Close Menu
    Top News

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026

    ಸೌಹಾರ್ದ ಕಾಯ್ದೆಯ ಚೌಕಟ್ಟಿನಲ್ಲಿ ಸಹಕಾರ ಸಂಘಗಳ ಅಭಿವೃದ್ಧಿ

    July 21, 2026

    ಮಂತ್ರಾಲಯ ಬಳಿ ಅಪಘಾತ; ಮಂಗಳೂರು ಹಾಪ್‌ಕಾಮ್ಸ್‌ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃತ್ಯು

    July 21, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉನ್ನತ ಡಿಪ್ಲೊಮಾ 9ನೇ ಬ್ಯಾಚ್ ಉದ್ಘಾಟನಾ ಸಮಾರಂಭ
    News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉನ್ನತ ಡಿಪ್ಲೊಮಾ 9ನೇ ಬ್ಯಾಚ್ ಉದ್ಘಾಟನಾ ಸಮಾರಂಭ

    adminBy adminJuly 21, 2026

    ಮಂಗಳೂರು: ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಸಮನ್ವಯದಲ್ಲಿ ನಡೆಸಲ್ಪಡುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾ ಇದರ 9ನೇ ಬ್ಯಾಚ್ ಹಾಗೂ 74 ಮತ್ತು 75ನೇ ಅಧಿವೇಶನದ ಉದ್ಘಾಟನಾ ಸಮಾರಂಭ ಭಾನುವಾರದಂದು ಪಡೀಲ್‌ನ ಆತ್ಮಶಕ್ತಿ ಸೌಧದಲ್ಲಿ ಜರುಗಿತು.

    https://chat.whatsapp.com/FCEnlTkAKCC0MGPhXtX4i4
    ಶಿಕ್ಷಣಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸುವ ಮುಖಾಂತರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಪ್ರಾಸ್ತಾವಿಕ ಮಾತನಾಡಿ ನವದೆಹಲಿಯ ನ್ಯಾಷನಲ್ ಕೌನ್ಸಿಲ್ ಫಾರ್ ಕೋ-ಆಪರೇಟಿವ್ ಟ್ರೇನಿಂಗ್ (ಎನ್.ಸಿ.ಸಿ.ಟಿ) ಇದರ ಅಂಗಸಂಸ್ಥೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಂ) ಬೆಂಗಳೂರು, ಇವರಿಂದ ನಡೆಸಲ್ಪಡುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾ ತರಬೇತಿಯನ್ನು ಕಳೆದ ಹತ್ತು ವರ್ಷಗಳಿಂದ ಮಂಗಳೂರನ್ನು ಕೇಂದ್ರೀಕೃತವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯ ಸಹಕಾರಿಗಳಿಗೆ ನೆರವಾಗುವ ನಿಟ್ಟಿನಲ್ಲಿ ನಿರಂತರವಾಗಿ ನಡೆಸುತ್ತ ಬರಲಾಗುತ್ತಿದೆ. ಸಹಕಾರ ಸಂಘದ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ಮತ್ತು ಸಿಬ್ಬಂದಿಗಳ ಹುದ್ದೆಯ ಪದೋನ್ನತಿಯಲ್ಲಿ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾಕ್ಕೆ ಪ್ರಾಶಸ್ತ್ಯ ನೀಡಲಾಗುತ್ತಿದೆ. ಈಗಾಗಲೇ ಸುಮಾರು 1000ಕ್ಕೂ ಮಿಕ್ಕಿ ಶಿಕ್ಷಣಾರ್ಥಿಗಳು ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೊಮಾ ತರಬೇತಿ ಪಡೆದಿದ್ದು, 500ಕ್ಕೂ ಮಿಕ್ಕಿ ಶಿಕ್ಷಣಾರ್ಥಿಗಳು ಪದೋನ್ನತಿ ಹೊಂದಿದ್ದು, 40ಕ್ಕೂ ಮಿಕ್ಕಿ ಶಿಕ್ಷಣಾರ್ಥಿಗಳು ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಪದೋನ್ನತಿ ಹೊಂದಿರುತ್ತಾರೆ ಎಂದು ತಿಳಿಸಿದರು.

    ಆರ್.ಐ.ಸಿ.ಎಂ ಬೆಂಗಳೂರು ಇದರ ತರಬೇತಿ ಸಮನ್ವಯ ಅಧಿಕಾರಿ ಹಾಗೂ ಉಪನ್ಯಾಸಕ ಸುರೇಶ್ ಪಿ.ಎನ್. ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಂ) ಬೆಂಗಳೂರು, ಇದರ ಉಪನಿರ್ದೇಶಕರಾಗಿ ಪದೋನ್ನತಿ ಹೊಂದಿರುವುದಕ್ಕೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. 74 ಮತ್ತು 75ನೇ ಅಧಿವೇಶನದಲ್ಲಿ ಇತರೆ ಸಹಕಾರ ಸಂಘದ ಸಿಬ್ಬಂದಿಗಳು ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸೇರಿದಂತೆ ಒಟ್ಟು 101 ಶಿಕ್ಷಣಾರ್ಥಿಗಳು ನೋಂದಾಯಿಸಿರುತ್ತಾರೆ.
    ಆತ್ಮಶಕ್ತಿ ವಿವಿಧೋದ್ದೋಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ, ಆರ್.ಐ.ಸಿ.ಎಂ ಬೆಂಗಳೂರು ಇದರ ತರಬೇತಿ ಸಮನ್ವಯ ಅಧಿಕಾರಿ ಹಾಗೂ ಉಪನ್ಯಾಸಕರಾದ ಡಾ. ಜಯಪ್ರಕಾಶ್ ಎಂ ಹಾಗೂ ಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

    Athmashakthi Vividhoddesha Sahakara Sangha HDCM National Council for Co Operative Traninig RICM
    Previous Articleಇಂದು ಎನ್‌ಸಿಯುಐ ಆಡಳಿತ ಮಂಡಳಿ ಚುನಾವಣೆ
    Next Article ಎನ್‌ಸಿಯುಐ ಚುನಾವಣೆ: ಕರ್ನಾಟಕದ ಎಚ್‌.ಕೆ ಪಾಟೀಲ್‌, ಅಣ್ಣಾಸಾಹೇಬ್‌ ಜೊಲ್ಲೆ ಜಯಭೇರಿ

    Related Posts

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026

    ಸೌಹಾರ್ದ ಕಾಯ್ದೆಯ ಚೌಕಟ್ಟಿನಲ್ಲಿ ಸಹಕಾರ ಸಂಘಗಳ ಅಭಿವೃದ್ಧಿ

    July 21, 2026

    ಮಂತ್ರಾಲಯ ಬಳಿ ಅಪಘಾತ; ಮಂಗಳೂರು ಹಾಪ್‌ಕಾಮ್ಸ್‌ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃತ್ಯು

    July 21, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026

    ಸೌಹಾರ್ದ ಕಾಯ್ದೆಯ ಚೌಕಟ್ಟಿನಲ್ಲಿ ಸಹಕಾರ ಸಂಘಗಳ ಅಭಿವೃದ್ಧಿ

    July 21, 2026

    ಮಂತ್ರಾಲಯ ಬಳಿ ಅಪಘಾತ; ಮಂಗಳೂರು ಹಾಪ್‌ಕಾಮ್ಸ್‌ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃತ್ಯು

    July 21, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.