Close Menu
    Top News

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿಯ ಮಾಹಿತಿ ಅಗತ್ಯ
    News

    ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿಯ ಮಾಹಿತಿ ಅಗತ್ಯ

    adminBy adminJune 18, 2026

    ಸಿಂಧನೂರು: ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿಯ ಬಗ್ಗೆ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ. ಸಹಕಾರ ಚಳವಳಿ ಆರಂಭವಾದ ಬಗೆ, ಅದರ ಕಾರ್ಯಗಳು ಮತ್ತು ಉಪಯೋಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದು ಬಹಳ ಮುಖ್ಯವಾಗಿದೆ ಎಂದು ಇಲ್ಲಿನ ಎಕ್ಸಲೆಂಟ್ ಕಾಲೇಜು ಪ್ರಾಂಶುಪಾಲರಾದ ಮಂಜುನಾಥ ಸೋಮಲಾಪುರ ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ಸಿಂಧನೂರಿನ ಎಕ್ಸಲೆಂಟ್ ಕಾಲೇಜಿನಲ್ಲಿ ಮಂಗಳವಾರ ರಾಜ್ಯ ಸಹಕಾರ ಮಹಾಮಂಡಳ, ರಾಯಚೂರು ಜಿಲ್ಲಾ ಸಹಕಾರ ಒಕ್ಕೂಟ ಮತ್ತು ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಯುವ ಜನರಿಗೆ ಕ್ಲಸ್ಟರ್ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿ, ಇತಿಹಾಸ, ಸಹಕಾರ ಸಂಘದ ರಚನೆ ಬಗ್ಗೆ ಜಾಗೃತಿ ಮೂಡಬೇಕಿದೆ. ಅದು ಇಂಥ ತರಬೇತಿಯಿಂದ ಮಾತ್ರ ಸಾಧ್ಯ ಎಂದರು.
    ಕಾರ್ಯದರ್ಶಿ ವೆಂಕಟರಾವ್‌ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಯುವಜನರ ಪಾತ್ರ ಪ್ರಮುಖವಾಗಿದ್ದು, ಇಂಥ ತರಬೇತಿಗಳಲ್ಲಿ ಭಾಗವಹಿಸಿ ಅದರ ಮಾಹಿತಿ ಪಡೆದು ಸದುಪಯೋಗ ಪಡಿಸಿಕೊಳ್ಳಬೇಕು. ಸಹಕಾರ ಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿ, ಹೆಚ್ಚಿನ ಉದ್ಯೋಗಾವಕಾಶಗಳನ್ನು ಹೊಂದಬೇಕು ಎಂದು ಸಲಹೆ ನೀಡಿದರು. ರಾಯಚೂರು ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಾಯತ್ರಿ ವೈ. ಮಾತನಾಡಿ, ಕ್ಲಸ್ಟರ್ ತರಗತಿ ಉದ್ದೇಶ, ಮಹತ್ವ ಕುರಿತು ಮಾಹಿತಿ ನೀಡಿ, ಜಿಲ್ಲಾ ಸಹಕಾರ ಒಕ್ಕೂಟದಿಂದ ಆಯೋಜಿಸಿದ್ದ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಗಳು, ವಿವಿಧ ತರಬೇತಿ ಕಾರ್ಯಕ್ರಮಗಳು, ಸಹಕಾರ ಚಳುವಳಿ, ಇತಿಹಾಸ, ತತ್ವಗಳು, ವಿದ್ಯಾರ್ಥಿ ಗ್ರಾಹಕರ ಸಹಕಾರ ಸಂಘದ ರಚನೆ, ಯುವ ನಾಯಕತ್ವ ಕುರಿತು ಮಾಹಿತಿ ನೀಡಿದರು. ಕಾಲೇಜು ಉಪನ್ಯಾಸಕ ಮೆಹಬೂಬ್‌ ಪಾಷಾ ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Excellent Pu College Sindhanuru Manjunath Somalapura Raichuru Jilla Sahakara Union Sindhanuru
    Previous Articleಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 28ನೇ ಶಾಖೆ ನಾಳೆ ಕೈಕಂಬದಲ್ಲಿ ಉದ್ಘಾಟನೆ
    Next Article ಬೆಳಗೊಳ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಿ.ಜಗದೀಶ್ ಆಯ್ಕೆ

    Related Posts

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.