Close Menu
    Top News

    ಇಂದು ಎನ್‌ಸಿಯುಐ ಆಡಳಿತ ಮಂಡಳಿ ಚುನಾವಣೆ

    July 18, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ಗ್ರಾಹಕರ ಸಭೆ

    July 17, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ಗೆ ವಿಶಿಷ್ಟ ಸೇವಾ ಪ್ರಶಸ್ತಿ

    July 15, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ಗ್ರಾಹಕರ ಸಭೆ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ಗ್ರಾಹಕರ ಸಭೆ

    adminBy adminJuly 17, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಕೃಷ್ಣಾಪುರ ಶಾಖೆಯಲ್ಲಿ ಜರುಗಿತು.

    https://chat.whatsapp.com/FCEnlTkAKCC0MGPhXtX4i4
    ಸಂಘದ ಗ್ರಾಹಕರಾದ ಪಿ.ಕೆ ಉಪಾಧ್ಯಾಯ, ಅನಿಲ್ ಕುಮಾರ್, ಬಾಲಚಂದ್ರ ಪಣಂಬೂರು, ಶೋಭಾ, ಅಬ್ದುಲ್ ಖಾದರ್ ಮತ್ತು ಎಚ್. ಆರ್ ಯದುನಂದಿನಿ ಇವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಸದಸ್ಯ ಪಿ.ಕೆ ಉಪಾಧ್ಯಾಯ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೃಷ್ಣಾಪುರ ಪರಿಸರದಲ್ಲಿ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದ್ದು, ದೈನಂದಿನ ವ್ಯವಹಾರಕ್ಕೆ ಉತ್ತಮ ಸೊಸೈಟಿಯಾಗಿದೆ. ಇನ್ನಷ್ಟು ಶಾಖೆಗಳನ್ನು ಗ್ರಾಮಾಂತರ ಪ್ರದೇಶಗಳಲ್ಲಿ ತೆರೆಯಲಿ ಎಂದು ಶುಭ ಹಾರೈಸಿದರು. ಅನಿಲ್ ಕುಮಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಗ್ರಾಹಕ-ಸ್ನೇಹಿ ಸಹಕಾರಿ ಸಂಘವಾಗಿದ್ದು, ಶಾಖೆಗಳಿಗೆ ಭೇಟಿ ನೀಡಿದಾಗ ಸಿಬ್ಬಂದಿಗಳ ಸಹಕಾರ ಅತ್ಯುತ್ತಮವಾಗಿದ್ದು, ನಗುಮುಖದಿಂದ ಸೇವೆ ನೀಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿ ಹೊಂದಲು ಸಾಧ್ಯವಾಗಿದೆ. ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತ ಬರುತ್ತಿದೆ. ಸಂಘದ ಸದಸ್ಯರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ. ಗ್ರಾಹಕರಿಗೆ ಅಗತ್ಯ ಸಂದರ್ಭಗಳಲ್ಲಿ ಮನೆ ಬಾಗಿಲಿಗೆ ಸೇವೆ ನೀಡಲಾಗುತ್ತಿದೆ. ಕೃಷ್ಣಾಪುರ ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಟ ಮೌಲ್ಯವನ್ನು ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು ಎಂದರು.
    ಸಂಘದ ನಿರ್ದೇಶಕರಾದ ರಮಾನಾಥ ಸನಿಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಕೃಷ್ಣಾಪುರ ಶಾಖೆಯ ಸಿಬ್ಬಂದಿ ಅಶ್ವಿನಿ ಸ್ವಾಗತಿಸಿ, ಶಾಖಾಧಿಕಾರಿ ಸುಜಾತಾ ಕಾರ್ಯಕ್ರಮ ನಿರೂಪಿಸಿದರು.

    Athmashakthi Vividhoddesha Sahakara Sangha Chittaranjan Bolar Co Operative ministry Cooperative Cooperative Department Cooperative Registrar Krishnapura Branch
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ಗೆ ವಿಶಿಷ್ಟ ಸೇವಾ ಪ್ರಶಸ್ತಿ
    Next Article ಇಂದು ಎನ್‌ಸಿಯುಐ ಆಡಳಿತ ಮಂಡಳಿ ಚುನಾವಣೆ

    Related Posts

    ಇಂದು ಎನ್‌ಸಿಯುಐ ಆಡಳಿತ ಮಂಡಳಿ ಚುನಾವಣೆ

    July 18, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ಗೆ ವಿಶಿಷ್ಟ ಸೇವಾ ಪ್ರಶಸ್ತಿ

    July 15, 2026

    ಶ್ರೀಶಾ ಸೌಹಾರ್ದ ಸೊಸೈಟಿ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಉದಯವಾಣಿ ಶಿಕ್ಷಣ ಮಾರ್ಗದರ್ಶಿ ವಿತರಣೆ

    July 13, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಇಂದು ಎನ್‌ಸಿಯುಐ ಆಡಳಿತ ಮಂಡಳಿ ಚುನಾವಣೆ

    July 18, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ಗ್ರಾಹಕರ ಸಭೆ

    July 17, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ಗೆ ವಿಶಿಷ್ಟ ಸೇವಾ ಪ್ರಶಸ್ತಿ

    July 15, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.