ವಾರ್ಷಿಕ ₹285 ಕೋಟಿ ವ್ಯವಹಾರ
ಉಡುಪಿ: ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. 2025–26ನೇ ಹಣಕಾಸು ವರ್ಷದಲ್ಲಿ ಸುಮಾರು ₹285 ಕೋಟಿ ಒಟ್ಟು ವ್ಯವಹಾರ ನಡೆಸಿದ್ದು, ₹1.25 ಕೋಟಿ ನಿವ್ವಳ ಲಾಭ ಗಳಿಸಿ ಗಮನಾರ್ಹ ಸಾಧನೆ ಮಾಡಿದೆ.
https://chat.whatsapp.com/FCEnlTkAKCC0MGPhXtX4i4
1997ರಲ್ಲಿ ಸ್ಥಾಪನೆಯಾದ ಈ ಸಹಕಾರ ಸಂಘವು ಸಹಕಾರ ಕ್ಷೇತ್ರದಲ್ಲಿ ಮೂರು ದಶಕಗಳ ಸೇವೆಯನ್ನು ಪೂರ್ಣಗೊಳಿಸುವ ಹೊಸ್ತಿಲಿನಲ್ಲಿದ್ದು, ತನ್ನ ಕಾರ್ಯವ್ಯಾಪ್ತಿಯನ್ನು ಉಡುಪಿ ಜಿಲ್ಲೆಯಾದ್ಯಂತ ವಿಸ್ತರಿಸಿದೆ. ಪ್ರಸ್ತುತ ಉಡುಪಿ, ಮಲ್ಪೆ, ಉದ್ಯಾವರ, ಶಿರ್ವ ಹಾಗೂ ಹೂಡೆ–ಕೆಮ್ಮಣ್ಣುವಿನಲ್ಲಿ ಒಟ್ಟು ಐದು ಶಾಖೆಗಳ ಮೂಲಕ ಸದಸ್ಯರು ಹಾಗೂ ಗ್ರಾಹಕರಿಗೆ ಗುಣಮಟ್ಟದ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದೆ.
ಸಂಘವು 8,187 ಸದಸ್ಯರನ್ನು ಹೊಂದಿದ್ದು, ₹1.20 ಕೋಟಿ ಪಾಲು ಬಂಡವಾಳ, ₹58.24 ಕೋಟಿ ಠೇವಣಿ, ₹49 ಕೋಟಿ ಹೊರಬಾಕಿ ಸಾಲ, ₹13.75 ಕೋಟಿ ಹೂಡಿಕೆ, ₹3.69 ಕೋಟಿ ನಿಧಿಗಳು ಹಾಗೂ ₹63.13 ಕೋಟಿ ದುಡಿಯುವ ಬಂಡವಾಳವನ್ನು ಹೊಂದಿದೆ. ಸಾಲ ವಸೂಲಾತಿಯಲ್ಲಿ 97 ಶೇಕಡಾ ಸಾಧನೆ ಮಾಡಿರುವ ಈ ಸಂಸ್ಥೆ, ಲೆಕ್ಕಪರಿಶೋಧನೆಯಲ್ಲಿ ಸತತವಾಗಿ ‘ಎ’ ಶ್ರೇಣಿ ಪಡೆದುಕೊಂಡಿದೆ.

ತನ್ನ ಉನ್ನತ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸತತ ಮೂರು ವರ್ಷಗಳ ಕಾಲ ಸಾಧನಾ ಪ್ರಶಸ್ತಿ ಪಡೆದುಕೊಂಡಿರುವ ಈ ಸಂಸ್ಥೆಯು, ಸಹಕಾರ ಕ್ಷೇತ್ರದಲ್ಲಿ ತನ್ನ ಉತ್ತಮ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದೆ. ಸಾಮಾಜಿಕ ಹೊಣೆಗಾರಿಕೆಗೆ ಒತ್ತು ನೀಡುತ್ತಿರುವ ಸಂಘವು ಪ್ರತಿವರ್ಷ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಅನಾರೋಗ್ಯ ಪೀಡಿತರು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯಧನ, ಜೊತೆಗೆ ಸಮಾಜಮುಖಿ ಕಾರ್ಯನಿರ್ವಹಿಸುವ ಸಂಘ–ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಾ ಬಂದಿದೆ.
