ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
https://chat.whatsapp.com/FCEnlTkAKCC0MGPhXtX4i4
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಗೂ 2025ನೇ ಸಾಲಿನ ಅಂತಿಮ ಪದವಿಯಲ್ಲಿ ಶೇ.90 ಮೇಲ್ಪಟ್ಟು ಅಂಕ ಗಳಿಸಿದ ಸಂಘದ ಸದ್ಯಸರ ಮಕ್ಕಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಪ್ರತಿಭಾ ಪುರಸ್ಕಾರದ ಅರ್ಜಿಗಳು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಜುಲೈ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com

