Close Menu
    Top News

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಪರಿಸರ ದಿನಾಚರಣೆ, ಬೈರಾಡಿ ಕೆರೆ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    June 5, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ
    News

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    adminBy adminJune 6, 2026

    ಮಂಗಳೂರು: ಪ್ರಣವ ಸೌಹಾರ್ದ ಸೊಸೈಟಿಯ ಆಶ್ರಯದಲ್ಲಿ ಟೀಂ ಉಬಾರ್, ಸುಳ್ಯ ರೈತ ಉತ್ಪಾದಕ ಕಂಪನಿ, ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ, ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳ ಸಹಯೋಗದೊಂದಿಗೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದಲ್ಲಿ ಪ್ರಪ್ರಥಮ ಬಾರಿ ಹಲಸು ಮತ್ತು ಮಾವು ಮೇಳವನ್ನು ಜೂನ್‌ 12ರಿಂದ 14ರ ತನಕ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ವಠಾರ, ಕೇರ್ಪಳ ಇಲ್ಲಿ ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಜೂನ್‌ 12ರ ಶುಕ್ರವಾರ ಬೆಳಗ್ಗೆ 10ಕ್ಕೆಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಪ್ರಣವ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ, ಹಲಸು-ಮಾವು ಮೇಳ-2026ರ ಗೌರವಾಧ್ಯಕ್ಷರಾದ ಜಿ.ಆರ್. ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಮೇಳವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ತಹಸೀಲ್ದಾರ್‌ ಮಂಜುಳಾ ಎಂ., ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ ಚಿದಾನಂದ, ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ ಎಸ್.ಆರ್., ಹಲಸು ಮಾವು ಮೇಳದ ಗೌರವ ಮಾರ್ಗದರ್ಶಕ, ಸುದ್ದಿ ಮಾಧ್ಯಮ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ. ಶಿವಾನಂದ, ಕೃಷಿ ಇಲಾಖೆಯ ಮಂಗಳೂರು ಜಂಟಿ ನಿರ್ದೇಶಕ ಹೊನ್ನಪ್ಪ ಗೋವಿಂದೇಗೌಡ, ಮಂಗಳೂರು ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಐ.ಕೆ.ದೊಡ್ಡಮನಿ, ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಭಾಗವಹಿಸಲಿದ್ದಾರೆ.
    ಅಂದು ಮಧ್ಯಾಹ್ನ ಕೃಷಿ ಇಲಾಖೆಯ ಸಹಯೋಗದಲ್ಲಿ 12.00ರಿಂದ 1.30ರ ತನಕ ಹಲಸು-ಮಾವು-ಗೇರು ಮೌಲ್ಯವರ್ದಿತ ಉತ್ಪನ್ನಗಳ ಕುರಿತ ವಿಚಾರಗೋಷ್ಠಿ ನಡೆಯಲಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಪಡ್ರೆ, ಪ್ರಣವ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರಶಾಂತ್ ಪೈ, ಸುಳ್ಯ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್ ಎಂ.ಎಸ್ ಭಾಗವಹಿಸಲಿದ್ದಾರೆ.
    ಜೂನ್‌ 13ರ ಶನಿವಾರ ಬೆಳಗ್ಗೆ 10ರಿಂದ 11.30ರ ತನಕ ಕಾಫಿ ಗಿಡಗಳ ನಿರ್ವಹಣೆ ಕುರಿತ ವಿಚಾರಗೋಷ್ಠಿ ನಡೆಯಲಿದ್ದು, ಸುಳ್ಯದ ಪ್ರಗತಿಪರ ಕಾಫಿ ಬೆಳೆಗಾರ ಗೋವಿಂದ ಭಟ್ ಚೈಪೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಚೆಟ್ಪಳ್ಳಿ ಸಂಶೋಧನಾ ಕೇಂದ್ರ ಕಾಫಿ ಮಂಡಳಿಯ ವಿಜ್ಞಾನಿ ಡಾ.ಎಸ್.ಎ. ನಡಾಫ್ ಭಾಗವಹಿಸುವರು. ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರಮೋದ್‌ ಸಿ.ಎಂ, ಆರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಗೌರವ ಉಪಸ್ಥಿತರಿರಲಿದ್ದಾರೆ.


