Close Menu
    Top News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಜೂನ್ 28ರಂದು 111ನೇ ಉಚಿತ ವೈದ್ಯಕೀಯ ಶಿಬಿರ

    June 25, 2026

    ಸಹಕಾರ ಸಪ್ತಾಹದ ದಿನಾಂಕ ಬದಲಿಸಿ ನೆಹರೂ ಕೊಡುಗೆಗಳನ್ನು ಕ್ಷೀಣಗೊಳಿಸುವ ಹುನ್ನಾರ: ಅಲೆವೂರು ಹರೀಶ್ ಕಿಣಿ ಅಭಿಪ್ರಾಯ

    June 25, 2026

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಆಡಳಿತ ಪರಿಣತಿ, ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

    June 24, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಸಪ್ತಾಹದ ದಿನಾಂಕ ಬದಲಿಸಿ ನೆಹರೂ ಕೊಡುಗೆಗಳನ್ನು ಕ್ಷೀಣಗೊಳಿಸುವ ಹುನ್ನಾರ: ಅಲೆವೂರು ಹರೀಶ್ ಕಿಣಿ ಅಭಿಪ್ರಾಯ
    News

    ಸಹಕಾರ ಸಪ್ತಾಹದ ದಿನಾಂಕ ಬದಲಿಸಿ ನೆಹರೂ ಕೊಡುಗೆಗಳನ್ನು ಕ್ಷೀಣಗೊಳಿಸುವ ಹುನ್ನಾರ: ಅಲೆವೂರು ಹರೀಶ್ ಕಿಣಿ ಅಭಿಪ್ರಾಯ

