ಮಂಗಳೂರು: ಅಂತಾರಾಷ್ಟ್ರೀಯ ಯೋಗ ದಿನ ಅಂಗವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ವತಿಯಿಂದ “ಜೀವನ್ ಫಾರ್ಮ್” ದೇವಿನಗರ, ಕಿನ್ಯಾ, ಉಳ್ಳಾಲದಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಯಿತು.
https://chat.whatsapp.com/FCEnlTkAKCC0MGPhXtX4i4
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಸಂಘದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಯೋಗ ಶಿಕ್ಷಕರಾದ ಮೋನಪ್ಪ ಪೂಜಾರಿಯವರು ಸಂಘದ ಸಿಬ್ಬಂದಿಗಳಿಗೆ ಯೋಗದಿಂದ ಆಗುವ ಪ್ರಯೋಜನದ ಮಾಹಿತಿ ನೀಡಿ ಯೋಗಾಸನ ಮಾಡಿಸುವುದರ ಮೂಲಕ ಯೋಗಾಭ್ಯಾಸ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಯೋಗ ಕಲಿಕೆಯಲ್ಲಿ 33 ವರ್ಷಕ್ಕೂ ಅಧಿಕ ಸೇವೆ ಸಲ್ಲಿಸಿರುವ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೋನಪ್ಪ ಪೂಜಾರಿ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ಜಿ.ಪರಮೇಶ್ವರ ಪೂಜಾರಿ, ಆನಂದ್ ಎಸ್.ಕೊಂಡಾಣ, ರಮಾನಾಥ್ ಸನಿಲ್, ಬಿ.ಪಿ. ದಿವಾಕರ್, ಗೋಪಾಲ್ ಎಂ, ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ ಗೌರವಾಧ್ಯಕ್ಷರಾದ ವಾಮನ್ ಕೆ., ಜೀವನ್ ಫಾರ್ಮ್ ಮಾಲಕರಾದ ಧರ್ಮರಾಜ್ ಹಾಗೂ ಸಂಘದ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com