    ಮಧ್ಯಾಹ್ನ 12.00ರಿಂದ 1.30ರ ತನಕ ತೋಟಗಾರಿಕಾ ಇಲಾಖೆ ಸಹಯೋಗದಲ್ಲಿ ಕಾಳುಮೆಣಸಿನ ನಿರ್ವಹಣೆ ಕುರಿತ ವಿಚಾರಗೋಷ್ಠಿ ನಡೆಯಲಿದ್ದು, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಉಪಾಧ್ಯಕ್ಷ ವಿಜಯಕುಮಾರ್ ಎಂ.ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಕಾಳುಮೆಣಸು ಬೆಳೆಗಾರ ಸುರೇಶ್‌ ಬಲ್ನಾಡು ಭಾಗವಹಿಸುವರು. ಸುಳ್ಯದ ಸಹಾಯಕ ತೋಟಗಾರಿಕಾ ನಿರ್ದೇಶಕಿ ಸುಹಾನ ಪಿ.ಕೆ., ಪ್ರಗತಿಪರ ಯುವ ಕೃಷಿಕ ಮಹೇಶ್‌ ಗಟ್ಟಿಗಾರು ಗೌರವ ಉಪಸ್ಥಿತಿ ಇರಲಿದ್ದಾರೆ. ಮಧ್ಯಾಹ್ನ 2ರಿಂದ 3ರ ತನಕ ಸುಳ್ಯ ತಾಲೂಕಿನ ವಿವಿಧ ಕೃಷಿ ಸಾಧಕರ ಸಾಕ್ಷ್ಯ ಚಿತ್ರ ಪ್ರದರ್ಶನ ಹಾಗೂ ಗೌರವಾರ್ಪಣೆ ನಡೆಯಲಿದೆ. 3ರಿಂದ ಸಂಜೆ 4ರ ತನಕ ಮಹಿಳೆಯರಿಗಾಗಿ ಹಲಸು-ಮಾವು-ಗೇರು ಉತ್ಪನ್ನಗಳಿಂದ ತಯಾರಿಸಿದ ಅಡುಗೆ ಸ್ಪರ್ಧೆ ನಡೆಯಲಿದೆ. (ಅಡುಗೆಯನ್ನು ಮನೆಯಲ್ಲಿ ಮಾಡಿ ತಂದು ಪ್ರದರ್ಶನಕ್ಕಿಡುವುದು.) ಜೂನ್‌ 14ರಂದು 10ರಿಂದ 11ರ ತನಕ ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಕುರಿತ ವಿಚಾರಗೋಷ್ಠಿ ನಡೆಯಲಿದ್ದು, ಕ್ಯಾಂಪ್ಕೋ ನಿರ್ದೇಶಕ ಎ.ವಿ ತೀರ್ಥರಾಮ ಅಧ್ಯಕ್ಷತೆ ವಹಿಸಲಿದ್ದಾರೆ. ಅವೆಂಚೂರ್‌ ಆಗ್ರೋ ಪ್ರೊಡಕ್ಟ್‌ ಆಡಳಿತ ನಿರ್ದೇಶಕ ಡಾ.ಬಿ.ಕೆ ವಿಶುಕುಮಾರ್‌ ಸಂಪನ್ಮೂಲ ವ್ಯಕ್ತಿಯಾಗಲಿದ್ದಾರೆ. ಸುದ್ದಿ ಬಿಡುಗಡೆ ಸುಳ್ಯ ಸಂಪಾದಕ ಹರೀಶ್‌ ಬಂಟ್ವಾಳ್‌, ಸುಳ್ಯ ರೈತ ಉತ್ಪಾದಕ ಕಂಪನಿಯ ನಿರ್ದೇಶಕ ಸುರೇಶ್‌ ರೈ ಗೌರವ ಉಪಸ್ಥಿತರಿರಲಿದ್ದಾರೆ. ಬೆಳಗ್ಗೆ 11ರಿಂದ 11.45ರ ತನಕ ಹಲಸಿನ ಬೀಜದ ಉಪಉತ್ಪನ್ನ ತಯಾರಿಕೆ ಕುರಿತ ವಿಚಾರಗೋಷ್ಠಿ ನಡೆಯಲಿದೆ. ಟಿ.ಎ.ಪಿ.ಸಿ.ಎಂ.ಎಸ್ ಸುಳ್ಯದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಂಪನ್ಮೂಲ ವ್ಯಕ್ತಿಯಾಗಿ ಅಭಿಜ್ಞಾನ ಫುಡ್‌ ಪ್ರೊಡಕ್ಟ್‌ನ ಆಡಳಿತ ನಿರ್ದೇಶಕ ರಾಧಾಕೃಷ್ಣ ಇಟ್ಟಿಗುಂಡಿ ಭಾಗವಹಿಸುವರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳು ಮಾಧವ ಗೌಡ, ಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆಯ ನಿರ್ದೇಶಕ ಸೋಮಪ್ಪ ನಾಯ್ಕ್‌ ಗೌರವ ಉಪಸ್ಥಿತರಿರಲಿದ್ದಾರೆ. ಮಧ್ಯಾಹ್ನ 12ರಿಂದ ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಕುರಿತ ವಿಚಾರಗೋಷ್ಠಿ ನಡೆಯಲಿದ್ದು, ರೋಟರಿ ಕ್ಲಬ್‌ ಸುಳ್ಯದ ನಿಯೋಜಿತ ಅಧ್ಯಕ್ಷರಾದ ಲತಾ ಮಧುಸೂದನ್ ಅಧ್ಯಕ್ಷತೆ ವಹಿಸುವರು. ಪಿಂಗಾರ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ರಾಮ್ ಕಿಶೋರ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳುವರು. ಕೆವಿಜಿ ಡೆಂಟಲ್‌ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕ ಮೌರ್ಯ ಆರ್‌ ಕುರುಂಜಿ ಸುಳ್ಯ ರೈತ ಉತ್ಪಾದಕ ಕಂಪನಿಯ ನಿರ್ದೇಶಕ ಭಾಸ್ಕರ ನಾಯರ್‌ ಎಂ.ಆರ್‌ ಗೌರವ ಉಪಸ್ಥಿತರಿರಲಿದ್ದಾರೆ.
    ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಜೂನ್‌ 12ರಂದು ಸಂಜೆ 6ರಿಂದ 7ರ ತನಕ ಸುಳ್ಯ ತಾಲೂಕು ಸಂಜೀವಿನಿ ಒಕ್ಕೂಟದ ಸದಸ್ಯರಿಂದ ಸಾಂಸ್ಕೃತಿಕ ವೈಭವ, 7ರಿಂದ 8.30ರ ತನಕ ನಟರಾಜ ನೃತ್ಯನಿಕೇತನ (ರಿ.) ಕಲ್ಲುಗುಂಡಿ, ಸುಳ್ಯ ಶಾಖೆಯ ಶಿಷ್ಯ ವೃಂದದವರಿಂದ ವಿದುಷಿ ಇಂದುಮತಿ ನಾಗೇಶ್ ನಿರ್ದೇಶನದಲ್ಲಿ ನೃತ್ಯ ವೈಭವ ನಡೆಯಲಿದೆ. ಜೂನ್‌ 13ರಂದು ಸಂಜೆ 6ರಿಂದ 7ರ ತನಕ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘ, ದೇಲಂಪಾಡಿ ಮಹಿಳಾ ಯಕ್ಷಗಾನ ತಂಡದಿಂದ “ದಕ್ಷಯಜ್ಞ”, 7ರಿಂದ 8ರ ತನಕ ಸ್ಥಳೀಯ ಕಲಾವಿದರಿಂದ ವಿವಿಧ ವಿನೋದಾವಳಿಗಳು, ಜೂನ್‌ 14ರ ಸಂಜೆ 4ರಿಂದ 4.30ರ ತನಕ ಪಂಡಿತ್ ಸಿದ್ದಲಿಂಗೇಶ್ ಕಣವಿ, ಗಾನಯೋಗಿ ಮ್ಯೂಸಿಕ್ ಅಕಾಡೆಮಿ ಬೆಂಗಳೂರು ಇವರ ಶಿಷ್ಯರಾದ ಮಾನಂಜಿ ಸಹೋದರಿಯರಿಂದ ಸುಗಮ ಸಂಗೀತ, ನಂತರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಭಿನೇಶ್ ಕನೆಮರಡ್ಕ ಇವರಿಂದ ಕೂಚುಪುಡಿ ನೃತ್ಯಶಿಲ್ಪಂ, ಸಂಜೆ 6.30ರಿಂದ 8.30ರ ತನಕ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರಿಂದ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ.
    ಜೂನ್‌ 14ರ ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಹಲಸು ಮಾವು ಮೇಳ-2026 ಹಾಗೂ ಸುಳ್ಯ ರೈತ ಉತ್ಪಾದಕ ಕಂಪನಿ ಸುಳ್ಯದ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಉಪಾಧ್ಯಕ್ಷ, ಅಕಾಡೆಮಿ ಆಫ್ ಅಬರಲ್ ಎಜುಕೇಷನ್ ಕಮಿಟಿ ‘ಬಿ’ ಇದರ ಅಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿ., ರಾಜ್ಯ ರೈತ ರತ್ನ ಪ್ರಶಸ್ತಿ ಪುರಸ್ಕೃತ ಅಶೋಕ್ ಕುಮಾರ್ ಕೆ.ಎಸ್., ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮುಸ್ತಾಫ ಕೆ.ಎಂ., ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಕಾಧಿಕಾರಿ ರಾಜಣ್ಣ, ಕೃಷಿಕ ಸಮಾಜ ಸುಳ್ಯ ಅಧ್ಯಕ್ಷ ಎ.ಟಿ. ಕುಸುಮಾಧರ, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಮುಖ್ಯಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ಭಾಗವಹಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    G R Prasad Halasu Mela Mavu Mela Pranava Souharda Sahakari Sangha Raitha Utpadaka Campany Sulya Team Ubaar
    Previous Articleನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    Related Posts

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಪರಿಸರ ದಿನಾಚರಣೆ, ಬೈರಾಡಿ ಕೆರೆ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    June 5, 2026

    ಕೋಟ ಮೂರ್ತೆದಾರರ ಸಹಕಾರಿ ಸಂಘದ ಮಹಾಸಭೆ

    June 5, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಪರಿಸರ ದಿನಾಚರಣೆ, ಬೈರಾಡಿ ಕೆರೆ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    June 5, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.