Close Menu
    Top News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಜೂನ್ 28ರಂದು 111ನೇ ಉಚಿತ ವೈದ್ಯಕೀಯ ಶಿಬಿರ

    June 25, 2026

    ಸಹಕಾರ ಸಪ್ತಾಹದ ದಿನಾಂಕ ಬದಲಿಸಿ ನೆಹರೂ ಕೊಡುಗೆಗಳನ್ನು ಕ್ಷೀಣಗೊಳಿಸುವ ಹುನ್ನಾರ: ಅಲೆವೂರು ಹರೀಶ್ ಕಿಣಿ ಅಭಿಪ್ರಾಯ

    June 25, 2026

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಆಡಳಿತ ಪರಿಣತಿ, ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

    June 24, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಜೂನ್ 28ರಂದು 111ನೇ ಉಚಿತ ವೈದ್ಯಕೀಯ ಶಿಬಿರ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಜೂನ್ 28ರಂದು 111ನೇ ಉಚಿತ ವೈದ್ಯಕೀಯ ಶಿಬಿರ

    adminBy adminJune 25, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ 111ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರವು ಜೂನ್‌ 28 ಭಾನುವಾರ ಪೂರ್ವಾಹ್ನ 9.30ರಿಂದ ಮಧ್ಯಾಹ್ನ 12.30ರವರೆಗೆ ಉಳ್ಳಾಲ ನಗರಸಭೆ ಆವರಣದ ಸಮುದಾಯ ಭವನದಲ್ಲಿ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4
    ಈ ವೈದ್ಯಕೀಯ ಶಿಬಿರದಲ್ಲಿ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್, ಮಂಗಳೂರು ಇಲ್ಲಿನ ನುರಿತ ತಜ್ಞ ವೈದ್ಯರ ತಂಡದಿಂದ ದಂತ ತಪಾಸಣೆ ಮತ್ತು ಸಲಹೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳನ್ನು ಸ್ವಚ್ಛಗೊಳಿಸುವುದು ಹಾಗೂ ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಇವರ ನುರಿತ ತಜ್ಞ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಇನ್ನಿತರ ವೈದ್ಯಕೀಯ ಸೇವೆಗಳು ಲಭ್ಯವಿದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು.
    ಈ ವೈದ್ಯಕೀಯ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಪಡೀಲ್, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ ಮತ್ತು ಮಹಿಳಾ ವಿಭಾಗ, ಬಂಡಿಕೊಟ್ಯ, ಉಳ್ಳಾಲ ಮತ್ತು ವಿದ್ಯಾರಣ್ಯ ಯುವಕ ವೃಂದ ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ, ಶಿವಶಕ್ತಿ ಯುವಕ ಮಂಡಲ ಉಳ್ಳಾಲ ಹಾಗೂ ಉಳ್ಳಾಲ ತಾಲೂಕು ಮಹಿಳಾ ಮಂಡಳಗಳ ಒಕ್ಕೂಟ ಉಳ್ಳಾಲ ಇವರ ಜಂಟಿ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Athmashakthi Vividhoddesha Sahakara Sangha Brahmashree Narayana Guru Swamy Prakashana Shivashakti Yuvaka Mandala Ullala Nagarasabhe Vidyaranya Kalaavrunda Ullal
    Previous Articleಸಹಕಾರ ಸಪ್ತಾಹದ ದಿನಾಂಕ ಬದಲಿಸಿ ನೆಹರೂ ಕೊಡುಗೆಗಳನ್ನು ಕ್ಷೀಣಗೊಳಿಸುವ ಹುನ್ನಾರ: ಅಲೆವೂರು ಹರೀಶ್ ಕಿಣಿ ಅಭಿಪ್ರಾಯ

    Related Posts

    ಸಹಕಾರ ಸಪ್ತಾಹದ ದಿನಾಂಕ ಬದಲಿಸಿ ನೆಹರೂ ಕೊಡುಗೆಗಳನ್ನು ಕ್ಷೀಣಗೊಳಿಸುವ ಹುನ್ನಾರ: ಅಲೆವೂರು ಹರೀಶ್ ಕಿಣಿ ಅಭಿಪ್ರಾಯ

    June 25, 2026

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಆಡಳಿತ ಪರಿಣತಿ, ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

    June 24, 2026

    ಎಂಸಿಸಿ ಬ್ಯಾಂಕಿನ 22ನೇ ಶಾಖೆ ಜೂನ್ 28ರಂದು ದೇರಳಕಟ್ಟೆಯಲ್ಲಿ, 23ನೇ ಶಾಖೆ ಕಟಪಾಡಿಯಲ್ಲಿ ಆಗಸ್ಟ್ 2ರಂದು ಉದ್ಘಾಟನೆ

    June 24, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಜೂನ್ 28ರಂದು 111ನೇ ಉಚಿತ ವೈದ್ಯಕೀಯ ಶಿಬಿರ

    June 25, 2026

    ಸಹಕಾರ ಸಪ್ತಾಹದ ದಿನಾಂಕ ಬದಲಿಸಿ ನೆಹರೂ ಕೊಡುಗೆಗಳನ್ನು ಕ್ಷೀಣಗೊಳಿಸುವ ಹುನ್ನಾರ: ಅಲೆವೂರು ಹರೀಶ್ ಕಿಣಿ ಅಭಿಪ್ರಾಯ

    June 25, 2026

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಆಡಳಿತ ಪರಿಣತಿ, ವ್ಯವಹಾರ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

    June 24, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.