    adminBy adminJune 25, 2026

    ಉಡುಪಿ: ಕೇಂದ್ರದಲ್ಲಿ ಸಹಕಾರ ಸಚಿವಾಲಯವನ್ನು ಆರಂಭಿಸಿ ಐದು ವರ್ಷಗಳಾಗಿರುವ ಕಾರಣ ಮುಂದೊಡ್ಡಿ ಕೇಂದ್ರ ಸರ್ಕಾರವು ಜೂನ್‌ 29ರಿಂದ ಜುಲೈ 6ರ ತನಕ ಸಹಕಾರಿ ಸಪ್ತಾಹವನ್ನು ಆಚರಿಸಲು ಕರೆ ಕೊಟ್ಟಿರುವುದನ್ನು ಆಕ್ಷೇಪಿಸಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ, ಸಹಕಾರಿ ಧುರೀಣ ಅಲೆವೂರು ಹರೀಶ್ ಕಿಣಿಯವರು, ಬಿಜೆಪಿ ಸರ್ಕಾರವು ಜವಾಹರಲಾಲ್‌ ನೆಹರೂ ಅವರನ್ನು ಅವಮಾನಿಸುವ ಚಾಳಿಯನ್ನು ಮುಂದುವರಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಸ್ವತಂತ್ರ ಭಾರತದ ಅಭ್ಯುದಯದಲ್ಲಿ ಸಹಕಾರ ಕ್ಷೇತ್ರದ ಮಹತ್ವವನ್ನು ಮನಗಂಡ ಅಂದಿನ ಪ್ರಧಾನಿ ಜವಹರಲಾಲ್ ನೆಹರೂ ಅವರು ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಪ್ರಾಧಾನ್ಯತೆ ನೀಡಿದ್ದರು. ಆ ಕಾರಣಕ್ಕಾಗಿ ಅವರ ಜನ್ಮದಿನಾಂಕವಾದ ನವೆಂಬರ್ 14ರಿಂದ ಒಂದು ವಾರಗಳ ಕಾಲ ರಾಷ್ಟ್ರಾದ್ಯಂತ ಸಹಕಾರ ಸಪ್ತಾಹವು ಏಳು ದಶಕಗಳಿಂದ ಆಚರಿಸಲಾಗುತ್ತಿದೆ.
    ಆದರೆ ಇದೀಗ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನೂತನ ಸಹಕಾರಿ ಸಚಿವಾಲಯ ಆರಂಭಿಸಿ ಐದು ವರ್ಷ ಕಳೆದಿರುವ ಹೆಸರಿನಲ್ಲಿ ಜೂನ್ 29ರಿಂದ ಜುಲೈ 6ರವರೆಗೆ ರಾಷ್ಟ್ರಾದ್ಯಂತ ಸಹಕಾರ ಸಪ್ತಾಹ ಆಚರಿಸಲು ನಿರ್ಧರಿಸಿದೆ. ಈ ದಿನಾಂಕ ಬದಲಾವಣೆಯು ಬಿಜೆಪಿ ಸರ್ಕಾರದ ನೆಹರೂ ಅವರನ್ನು ಅವಮಾನಿಸುವ ಮುಂದುವರಿದ ಚಾಳಿ. ಅವರ ಕೊಡುಗೆಗಳನ್ನು ಕ್ಷೀಣಗೊಳಿಸಲು ನಡೆಸಿರುವ ಹುನ್ನಾರ ಇದರಲ್ಲಿ ಅಡಗಿದೆ. ಈ ಹಿಂದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಿಸಿ VB GRAMGI ಎಂದು ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಅಳಿಸಲು ನಡೆಸಿದ ಪ್ರಯತ್ನದ ಇನ್ನೊಂದು ಮಜಲು. ಆದುದರಿಂದ ಸಹಕಾರ ಸಪ್ತಾಹದ ದಿನಾಂಕ ಬದಲಿಸದೇ ನವೆಂಬರ್ 14ರಂದೇ ಆರಂಭಿಸಬೇಕು ಎಂದು ಮನವಿ ಮಾಡಿ ಈ ಕುರಿತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರಿಗೂ ಈ ಕುರಿತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.
    ಈ ಕುರಿತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ರಾಜ್ಯ ಸಹಕಾರ ಸಂಘಗಳ ನಿಬಂಧಕರು, ರಾಜ್ಯದ ಎಲ್ಲಾ ಜಿಲ್ಲಾ ಸಹಕಾರಿ ಯೂನಿಯನ್‌ಗಳಿಗೆ ನೀಡಿರುವ ಆದೇಶವನ್ನು ಹಿಂಪಡೆಯುವ ಸೂಚನೆ ನೀಡುವಂತೆ ಅವರು ವಿನಂತಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Congress Leader Harish Kini Jawaharlal Nehru Mahatma Gandhi MNREGA Special Co Operative Week
    Previous Articleಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಆಡಳಿತ ಪರಿಣತಿ, ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಜೂನ್ 28ರಂದು 111ನೇ ಉಚಿತ ವೈದ್ಯಕೀಯ ಶಿಬಿರ

    Related Posts

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಜೂನ್ 28ರಂದು 111ನೇ ಉಚಿತ ವೈದ್ಯಕೀಯ ಶಿಬಿರ

    June 25, 2026

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಆಡಳಿತ ಪರಿಣತಿ, ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

    June 24, 2026

    ಎಂಸಿಸಿ ಬ್ಯಾಂಕಿನ 22ನೇ ಶಾಖೆ ಜೂನ್ 28ರಂದು ದೇರಳಕಟ್ಟೆಯಲ್ಲಿ, 23ನೇ ಶಾಖೆ ಕಟಪಾಡಿಯಲ್ಲಿ ಆಗಸ್ಟ್ 2ರಂದು ಉದ್ಘಾಟನೆ

    June 24, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಜೂನ್ 28ರಂದು 111ನೇ ಉಚಿತ ವೈದ್ಯಕೀಯ ಶಿಬಿರ

    June 25, 2026

    ಸಹಕಾರ ಸಪ್ತಾಹದ ದಿನಾಂಕ ಬದಲಿಸಿ ನೆಹರೂ ಕೊಡುಗೆಗಳನ್ನು ಕ್ಷೀಣಗೊಳಿಸುವ ಹುನ್ನಾರ: ಅಲೆವೂರು ಹರೀಶ್ ಕಿಣಿ ಅಭಿಪ್ರಾಯ

    June 25, 2026

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಆಡಳಿತ ಪರಿಣತಿ, ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

    June 24, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.