Close Menu
    Top News

    ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಐದನೇ ಶಾಖೆ ಉಪ್ಪಿನಂಗಡಿಯಲ್ಲಿ ಜುಲೈ 4ರಂದು ಲೋಕಾರ್ಪಣೆ

    June 30, 2026

    ಕಥೊಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬ್ರಹ್ಮಾವರದ ಸಿಬ್ಬಂದಿ ತರಬೇತಿ ಕಾರ್ಯಾಗಾರ

    June 30, 2026

    ಜುಲೈ 4ರಂದು ಹೇರೂರಿನಲ್ಲಿ ವಿಶೇಷ ಉಪನ್ಯಾಸ, ಸಂವಾದ ಕಾರ್ಯಕ್ರಮ

    June 30, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಡುಬಿದ್ರಿ ಶಾಖೆಯ ನಾಲ್ಕನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಡುಬಿದ್ರಿ ಶಾಖೆಯ ನಾಲ್ಕನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ

    adminBy adminJune 30, 2026

    ಪಡುಬಿದ್ರಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಡುಬಿದ್ರಿ ಶಾಖೆಯ ನಾಲ್ಕನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಡುಬಿದ್ರಿ ಶಾಖೆಯಲ್ಲಿ ಜರುಗಿತು.

    https://chat.whatsapp.com/FCEnlTkAKCC0MGPhXtX4i4
    ಸಂಘದ ಸದಸ್ಯರಾದ ಶೀನ ಪೂಜಾರಿ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಗತ್ಯ ಸಂದರ್ಭಗಳಲ್ಲಿ ಗ್ರಾಹಕರ ಮನೆಗೆ ಬಂದು ಸೇವೆ ನೀಡುತ್ತಿದೆ. ಇಂತಹ ಸೇವೆಗಳು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಸದಸ್ಯರಾದ ಸುನಿಲ್ ಕುಮಾರ್ ಮಾತನಾಡಿ ಆತ್ಮಶಕ್ತಿ ಸಂಘವು ಕೇವಲ ಬ್ಯಾಂಕಿಂಗ್ ಕ್ಷೇತ್ರ ಮಾತ್ರವಲ್ಲದೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಸಂಘವು ಇನ್ನಷ್ಟು ಉನ್ನತ ಸ್ಥಾನಕ್ಕೆ ಏರಲಿ ಎಂದು ಶುಭ ಹಾರೈಸಿದರು. ಗ್ರಾಹಕರಾದ ಶಶಿಕಾಂತ್ ಪಡುಬಿದ್ರಿ ಮಾತನಾಡಿ ಉತ್ತಮ ಮಾರ್ಗದರ್ಶನ ನೀಡುವ ಆಡಳಿತ ಮಂಡಳಿ ಹಾಗೂ ಉತ್ತಮ ಸೇವೆ ನೀಡುವ ಸಿಬ್ಬಂದಿ ವರ್ಗದಿಂದ ಸಂಘವು ಉತ್ತಮ ಪ್ರಗತಿ ಸಾಧಿಸುತ್ತಿದೆ ಎಂದರು.


    ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಮಾತನಾಡಿ ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿ ಹೊಂದಲು ಸಾಧ್ಯವಾಗಿದೆ. ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತ ಬರುತ್ತಿದೆ. ಸಂಘದ ಸದಸ್ಯರಿಗೆ ಸ್ಮರ್ಧಾತ್ಮಕ ದರದಲ್ಲಿ ಎಲ್ಲಾ ರೀತಿಯ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ. ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಿ ಅವರನ್ನು ಪ್ರೋತ್ಸಾಹಿಸುತ್ತ ಬಂದಿದೆ. ಮುಂಬರುವ ಸಂಘದ ಮಹಾಸಭೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಇದರ ಸದುಪಯೋಗ ಪಡೆಯುವಂತೆ ವಿನಂತಿಸಿದರು. ಪಡುಬಿದ್ರಿ ಶಾಖೆಯ ಚತುರ್ಥ ವಾರ್ಷಿಕೋತ್ಸವ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10.50 ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಟ ಮೌಲ್ಯ ರೂ. 12,000ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು ಎಂದರು.
    ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ನಿರ್ದೇಶಕರಾದ ಬಿ.ಪಿ ದಿವಾಕರ್, ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು. ಹಿರಿಯ ಶಾಖಾಧಿಕಾರಿ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸಿಬ್ಬಂದಿ ಲೋಶಿತಾ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Athmashakthi Vividhoddesha Sahakara Sangha Chittaranjan Bolar Padubidri Branch
    Previous Articleಸಹಕಾರ ತತ್ವದ ಚಿಂತನೆಯ ಅನುಷ್ಠಾನದಿಂದಲೇ ದೇಶದ ಅಭಿವೃದ್ಧಿ
    Next Article ಜುಲೈ 4ರಂದು ಹೇರೂರಿನಲ್ಲಿ ವಿಶೇಷ ಉಪನ್ಯಾಸ, ಸಂವಾದ ಕಾರ್ಯಕ್ರಮ

    Related Posts

    ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಐದನೇ ಶಾಖೆ ಉಪ್ಪಿನಂಗಡಿಯಲ್ಲಿ ಜುಲೈ 4ರಂದು ಲೋಕಾರ್ಪಣೆ

    June 30, 2026

    ಕಥೊಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬ್ರಹ್ಮಾವರದ ಸಿಬ್ಬಂದಿ ತರಬೇತಿ ಕಾರ್ಯಾಗಾರ

    June 30, 2026

    ಜುಲೈ 4ರಂದು ಹೇರೂರಿನಲ್ಲಿ ವಿಶೇಷ ಉಪನ್ಯಾಸ, ಸಂವಾದ ಕಾರ್ಯಕ್ರಮ

    June 30, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಐದನೇ ಶಾಖೆ ಉಪ್ಪಿನಂಗಡಿಯಲ್ಲಿ ಜುಲೈ 4ರಂದು ಲೋಕಾರ್ಪಣೆ

    June 30, 2026

    ಕಥೊಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬ್ರಹ್ಮಾವರದ ಸಿಬ್ಬಂದಿ ತರಬೇತಿ ಕಾರ್ಯಾಗಾರ

    June 30, 2026

    ಜುಲೈ 4ರಂದು ಹೇರೂರಿನಲ್ಲಿ ವಿಶೇಷ ಉಪನ್ಯಾಸ, ಸಂವಾದ ಕಾರ್ಯಕ್ರಮ

    June 30, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.