Close Menu
    Top News

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
    News

    ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಅಜ್ಜಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

    adminBy adminJune 11, 2026

    ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಜ್ಜಿನಡ್ಕ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ, ಲೇಖನ ಸಾಮಗ್ರಿಗಳನ್ನು ಕೊಡುಗೆ ನೀಡಲಾಯಿತು.

    ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ಸುರೇಖಾ ಚಂದ್ರಹಾಸ್ ಮಾತನಾಡಿ, ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಮುತುವರ್ಜಿ ವಹಿಸಿ ಆರು ವರ್ಷಗಳಿಂದ ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಸೊಸೈಟಿಯ ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಯುವ ಸಾಮಗ್ರಿಗಳ ವಿತರಣೆ ಮಾಡಲಾಗಿದೆ. ಅಂಗ್ಲಮಾಧ್ಯಮ ಶಿಕ್ಷಣಕ್ಕೆ ಮಾರು ಹೋಗುತ್ತಿರುವ ಈಗಿನ ಸಂದರ್ಭದಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ಉದ್ದೇಶದಿಂದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ ಸೇವೆ ಒದಗಿಸುತ್ತಿದೆ. ಹೆತ್ತವರು ಮಕ್ಕಳಿಗೆ ಆಸ್ತಿ ಮಾಡದಿದ್ದರೂ ಪರವಾಗಿಲ್ಲ, ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿಸಿ ಎಂದು ಆಶಯ ವ್ಯಕ್ತಪಡಿಸಿದರು.

    ಸಂಘದ ನಿರ್ದೇಶಕರಾದ ರಾಘವ ಆರ್ ಉಚ್ಚಿಲ್ ಮಾತನಾಡಿ, ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಅವರ ನೇತೃತ್ವದಲ್ಲಿ ಸಂಘವು ಉನ್ನತ ಸಾಧನೆ ಮಾಡಿದ್ದು, ಉತ್ತಮ ಲಾಭ ಗಳಿಸುತ್ತಿದೆ. ಗಳಿಸಿದ ಲಾಭಾಂಶದಲ್ಲಿ ನಮ್ಮ ಸಂಘದ ವ್ಯಾಪ್ತಿಯ ಸರಕಾರಿ ಶಾಲೆಗೆ ಮತ್ತು ವಿದ್ಯಾರ್ಥಿಗಳಿಗೆ ನೆರವು ನೀಡಬೇಕೆನ್ನೆವುದು ನಮ್ಮ ಆಶಯ. ಅದರಂತೆ ಈ ಶಾಲೆಯ ಮಕ್ಕಳಿಗೆ ಕಲಿಕೋಪಕರಣಗಳನ್ನು ವಿತರಿಸಿದ್ದೇವೆ. ಮಕ್ಕಳು ಇದರ ಸದುಪಯೋಗ ಪಡೆದು ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಶುಭ ಹಾರೈಸಿದರು.
    ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಉಪಾಧ್ಯಕ್ಷ ಅಬುಸಾಲಿ ಅಧ್ಯಕ್ಷತೆ ವಹಿಸಿದ್ದರು.
    ನಿರ್ದೇಶಕರಾದ ಉದಯಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಉಳ್ಳಾಲ, ಶಾಲಾ ಮುಖ್ಯ್ಯೋಪಾಧ್ಯಯಿನಿ ರಜಿಯಾ, ಕಂಬಳ ಓಟಗಾರ ವಂದಿತ್ ಶೆಟ್ಟಿ, ಅಹಮದ್ ಅಜ್ಜಿನಡ್ಕ, ಸಿ. ಆರ್. ಪಿ ಮೋಹನ್, ಸುಜಾತಾ, ಗೀತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯ್ಯೋಪಾಧ್ಯಾಯಿನಿ ರಜಿಯಾ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Ajjinadka School Kotekaru vyavasaya seva sahakari sangha Raghava R Ucchil
    Previous Articleವಿಕಸಿತ ಭಾರತ ಪರಿಕಲ್ಪನೆಗೆ ಗಮನಾರ್ಹ ಕೊಡುಗೆ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ಅಂತಾರಾಷ್ಟ್ರೀಯ ವಿಮಾ ಕ್ಷೇತ್ರದ ಪ್ರಶಸ್ತಿ

    Related Posts

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.