ವಿಟ್ಲ: ಇಲ್ಲಿನ ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.
https://chat.whatsapp.com/FCEnlTkAKCC0MGPhXtX4i4
ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ ಬಾಲಕೃಷ್ಣ ಗೌಡ ಪೊನ್ನೆತಡಿ ಅವರು ಧ್ವಜಾರೋಹಣ ನೆರವೇರಿಸಿ, ದೇಶಾಭಿಮಾನದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿ, ನೆರೆದಿದ್ದವರಲ್ಲಿ ದೇಶಭಕ್ತಿಯ ಸ್ಫೂರ್ತಿ ತುಂಬಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಜಗನ್ನಾಥ ಸಾಲ್ಯಾನ್ ಎಚ್., ಉಪಾಧ್ಯಕ್ಷರಾದ ಮನೋಜ್ ರಂಜನ್ ಕೆ.ಆರ್. ಹಾಗೂ ಆಡಳಿತ ಮಂಡಳಿ ಸದಸ್ಯರಾದ ಜಯಂತಿ ಎಚ್. ರಾವ್, ಶುಭಲಕ್ಷ್ಮಿ, ದಯಾನಂದ ಆಳ್ವ ಕೆ., ಪೂವಪ್ಪ ಎಸ್., ದಿವಾಕರ ವಿ., ಕೇಶವ ಎ., ಭಾಸ್ಕರ್ ಶೆಟ್ಟಿ, ರಾಮದಾಸ ಶೆಣೈ, ಮೋಹನ್ ಕೆ.ಎಸ್. ಹಾಗೂ ಸತೀಶ್ ಪಿ. ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ. ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಯೋಧ ಬಾಲಕೃಷ್ಣ ಗೌಡ ಪೊನ್ನೆತಡಿ ಅವರನ್ನು ಸಂಘದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಹಾಸ ರಾಣ್ಯಡಿ ಕಾರ್ಯಕ್ರಮ ನಿರೂಪಿಸಿದರು.


