಣದಿಂದ ಫಲಿತಾಂಶವನ್ನು ಕಾಯ್ದಿರಿಸಲಾಗಿತ್ತು.
    ಈ ನಡುವೆ, ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ನ್ಯಾಯಾಲಯದಲ್ಲಿ ದಾಖಲಾಗಿದ್ದ ದಾವೆ ಪ್ರಕರಣದ ವಿಚಾರಣೆ ಪೂರ್ಣಗೊಂಡು, ಮೇ 25ರಂದು ಅಂತಿಮ ಆದೇಶ ಹೊರಬಿದ್ದಿದೆ.
    ನ್ಯಾಯಾಲಯದ ಈ ಮಹತ್ವದ ಆದೇಶದ ಹಿನ್ನೆಲೆಯಲ್ಲಿ, ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ರಿಟರ್ನಿಂಗ್ ಅಧಿಕಾರಿ ಜೂನ್ 3ರಂದು ಫಲಿತಾಂಶ ಘೋಷಣೆಗೆ ದಿನ ನಿಗದಿಪಡಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳು ಅಂದು ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Department Cooperative Registrar Election result Kallabettu Seva Sahakari Sangha
    Previous Article10 ವರ್ಷಗಳ ಅಧಿಕಾರಾವಧಿಯ ನಂತರ ಸಹಕಾರಿ ಬ್ಯಾಂಕ್ ನಿರ್ದೇಶಕರಿಗೆ 3 ವರ್ಷಗಳ ಕೂಲಿಂಗ್-ಆಫ್ ಅವಧಿ: ಆರ್‌ಬಿಐ

    Related Posts

    10 ವರ್ಷಗಳ ಅಧಿಕಾರಾವಧಿಯ ನಂತರ ಸಹಕಾರಿ ಬ್ಯಾಂಕ್ ನಿರ್ದೇಶಕರಿಗೆ 3 ವರ್ಷಗಳ ಕೂಲಿಂಗ್-ಆಫ್ ಅವಧಿ: ಆರ್‌ಬಿಐ

    May 27, 2026

    ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಿಬ್ಬಂದಿ ಭೇಟಿ

    May 25, 2026

    ಆಧುನಿಕ ಬ್ಯಾಂಕಿಂಗ್ ಜೊತೆಗೆ ಸಮಾಜಮುಖಿ ಚಟುವಟಿಕೆಯಲ್ಲೂ ವಿಶ್ವಕರ್ಮ ಬ್ಯಾಂಕ್‌ ಮುಂಚೂಣಿ

    May 23, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆಯ ಫಲಿತಾಂಶ ಪ್ರಕಟಕ್ಕೆ ಕೋರ್ಟ್ ಹಸಿರು ನಿಶಾನೆ, ಜೂನ್ 3ಕ್ಕೆ ದಿನ ನಿಗದಿ

    May 27, 2026

    10 ವರ್ಷಗಳ ಅಧಿಕಾರಾವಧಿಯ ನಂತರ ಸಹಕಾರಿ ಬ್ಯಾಂಕ್ ನಿರ್ದೇಶಕರಿಗೆ 3 ವರ್ಷಗಳ ಕೂಲಿಂಗ್-ಆಫ್ ಅವಧಿ: ಆರ್‌ಬಿಐ

    May 27, 2026

    ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಿಬ್ಬಂದಿ ಭೇಟಿ

    May 25, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.