Close Menu
    Top News

    ಸೌಹಾರ್ದ ಸಹಕಾರಿಗಳ ಒಕ್ಕೂಟದ ಉದ್ದೇಶ, ಕಾರ್ಯ ಶ್ಲಾಘನೀಯ

    June 22, 2026

    ಶ್ರೀ ಗುರು ರಾಘವೇಂದ್ರ ಸೌಹಾರ್ದ ಸಹಕಾರಿ ಸಂಘದ ಪ್ರಾರಂಭೋತ್ಸವ

    June 22, 2026

    ಯೋಗದಿಂದ ಒತ್ತಡ ರಹಿತ ಜೀವನ ಸಾಧ್ಯ: ರಮೇಶ್ ಪ್ರಭು

    June 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅಡಿಕೆ, ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರೀಮಿಯಂ ಪ್ರಾರಂಭ
    News

    ಅಡಿಕೆ, ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರೀಮಿಯಂ ಪ್ರಾರಂಭ

    adminBy adminJune 22, 2026

    ಬಂಟ್ವಾಳ: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರ ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ ರಾಜ್ಯ ಸರಕಾರದ ಸಹಭಾಗಿತ್ವದ ಮಹತ್ವಾಕಾಂಕ್ಷೆಯ ಯೋಜನೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು 2026-27ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆ ಜಾರಿಗೊಳಿಸಿದೆ.

    https://chat.whatsapp.com/FCEnlTkAKCC0MGPhXtX4i4

    ಇದರಂತೆ ಅಡಿಕೆ, ಕರಿಮೆಣಸು ಬೆಳೆಗಳಿಗೆ ಸಂಬಂಧಿಸಿದಂತೆ ಬೆಳೆ ವಿಮೆ ಮಾಡಲು ಪ್ರೀಮಿಯಂ ಪಾವತಿಸಲು ಪ್ರಾರಂಭವಾಗಿದ್ದು, ಬೆಳೆ ಸಾಲ ಪಡೆದಿರುವ ರೈತರು ತಾವು ಬೆಳೆ ಸಾಲ ಪಡೆದಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಸಿ ಪ್ರೀಮಿಯಂ ಮೊತ್ತ ಪಾವತಿಸಬಹುದು. ಬೆಳೆ ಸಾಲ ಹೊಂದಿಲ್ಲದ ರೈತರು ಸಹ ಈ ಯೋಜನೆಯಡಿಯಲ್ಲಿ ಪ್ರೀಮಿಯಂ ಮೊತ್ತ ಪಾವತಿಸಿ ಯೋಜನೆಯ ಸದುಪಯೋಗ ಪಡೆಯಬಹುದು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    ರೈತರು ತಾವು ಬೆಳೆದ ಬೆಳೆಗಳನ್ನು ಬೆಳೆ ಸಮೀಕ್ಷೆ ಮಾಡಿಸಬೇಕು ಹಾಗೂ ಫಾರ್ಮರ್ ಐಡಿ ಹೊಂದಿರಬೇಕು. ಅಡಿಕೆ ಬೆಳೆಗೆ ಸಂಬಂಧಿಸಿದಂತೆ ಎಕರೆ ಒಂದಕ್ಕೆ ರೂ 2591/- ಮತ್ತು ಕರಿಮೆಣಸು ಎಕರೆ ಒಂದಕ್ಕೆ ರೂ 951/- ವಿಮೆ ಕಂತು ಪಾವತಿಸಬೇಕಾಗುತ್ತದೆ.ಈ ಯೋಜನೆಯ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದ್ದು, ಬೆಳೆ ಸಾಲ ಪಡೆದಿರುವ ಎಲ್ಲಾ ರೈತರು ಜಮೀನಿನ ಆರ್.ಟಿ.ಸಿ.ಯೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಹಾಗೂ ನಾಮಿನಿಯ ಆಧಾರ್‌ನೊಂದಿಗೆ ನಿಗದಿತ ಅವಧಿಯೊಳಗೆ ತಮ್ಮ ಕಾರ್ಯವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಗಳನ್ನು ಸಂಪರ್ಕಿಸಿ ಬೆಳೆ ವಿಮೆ ಯೋಜನೆ ಪ್ರಯೋಜನ ಪಡೆಯಬೇಕೆಂದು ಪ್ರಭಾಕರು ಪ್ರಭು ಅವರು ರೈತರಿಗೆ ವಿನಂತಿ ಮಾಡಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Adike Areccanut Bele Vime Karimenasu Prabhakara Prabhu Premium Siddakatte Prathamika Krushi Pattina Sahakara Sangha
    Previous Articleಹಣಕಾಸು ಮುಗ್ಗಟ್ಟು: ಅರ್ಬನ್ ಬ್ಯಾಂಕ್‌ ಲೈಸೆನ್ಸ್‌ ರದ್ದು
    Next Article ಸಂಪತ್ತಿಗಿಂತ ಆರೋಗ್ಯವೇ ಶ್ರೀಮಂತ: ಪಿ.ಉಪೇಂದ್ರ ಆಚಾರ್ಯ

    Related Posts

    ಸೌಹಾರ್ದ ಸಹಕಾರಿಗಳ ಒಕ್ಕೂಟದ ಉದ್ದೇಶ, ಕಾರ್ಯ ಶ್ಲಾಘನೀಯ

    June 22, 2026

    ಶ್ರೀ ಗುರು ರಾಘವೇಂದ್ರ ಸೌಹಾರ್ದ ಸಹಕಾರಿ ಸಂಘದ ಪ್ರಾರಂಭೋತ್ಸವ

    June 22, 2026

    ಯೋಗದಿಂದ ಒತ್ತಡ ರಹಿತ ಜೀವನ ಸಾಧ್ಯ: ರಮೇಶ್ ಪ್ರಭು

    June 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸೌಹಾರ್ದ ಸಹಕಾರಿಗಳ ಒಕ್ಕೂಟದ ಉದ್ದೇಶ, ಕಾರ್ಯ ಶ್ಲಾಘನೀಯ

    June 22, 2026

    ಶ್ರೀ ಗುರು ರಾಘವೇಂದ್ರ ಸೌಹಾರ್ದ ಸಹಕಾರಿ ಸಂಘದ ಪ್ರಾರಂಭೋತ್ಸವ

    June 22, 2026

    ಯೋಗದಿಂದ ಒತ್ತಡ ರಹಿತ ಜೀವನ ಸಾಧ್ಯ: ರಮೇಶ್ ಪ್ರಭು

    June 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.