ಮಂಗಳೂರು: 1977ರಲ್ಲಿ ಕಾರ್ಯಾರಂಭ ಮಾಡಿರುವ ಭಗವತೀ ಸಹಕಾರ ಬ್ಯಾಂಕಿನ 50ನೇ ವಾರ್ಷಿಕ ಮಹಾಸಭೆಯು ಆಗಸ್ಟ್ 9ರಂದು ಭಾನುವಾರ ಬೆಳಗ್ಗೆ 10.30ರಿಂದ ಮಂಗಳೂರಿನ ಕೊಡಿಯಾಲ್‌ಬೈಲ್‌ನ ಕೂಟಕ್ಕಳ ಆಡಿಟೋರಿಯಂನಲ್ಲಿ ನಡೆಯಲಿದೆ.
https://chat.whatsapp.com/FCEnlTkAKCC0MGPhXtX4i4
ಮಂಗಳೂರಿನ ಜಪ್ಪು ಮೋರ್ಗನ್ಸ್‌ಗೇಟ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಭಗವತೀ ಸಹಕಾರ ಬ್ಯಾಂಕ್‌ಗೆ ಈ ಬಾರಿ ಸುವರ್ಣ ಮಹೋತ್ಸವ ವರ್ಷವಾಗಿದೆ. ವಾರ್ಷಿಕ ಮಹಾಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಭಾಗವಹಿಸುವಂತೆ ಬ್ಯಾಂಕಿನ ಅಧ್ಯಕ್ಷರಾದ ಮಾಧವ ಬಿ.ಎಂ, ಉಪಾಧ್ಯಕ್ಷರಾದ ದೇವದಾಸ್ ಕೊಲ್ಯ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಸುಷ್ಮಾ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.





