Close Menu
    Top News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಪರಿಸರ ದಿನಾಚರಣೆ, ಬೈರಾಡಿ ಕೆರೆ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    June 5, 2026

    ಕೋಟ ಮೂರ್ತೆದಾರರ ಸಹಕಾರಿ ಸಂಘದ ಮಹಾಸಭೆ

    June 5, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

    June 4, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಪರಿಸರ ದಿನಾಚರಣೆ, ಬೈರಾಡಿ ಕೆರೆ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಪರಿಸರ ದಿನಾಚರಣೆ, ಬೈರಾಡಿ ಕೆರೆ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    adminBy adminJune 5, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಂಘದ ಪ್ರಧಾನ ಕಚೇರಿಯ ಬಳಿಯಿರುವ ಬೈರಾಡಿ ಕೆರೆಯ ವ್ಯಾಪ್ತಿಯಲ್ಲಿ ಸಸಿಗಳನ್ನು ನೆಡಲಾಯಿತು.

     

    ಪರಿಸರ ಪ್ರೇಮಿ ಮಾಧವ ಉಳ್ಳಾಲ ಮಾರ್ಗದರ್ಶನದಲ್ಲಿ ಬೈರಾಡಿ ಕೆರೆಯ ಸುತ್ತಮುತ್ತ ಸಸಿಗಳನ್ನು ನೆಡಲಾಯಿತು.
    ಬೈರಾಡಿ ಕೆರೆ ಸಂರಕ್ಷಣಾ ಹಾಗೂ ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಡಾ.ಅಣ್ಣಯ್ಯ ಕುಲಾಲ್ ಉಳ್ತೂರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರ ಕಾರ್ಯಕ್ರಮಗಳನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ನೇತೃತ್ವದಲ್ಲಿ ಹಮ್ಮಿಕೊಂಡು ಬರುತ್ತಿದೆ. ಬೈರಾಡಿ ಕೆರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮುಂದಿನ ದಿನಗಳಲ್ಲಿ ನಮ್ಮೊಂದಿಗೆ ಕೈ ಜೋಡಿಸಬೇಕೆಂದು ವಿನಂತಿಸಿದರು.
    ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ “ಸಂಘದ ವತಿಯಿಂದ ಕಳೆದ 14 ವರ್ಷಗಳಿಂದ ವಿಶ್ವ ಪರಿಸರ ದಿನಾಚರಣೆ ಮಾಡಿಕೊಂಡು ಬರಲಾಗುತ್ತಿದೆ. ಈ ಹಿಂದೆ ವಿಶ್ವ ಪರಿಸರ ದಿನದಂದು ಪಡೀಲ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾಗೂ ಸುತ್ತಮುತ್ತ ಪರಿಸರದಲ್ಲಿ ಸಸಿಗಳನ್ನು ನೆಡಲಾಗಿದೆ. ಅಲ್ಲದೇ ಸಂಘದ ಪ್ರಧಾನ ಕಚೇರಿಯ ಆವರಣದಲ್ಲಿ ಸಸಿಗಳನ್ನು ನೆಟ್ಟು, ಪೋಷಿಸುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷ ಬೈರಾಡಿ ಕೆರೆ ಸಂರಕ್ಷಣಾ ಮತ್ತು ಅಭಿವೃದ್ದಿ ಸಮಿತಿ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಆಯೋಜನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಬೈರಾಡಿ ಕೆರೆಯ ಸ್ವಚ್ಚತೆ ಕಾಪಾಡುವಲ್ಲಿ ಸ್ಥಳೀಯ ಸಂಘ-ಸಂಸ್ಥೆಗಳೊಂದಿಗೆ ನಿರಂತರವಾಗಿ ಕೈ ಜೋಡಿಸಲಾಗುವುದು ಎಂದರು.
    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಮಂಗಳೂರು ಮಹಾನಗರ ಪಾಲಿಕೆಯ ಪರಿಸರ ವಿಭಾಗದ ಇಂಜಿನಿಯರ್ ದಯಾನಂದ ಪೂಜಾರಿ, ಸಯ್ಯದ್, ಬೈರಾಡಿ ಕೆರೆ ಸಂರಕ್ಷಣಾ ಹಾಗೂ ಅಭಿವೃದ್ದಿ ಸಮಿತಿಯ ಪದಾಧಿಕಾರಿಗಳಾದ ಅನಿಲ್ ಕೆಂಬಾರ್, ಸಂತೋಷ್ ಶೆಟ್ಟಿ, ಸುರೇಶ್ ಆಚಾರ್, ವಿಕ್ಕಿ ಪೂಜಾರಿ ಮತ್ತಿತ್ತರರು, ಹಾಗೂ ಮಡಿಲು ಸೇವಾ ತಂಡ ಪಡೀಲು ಇದರ ಗೌರವಾಧ್ಯಕ್ಷರಾದ ಪುಷ್ಪಲತಾ, ಅಧ್ಯಕ್ಷರಾದ ಗಜೇಂದ್ರ, ಕರ್ನಾಟಕ ಟೈಲರ್ ಅಸೋಷಿಯನ್‌ನ ರಾಜ್ಯ ಸಮಿತಿಯ ಕೋಶಾಧಿಕಾರಿ ಪ್ರಜ್ವಲ್ ಕುಮಾರ್, ಮಂಗಳೂರು ಸಮಿತಿಯ ಅಧ್ಯಕ್ಷರಾದ ಹರೀಶ್ ರೈ, ಸ್ಥಳೀಯ ಸಂಘ -ಸಂಸ್ಥೆಗಳ ಪಧಾಧಿಕಾರಿಗಳು ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Annayya Kulal Ulturu Atmashakti vividhoddesha sahakara sangha Bairadi Kere Vishwa Parisara Dina
    Previous Articleಕೋಟ ಮೂರ್ತೆದಾರರ ಸಹಕಾರಿ ಸಂಘದ ಮಹಾಸಭೆ

    Related Posts

    ಕೋಟ ಮೂರ್ತೆದಾರರ ಸಹಕಾರಿ ಸಂಘದ ಮಹಾಸಭೆ

    June 5, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

    June 4, 2026

    ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವಕ್ಕೆ ನಂ.1

    June 3, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಪರಿಸರ ದಿನಾಚರಣೆ, ಬೈರಾಡಿ ಕೆರೆ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    June 5, 2026

    ಕೋಟ ಮೂರ್ತೆದಾರರ ಸಹಕಾರಿ ಸಂಘದ ಮಹಾಸಭೆ

    June 5, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

    June 4, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.