ಮಂಗಳೂರು: ಸಹಕಾರ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ಆಯೋಜಿಸಲಾದ ಮಣಿಪಾಲ್ ಸಿಗ್ನ ಹೆಲ್ತ್ ಇನ್ಶೂರೆನ್ಸ್ ಕಂಪನಿಯ ಲಕ್ಷ್ಯ – 2026, ಪ್ರತಿಷ್ಟಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
https://chat.whatsapp.com/FCEnlTkAKCC0MGPhXtX4i4
ಈ ಸಮ್ಮೇಳನದಲ್ಲಿ ಮಣಿಪಾಲ್ ಸಿಗ್ನ ಹೆಲ್ತ್ ಇನ್ಶೂರೆನ್ಸ್ ಕಂಪನಿಯ ರಿಟೇಲ್ ಬಿಸಿನೆಸ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿದ ಹಾಗೂ ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರಿಗೆ ಮಣಿಪಾಲ್ ಸಿಗ್ನ ಹೆಲ್ತ್ ಇನ್ಶೂರೆನ್ಸ್ ಕಂಪನಿ ಇಂಡಿಯಾ ಕಂಪನಿಯ ಮುಖ್ಯಸ್ಥರಾದ ಶಶಾಂಕ್ ಚಾಪೆಕರ್ ಹಾಗೂ ಏಜನ್ಸಿ ವಿಸ್ತರಣಾ ಮುಖ್ಯಸ್ಥರಾದ ಪ್ರಸಾದ್ ಶೆಟ್ಟಿ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಮಾರಂಭದಲ್ಲಿ ದಕ್ಷಿಣ ವಲಯ ಮುಖ್ಯಸ್ಥರಾದ ದರ್ವೇಶ್ ಮೊಹಮ್ಮದ್, ಸೌತ್ ಇಂಡಿಯಾ ಎಜನ್ಸಿ ಮುಖ್ಯಸ್ಥರಾದ ವಿಶಾಲ್ ಸುರಾನ ಮತ್ತಿತರರು ಉಪಸ್ಥಿತರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಗೆ ಆರೋಗ್ಯ ಪೂರ್ಣ ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಆರೋಗ್ಯ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಸಂಘದ ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದು ಸಂಘವು ಈಗಾಗಲೇ ಒಟ್ಟು 110 ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದು, ಈ ಶಿಬಿರಗಳಲ್ಲಿ ಕಡುಬಡವರಿಗೆ ಉಚಿತ ಔಷಧ ವಿತರಣೆ, ಆರೋಗ್ಯ ತಪಾಸಣೆ, ದಂತ ತಪಾಸಣೆ ಮತ್ತು ಚಿಕಿತ್ಸೆ, ಉಚಿತ ಆರೋಗ್ಯ ಕಾರ್ಡ್ ವಿತರಣೆ, 950ಕ್ಕೂ ಮಿಕ್ಕಿ ಕಣ್ಣಿನ ಶಸ್ತ್ರಚಿಕಿತ್ಸೆ ಹಾಗೂ 21,000ಕ್ಕೂ ಮಿಕ್ಕಿ ಉಚಿತ ಕನ್ನಡಕ ವಿತರಣೆಯನ್ನು ಸಂಘದ ವತಿಯಿಂದ ಮಾಡಲಾಗಿದೆ. ಅಲ್ಲದೇ ವಿಮಾ ಕ್ಷೇತ್ರದ 10ಕ್ಕೂ ಅಧಿಕ ಕಂಪೆನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಆರೋಗ್ಯ, ವಾಹನ ಹಾಗೂ ಜೀವ ವಿಮಾ ಸೇವೆಯನ್ನು ಸಂಘದ ಸದಸ್ಯರಿಗೆ ಸ್ಪರ್ಧಾತಕ ದರದಲ್ಲಿ ನೀಡುತ್ತಾ ಬರುತ್ತಿದ್ದು, ಹೆಚ್ಚಿನ ಗ್ರಾಹಕರು ಇದರ ಪ್ರಯೋಜನವನ್ನು ಪಡೆದಿದ್ದಾರೆ. ಸಂಘವು ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಸತತ 10 ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆದಿರುವ ಸಂಸ್ಥೆಯಾಗಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

