Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ

    adminBy adminMay 29, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನೀರುಮಾರ್ಗ ಶಾಖೆಯಲ್ಲಿ ಜರುಗಿತು.

    https://chat.whatsapp.com/FCEnlTkAKCC0MGPhXtX4i4
    ಸಂಘದ ಗ್ರಾಹಕರಾದ ಪುಟ್ಟಸ್ವಾಮಿ ಎಚ್., ಶ್ರೀಧರ, ರಾಜೇಶ್, ಶಶಿಪ್ರಭಾ ಹಾಗೂ ನಾರಾಯಣ ಪೂಜಾರಿ ದೀಪ ಪ್ರಜ್ವಲನೆ ಮಾಡಿದರು. ಪುಟ್ಟಸ್ವಾಮಿ ಎಚ್. ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನೀರುಮಾರ್ಗ ಪರಿಸರದಲ್ಲಿರುವ ಉತ್ತಮ ಸೊಸೈಟಿಯಾಗಿದ್ದು, ಇಲ್ಲಿನ ಜನರ ಅಚ್ಚುಮೆಚ್ಚಿನ ಸೊಸೈಟಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಶಶಿಪ್ರಭಾ ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸೇವಾ ಮನೋಭಾವದ ಸಿಬ್ಬಂದಿಯಿಂದ ಉನ್ನತ ಸ್ಥಾನಕ್ಕೆ ಏರುವುದರಲ್ಲಿ ಎರಡು ಮಾತಿಲ್ಲ ಎಂದು ಶ್ಲಾಘಿಸಿದರು. ಸದಸ್ಯರಾದ ಪ್ರಮೀಳಾ ಸದಾಶಿವ ಶೆಟ್ಟಿ ಮಾತನಾಡಿ ಸಂಘದ ಶಾಖೆಗಳಲ್ಲಿ ಸಿಬ್ಬಂದಿಗಳ ಸಹಕಾರವು ಅತ್ಯುತ್ತಮವಾಗಿದ್ದು ದೈನಂದಿನ ವ್ಯವಹಾರಕ್ಕೆ ತುಂಬಾ ಉಪಯುಕ್ತ ಸಂಘವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತ ಬರುತ್ತಿದೆ. ಸಂಘದ ಸದಸ್ಯರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ. ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10.50 ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000ವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು ಎಂದರು.
    ಸಂಘದ ನಿರ್ದೇಶಕರಾದ ಗೋಪಾಲ್ ಎಮ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತರರರು ಉಪಸ್ಥಿತರಿದ್ದರು. ಶಾಖೆಯ ಸಿಬ್ಬಂದಿ ಅನುಜಿತ ಸ್ವಾಗತಿಸಿ, ಸುಮಲತಾ ವಂದಿಸಿದರು. ಶಾಖೆಯ ಪ್ರಭಾರ ಶಾಖಾಧಿಕಾರಿ ವರಣ್ ರಾಜ್ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Atmashakthi Vividhoddesha Sahakari Sangha Banking Chitharanjan Bolar Co Operative ministry Cooperative Registrar Neerumarga
    Previous Articleಎಂಸಿಸಿ ಬ್ಯಾಂಕ್ ಸಂತೆಕಟ್ಟೆ ಶಾಖೆಯ ರೂ. 10 ಕೋಟಿ ವ್ಯವಹಾರ ಸಾಧನೆ ಸಂಭ್ರಮ; ಶಾಲೆಗಳಿಗೆ ಪುಸ್ತಕ ವಿತರಣೆ
    Next Article ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅಭಿವೃದ್ಧಿಯಲ್ಲಿ ಜಿಲ್ಲೆ, ರಾಜ್ಯಕ್ಕೆ ಮಾದರಿ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.