ಮುಂದಿನ ವರ್ಷದೊಳಗೆ ಸ್ವಂತ ಆಡಳಿತ ಕಚೇರಿ ಕಟ್ಟಡ ನಿರ್ಮಾಣ ಹಾಗೂ ಎರಡು ಹೊಸ ಶಾಖೆಗಳ ಆರಂಭ ಮಾಡುವ ಗುರಿಯನ್ನು ಆಡಳಿತ ಮಂಡಳಿ ಹೊಂದಿದ್ದು, ಸದಸ್ಯರಿಗೆ ಇನ್ನಷ್ಟು ಆಧುನಿಕ ಹಾಗೂ ಗುಣಮಟ್ಟದ ಬ್ಯಾಂಕಿಂಗ್ ಸೇವೆಗಳನ್ನು ನೀಡಲು ಸಂಸ್ಥೆ ಬದ್ಧವಾಗಿದೆ. ಈ ಸಾಧನೆಗೆ ಕಾರಣರಾದ ಸದಸ್ಯರು, ಗ್ರಾಹಕರು ಹಾಗೂ ಸಿಬ್ಬಂದಿಗೆ ಸಂಘದ ಅಧ್ಯಕ್ಷರಾದ ಲೂವಿಸ್ ಲೋಬೋ, ಉಪಾಧ್ಯಕ್ಷರಾದ ಜೇಮ್ಸ್ ಡಿಸೋಜ ಹಾಗೂ ಆಡಳಿತ ಮಂಡಳಿಯವರು ಕೃತಜ್ಞತೆ ಸಲ್ಲಿಸಿದ್ದಾರೆ.
ಆಗಸ್ಟ್ 26ರಂದು ವಿದ್ಯಾರ್ಥಿವೇತನ ವಿತರಣೆ
ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯ ನಿಮಿತ್ತ ಆಗಸ್ಟ್ 26ರ ಬುಧವಾರ ಉಡುಪಿ ಶೋಕಮಾತಾ ಇಗರ್ಜಿಯ ಆವೆ ಮರಿಯಾ ಸಭಾಭವನದಲ್ಲಿ ಬೆಳಗ್ಗೆ 10.30ಕ್ಕೆ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. 31-03-2026ರೊಳಗಾಗಿ ಸಂಘದ ಸದಸ್ಯರಾದವರ ಮಕ್ಕಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ/ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ್ದರೆ ಅವರಿಗೆ ವಿದ್ಯಾರ್ಥಿವೇತನ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ತಮ್ಮ ಅರ್ಜಿಯೊಂದಿಗೆ ಪೋಷಕರ ಸದಸ್ಯ ಸಂಖ್ಯೆಯನ್ನು ನಮೂದಿಸಿ ಶಾಲೆಯ ಮುಖ್ಯೋಪಾಧ್ಯಾಯರ ದೃಢೀಕೃತ ಸಹಿಯೊಂದಿಗೆ ಸಂಬಂಧಿತ ಅಂಕಪಟ್ಟಿಯ ಪ್ರತಿಯನ್ನು ಆಯಾಯ ಶಾಖೆಗಳ ವ್ಯವಸ್ಥಾಪಕರಿಗೆ ಅಥವಾ ಸಂಘದ ಪ್ರಧಾನ ವ್ಯವಸ್ಥಾಪಕರಿಗೆ 20-08-2026ರೊಳಗೆ ಕಳುಹಿಸಿಕೊಡಲು ಸೂಚಿಸಲಾಗಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com







