ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಎಂಟನೇ ಶಾಖೆಯಾದ ದೇರಳಕಟ್ಟೆ ಶಾಖೆಯು 15ನೇ ವರ್ಷಕ್ಕೆ ಪದಾರ್ಪಣೆಗೈಯುತ್ತಿರುವ ಶುಭ ಸಂದರ್ಭದಲ್ಲಿ ನಾಳೆ (ಆಗಸ್ಟ್ 8) ಬೆಳಗ್ಗೆ 10.30ರಿಂದ ಅಸೈಗೋಳಿ ಬಂಟರ ಭವನದಲ್ಲಿ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
https://chat.whatsapp.com/FCEnlTkAKCC0MGPhXtX4i4
ಸಂಘದ ಬೆಳವಣಿಗೆಯಲ್ಲಿ ಪಾತ್ರ ವಹಿಸಿ ಸಂಘದ ಅದ್ಭುತವಾದ ಪ್ರಗತಿಗೆ ಕಾರಣರಾದ ಎಲ್ಲ ಸದಸ್ಯರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಸದಸ್ಯರೂ ಭಾಗವಹಿಸುವಂತೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಯವರು, ಶಾಖಾ ಪ್ರಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








