Close Menu
    Top News

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡ ಯೋಧರನ್ನು ಸನ್ಮಾನಿಸುವುದು ನಮ್ಮ ಭಾಗ್ಯ
    News

    ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡ ಯೋಧರನ್ನು ಸನ್ಮಾನಿಸುವುದು ನಮ್ಮ ಭಾಗ್ಯ

    adminBy adminAugust 17, 2026

    ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಭಿಪ್ರಾಯ

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪ್ರಧಾನ ಕಚೇರಿಯಲ್ಲಿ ಶನಿವಾರ ಸ್ವಾತಂತ್ಯೋತ್ಸವ ಆಚರಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4
    ನಿವೃತ್ತ ಯೋಧ ರಾಜೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸೇನೆಯ ಸೇವೆಯಲ್ಲಿರುವಾಗ ತಾವು ಪಾಲ್ಗೊಂಡಿದ್ದ ಕಾರ್ಯಾಚರಣೆ ಬಗ್ಗೆ ಪ್ರಸ್ತಾಪಿಸಿ, ಕರಾವಳಿಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ 15 ವರ್ಷಗಳಲ್ಲಿ 35 ಶಾಖೆಗಳನ್ನು ಸ್ಥಾಪಿಸಿ, ಹೆಚ್ಚಿನ ಜನರಿಗೆ ಉದ್ಯೋಗಾವಕಾಶ ಕಲ್ಪಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು.


    ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ಪ್ರತಿ ವರ್ಷ ಸ್ವಾತಂತ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕಾಗಿ ಸೇವೆಗೈದ ಯೋಧರನ್ನು ಸನ್ಮಾನಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸುತ್ತ ಬರುತ್ತಿದೆ. ಈ ಬಾರಿಯ ಸ್ವಾತಂತ್ಯೋತ್ಸವದಲ್ಲಿ ನಮ್ಮ ಕರಾವಳಿಯ ಹೆಮ್ಮೆಯ ನಿವೃತ್ತ ಯೋಧ ರಾಜೇಶ್ ಅವರನ್ನು ಸನ್ಮಾನಿಸಲು ನಮ್ಮ ಸಂಘ ತುಂಬಾ ಹೆಮ್ಮೆ ಪಡುತ್ತಿದೆ. ದೇಶಕೋಸ್ಕರ ಹಲವು ಯುದ್ಧದಲ್ಲಿ ಭಾಗವಹಿಸಿ ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡ ಯೋಧರನ್ನು ಸನ್ಮಾನಿಸುವುದು ನಮ್ಮ ಭಾಗ್ಯ ಎಂದು ಹೇಳಿದರು.
    ನಿವೃತ್ತ ಯೋಧ ರಾಜೇಶ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
    ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಸಂಘದ ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್ ಕೊಂಡಾಣ, ಸೀತಾರಾಮ್ ಎನ್, ರಮಾನಾಥ್ ಸನಿಲ್, ದಿವಾಕರ್ ಬಿ.ಪಿ., ಗೋಪಾಲ್ ಎಮ್, ಉಮಾವತಿ, ಚಂದ್ರಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಗೌರವ ಅಧ್ಯಕ್ಷರಾದ ವಾಮನ್ ಕೆ.,
    ಅಧ್ಯಕ್ಷರಾದ ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.
    ಸಂಘದ ಶಾಖಾಧಿಕಾರಿ ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

    Athmashakthi Vividhoddesha Sahakara Sangha Banking Chittaranjan Bolar Co Operative ministry Cooperative Cooperative Department Cooperative Registrar Ex Military Rajesh Independence Day
    Previous Articleದಕ್ಷಿಣ ಕನ್ನಡ ಹಾಲು ಒಕ್ಕೂಟ ವತಿಯಿಂದ 10 ಎಂ.ಎಲ್ ನಂದಿನಿ ತುಪ್ಪ ಬಿಡುಗಡೆ
    Next Article ವಿಟ್ಲ ಗ್ರಾಮೀಣ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    Related Posts

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.