ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವ ಪ್ರಯುಕ್ತ ಗ್ರಾಹಕ ಸಭೆಯು ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಜರುಗಿತು.
https://chat.whatsapp.com/FCEnlTkAKCC0MGPhXtX4i4
ಸಂಘದ ಸದಸ್ಯರಾದ ವಿಜಯ್ ಕುಮಾರ್, ಪುರುಷೋತ್ತಮ ಕೆ, ಗೋಪಾಲ್ ಯು.ಕೆ ಹಾಗೂ ದೇವಕಿ ಆರ್ ಉಳ್ಳಾಲ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಸದಸ್ಯ ವಿಜಯ್ ಕುಮಾರ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ. ಇಲ್ಲಿನ ಸಿಬ್ಬಂದಿಗಳ ನಗುಮುಖದ ಸೇವೆ ಶ್ಲಾಘನೀಯ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇತರೆ ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಜನರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರ ಏರ್ಪಡಿಸುತ್ತಿರುವುದು ಶ್ಲಾಘನೀಯ ಎಂದರು.
ಪುರುಷೋತ್ತಮ ಕೆ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಹಮ್ಮಿಕೊಳ್ಳುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ” ಎಂದರು. ದೇವಕಿ ಆರ್ ಉಳ್ಳಾಲ್ ಮಾತನಾಡಿ ರಾಷ್ಟ್ರೀಕೃತ ಬ್ಯಾಂಕ್‌ನ ಸೇವೆಗಿಂತ ಸಹಕಾರಿ ಸಂಘದ ಸೇವೆಯು ವೇಗದಿಂದ ಕೂಡಿರುತ್ತದೆ ಮತ್ತು ಸರಳವಾಗಿರುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಸದಸ್ಯರಾದ ಪುಷ್ಪರಾಜ್, ಯು ಐತ್ತಪ್ಪ ಶೆಟ್ಟಿಗಾರ್ ಮತ್ತು ಮಾಧವ ಶೆಟ್ಟಿ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಸಹಕಾರಿ ಸಂಘದ ಸದಸ್ಯರ ಸಹಕಾರದಿಂದಲೇ ನಾವು ಇಷ್ಟು ಯಶಸ್ಸು ಸಾಧಿಸಲು ಸಾಧ್ಯವಾಯಿತು. ಸಂಘದಲ್ಲಿ ಶೇ.95 ಮಹಿಳಾ ಸಿಬ್ಬಂದಿಗಳೇ ಕಾರ್ಯನಿರ್ವಹಿಸುತ್ತಿದ್ದು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತ ಬರುತ್ತಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಠ ಮೌಲ್ಯ ರೂ. 12,000ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸದಸ್ಯರಿಗೆ ಸಾಲ ನೀಡಲಾಗುವುದು. ಜೀವ ವಿಮೆ, ವಾಹನ ವಿಮೆ, ಆರೋಗ್ಯ ವಿಮೆ ಸೇವಾ ಸೌಲಭ್ಯವನ್ನು ಸ್ಮರ್ಧಾತ್ಮಕ ಪ್ರೀಮಿಯಂನಲ್ಲಿ ನೀಡಲಾಗುತ್ತಿದೆ, ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಡಿ.ಸಿ ಆಫೀಸ್ ಶಾಖೆಯಲ್ಲಿ ವ್ಯವಹಾರದ ದಿನಗಳಲ್ಲಿ ಸಂಜೆ 7 ಗಂಟೆಯವರೆಗೆ ಇ-ಸ್ಟ್ಯಾಂಪಿಂಗ್ ಸೇವೆ ನೀಡಲಾಗುತ್ತಿದೆ ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮನಾಥ್ ಸನಿಲ್, ಗೋಪಾಲ್ ಎಮ್., ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತರರು ಉಪಸ್ಥಿತರಿದ್ದರು. ಶಾಖೆಯ ಸಿಬ್ಬಂದಿ ಪವಿತ್ರ ಯು.ಜೆ ಸ್ವಾಗತಿಸಿ, ಹಿರಿಯ ಶಾಖಾಧಿಕಾರಿ ಸಚಿನ್ ಕಾರ್ಯಕ್ರಮ ನಿರೂಪಿಸಿದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

